ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

Dearness Allowance: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಶೇ 11.15ರಿಂದ 21.50ಕ್ಕೆ ತುಟ್ಟಿಭತ್ಯೆಯನ್ನು ಹೆಚ್ಚಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಶೇ 11.15ರಿಂದ 21.50ಕ್ಕೆ ತುಟ್ಟಿಭತ್ಯೆಯನ್ನು ಹೆಚ್ಚಿಸಲಾಗಿದೆ.

ಕರ್ನಾಟಕ ಸರ್ಕಾರವು ಉದ್ಯೋಗಿಗಳಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡಲು ನಿರ್ಧರಿಸಿರುವ ವಿಷಯವನ್ನು ಜುಲೈ 21ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಹಿರಂಗಪಡಿಸಿತ್ತು.

ನಾವು ಮನವಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಗಳು ಈ ಸಂಬಂಧ ಹಣಕಾಸು ಇಲಾಖೆಗೆ ಆದೇಶ ನೀಡಿ ಡಿಎ ಹೆಚ್ಚಿಸಲು ಸೂಚಿಸಿದರು. ಕೊರೊನಾ ಪಿಡುಗಿನ ಕಾರಣ ಕಳೆದ ವರ್ಷವೂ ಡಿಎ ಹೆಚ್ಚಿಸಿರಲಿಲ್ಲ. ಮೂರು ಹಂತಗಳಲ್ಲಿ ಡಿಎ ಹೆಚ್ಚಳವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಯನ್ನು ವಿನಂತಿಸಲಾಗಿತ್ತು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದರು.

ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ನೌಕರರ ಸಂಘ ಹೇಳಿತ್ತು.

(Dearness Allowance of Karnataka State Government Employees Hike)

ಇದನ್ನೂ ಓದಿ: Dearness Allowance: ಜುಲೈ 1ರಿಂದಲೇ ಕೇಂದ್ರ ಸರ್ಕಾರಿ ನೌಕರರಿಗೆ ಪರಿಷ್ಕೃತ ತುಟ್ಟಿಭತ್ಯೆ ಪಾವತಿ

ಇದನ್ನೂ ಓದಿ: 7th pay commission: ಕೇಂದ್ರ ಸರ್ಕಾರಿ ನೌಕರರಿಗೆ ಜೂನ್​ನಲ್ಲಿ ಡಿಎ ಹೆಚ್ಚಳ ಘೋಷಣೆ ಮಾಡುವ ಸಾಧ್ಯತೆ

Click on your DTH Provider to Add TV9 Kannada