AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಗೆ ಮಾಸಿಕ 2000ರೂ. ಪಿಂಚಣಿ: ಯಾವೆಲ್ಲಾ ದಾಖಲೆಗಳು ಬೇಕು?

ಬರ ಪರಿಸ್ಥಿತಿ ಹಾಗೂ ಆರ್ಥಿಕ ಸಂಕಷ್ಟದಿಂದಾಗಿ ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕದ ರೈತರ ಕುಟುಂಬಗಳ ಹಿತರಕ್ಷಣೆಗಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಂಕಷ್ಟದಲ್ಲಿರುವ ಮೃತ ರೈತರ ಪತ್ನಿಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರದಿಂದ ಮಾಸಿಕ 2000 ರೂ.ವಿಶೇಷ ವಿಧವಾ ವೇತನ (ಪಿಂಚಣಿ) ಯೋಜನೆಯನ್ನು ಜಾರಿಗೊಳಿಸಲಾಗಿದೆ. ಹಾಗಾದ್ರೆ, ಅರ್​ಜಿ ಸಲ್ಲಿಸುವುದ್ಹೇಗೆ? ಇದಕ್ಕೆ ಏನೆಲ್ಲಾ ದಾಖಲೆಗಳು ಬೇಕು ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಗೆ ಮಾಸಿಕ 2000ರೂ. ಪಿಂಚಣಿ: ಯಾವೆಲ್ಲಾ ದಾಖಲೆಗಳು ಬೇಕು?
Money
ರಮೇಶ್ ಬಿ. ಜವಳಗೇರಾ
|

Updated on:May 22, 2026 | 6:10 PM

Share

ಬೆಂಗಳೂರು, (ಮೇ 22): ಸಾಮಾಜಿಕ ಭದ್ರತೆ ಮತ್ತು ಪಿಂಚನೆಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಸಾಲ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ (Farmers) ಪತ್ನಿಯರಿಗೆ (Wife) ವಿಧವಾ ವೇತನ ಯೋಜನೆಯನ್ನು (Pension Scheme) ಜಾರಿ ಮಾಡಲಾಗಿದ್ದು, ಯೋಜನೆಯಲ್ಲಿ ರೈತನ ಮಡದಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲಾಗುತ್ತದೆ. ಕೃಷಿ ಇಲಾಖೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳಡಿಯ ಗುರುತಿಸಿ ಪರಿಹಾರ ಪಡೆದಿರುವ ಮೃತ ರೈತರ ಪತ್ನಿಗೆ ಮಾಸಿಕ ಪಿಂಚಣಿ ನೀಡಲಾಗುತ್ತಿದ್ದು, ಈ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳ ಸಮೇತ ಎಲ್ಲಿ ಅರ್ಜಿ ಸಲ್ಲಿಸಬೇಕು ಎನ್ನುವುದು ಈ ಕೆಳಗಿನಂತಿದೆ.

ಮುಖ್ಯಾಂಶಗಳು

  • ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ಪಿಂಚಣಿ
  • ಮೃತ ರೈತರ ಪತ್ನಿಯರಿಗೆ ಮಾಸಿಕ 2000 ರೂ.ವಿಶೇಷ ವಿಧವಾ ವೇತನ (ಪಿಂಚಣಿ) ಯೋಜನೆ
  • ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳ ಹಿತರಕ್ಷಣೆಗಾಗಿ ಈ ಕ್ರಮ

ರಾಜ್ಯದಲ್ಲಿ ಇರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಆತ್ಮಹತ್ಯೆ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳ ಹಿತಾಶಕ್ತಿ ಕಾಪಾಡುವ ನಿಟ್ಟಿನಲ್ಲಿ ಈಗಾಗಲೇ ಕೃಷಿ ಇಲಾಖೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳಡಿ ಗುರುತಿಸಿ ಪರಿಹಾರ ಪಡೆದಿರುವ ಮೃತ ರೈತರ ಪತ್ನಿಗೆ ಮಾಸಿಕ 2000 ರೂ. ಪಿಂಚಣಿ ನೀಡಲಾಗುತ್ತಿದೆ.

ಈ ಯೋಜನೆಗೆ ಯಾರು ಅರ್ಹರು?

ಅರ್ಹತೆ ಮತ್ತು ಮಾನದಂಡಗಳು: ಈ ವಿಶೇಷ ಪಿಂಚಣಿ ಸೌಲಭ್ಯವನ್ನು ಪಡೆಯಲು, ಮೃತ ರೈತರ ಕುಟುಂಬದವರು ಈಗಾಗಲೇ ಕೃಷಿ ಇಲಾಖೆಯ ನಿಯಮಾವಳಿಗಳ ಅಡಿಯಲ್ಲಿ ರೈತರ ಆತ್ಮಹತ್ಯೆ ಪ್ರಕರಣವೆಂದು ಗುರುತಿಸಲ್ಪಟ್ಟು, ಸರ್ಕಾರದ ಅಧಿಕೃತ ಪರಿಹಾರ ಧನವನ್ನು ಪಡೆದಿರಬೇಕು. ಅಂತಹ ಮೃತ ರೈತರ ಪತ್ನಿಯರು ಮಾತ್ರ ಈ ಮಾಸಿಕ ಪಿಂಚಣಿಗೆ ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಕೆ ಎಲ್ಲಿ?

ಅರ್ಹ ಫಲಾನುಭವಿಗಳು ತಮ್ಮ ವಾಸಸ್ಥಳದ ವ್ಯಾಪ್ತಿಯಲ್ಲಿ ಬರುವ ‘ಅಟಲ್ ಜೀ ಜನಸ್ನೇಹಿ ಕೇಂದ್ರ’ (ನಾಡಕಚೇರಿ) ಗಳ ಮೂಲಕ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಬೇಕಾಗುವ ಮುಖ್ಯ ದಾಖಲೆಗಳು

  • ಕೃಷಿ ಇಲಾಖೆಯಿಂದ ಆತ್ಮಹತ್ಯೆ ಪರಿಹಾರ ಧನ ಪಡೆದಿರುವ ಅಧಿಕೃತ ಆದೇಶದ ಪ್ರತಿ.
  • ಅಟಲ್ ಜೀ ಜನಸ್ನೇಹಿ ಕೇಂದ್ರದ ನಿಗದಿತ ಅರ್ಜಿ ನಮೂನೆ.
  • ಅರ್ಜಿದಾರರ ಆಧಾರ್ ಕಾರ್ಡ್.
  • ಪಿಂಚಣಿ ಹಣ ಜಮೆಯಾಗಲು ಬ್ಯಾಂಕ್ ಅಥವಾ ಅಂಚೆ ಕಚೇರಿಯ (Post Office) ಖಾತೆ ವಿವರಗಳು.

ಆರ್ಥಿಕ ನಷ್ಟ ಹಾಗೂ ಕುಟುಂಬದ ಯಜಮಾನನನ್ನು ಕಳೆದುಕೊಂಡು ಕಂಗಾಲಾಗಿರುವ ರೈತ ಮಹಿಳೆಯರಿಗೆ ನೆರವಾಗಲು ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಅರ್ಹರು ಇದರ ಸೌಲಭ್ಯವನ್ನು ಪಡೆದುಕೊಳ್ಳಲು ಸರ್ಕಾರ ಕೋರಿದೆ.

ಕರ್ನಾಟಕದ ಮ್ತತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Fri, 22 May 26

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್