ಮಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಶವಪತ್ತೆ

ಇವತ್ತು ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದ ಪ್ರೇಕ್ಷಾ ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನ ತಾಯಿ ಊಟಕ್ಕೆಂದು ಮನೆಗೆ ಬಂದ ಸಂದರ್ಭ ನೇಣು ಬಿಗಿದ ಸ್ಥಿತಿಯಲ್ಲಿ ಪ್ರೇಕ್ಷಾ ಮೃತದೇಹ ಪತ್ತೆಯಾಗಿದೆ.

ಮಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಶವಪತ್ತೆ
ಪ್ರೇಕ್ಷಾ (20)
Follow us
preethi shettigar
| Updated By: ರಾಜೇಶ್ ದುಗ್ಗುಮನೆ

Updated on: Mar 10, 2021 | 7:11 PM

ದಕ್ಷಿಣ ಕನ್ನಡ: ಜಿಲ್ಲೆಯ ಹೊರವಲಯದ ಕುಂಪಲ ಆಶ್ರಯಕಾಲೋನಿಯ ಮನೆಯೊಂದರಲ್ಲಿ ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಚಿತ್ತಪ್ರಸಾದ್ ಎಂಬುವವರ ಪುತ್ರಿ ಪ್ರೇಕ್ಷಾ(20) ಮೃತಪಟ್ಟ ಯುವತಿ. ಸದ್ಯ ಘಟನಾ ಸ್ಥಳಕ್ಕೆ ಮಂಗಳೂರಿನ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬುಧವಾರ ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದ ಪ್ರೇಕ್ಷಾ ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನ ತಾಯಿ ಊಟಕ್ಕೆಂದು ಮನೆಗೆ ಬಂದ ಸಂದರ್ಭ ನೇಣು ಬಿಗಿದ ಸ್ಥಿತಿಯಲ್ಲಿ ಪ್ರೇಕ್ಷಾ ಮೃತದೇಹ ಪತ್ತೆಯಾಗಿದೆ.

ಹಾವೇರಿಯಲ್ಲಿ ಬಾಣಂತಿ ಸಾವು: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದಲ್ಲಿ ಹೆರಿಗೆ ಆದ ಕೆಲ ಗಂಟೆಗಳಲ್ಲಿ ಬಾಣಂತಿ ಸಾವಿಗೀಡಾಗಿದ್ದಾರೆ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆಸ್ಪತ್ರೆ ಬಳಿ ಮೃತದೇಹವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಪ್ರತಿಭಟನೆ ನಡೆಸಿದ್ದು,ವೈದ್ಯರು ಹಾಗೂ ಸಿಬ್ಬಂದಿ ಸರಿಯಾಗಿ ಉಪಚಾರ ಮಾಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

bananthi death

ಬಾಣಂತಿ ಶವ ಆಸ್ಪತ್ರೆ ಮುಂದೆ ಇಟ್ಟು ಪ್ರತಿಭಟನೆ ನಡೆಸುತ್ತಿರುವ ಕುಟುಂಬಸ್ಥರು

ಮಾರ್ಚ್ 8ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ನಾಗಮ್ಮ (32), ಹೆರಿಗೆ ಆದ ಕೆಲ ಗಂಟೆಗಳಲ್ಲಿ ನಾಗಮ್ಮಳ ಮಾಂಸ, ಕರುಳು ಹೊರಬಂದಿತ್ತು. ಬಳಿಕ ಮಾಂಸ ಮತ್ತು ಕರುಳು ಹೊರಗೆ ಬಂದು ಸೀರಿಯಸ್ ನಾಗಮ್ಮ ಸ್ಥಿತಿ ಸಿರಿಯಸ್ ಆಗುತ್ತಿದ್ದಂತೆ ಬಾಣಂತಿಯನ್ನ ಮಾರ್ಚ್ 9,2021ರಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಬಾಣಂತಿ ನಾಗಮ್ಮ ಮೃತಪಟ್ಟಿದ್ದಾರೆ. ಆಸ್ಪತ್ರೆ ವೈದ್ಯ ಡಾ. ಚಿದಾನಂದ ಮತ್ತು ನರ್ಸ್​ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: India vs England: ಪತಿ ಕೊಹ್ಲಿ ನೋಡಲು ತನ್ನ ಮಗುವಿನೊಂದಿಗೆ ಅಹಮದಾಬಾದ್​ಗೆ ಹಾರಿದ ಬಾಣಂತಿ ಅನುಷ್ಕಾ

ಇದನ್ನೂ ಓದಿ:ಬೆಂಗಳೂರು; ಆರ್ಥಿಕ ಸಮಸ್ಯೆ, ವೇತನ ಹೆಚ್ಚಳ ಮಾಡದಿದ್ದಕ್ಕೆ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ