AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಮೃತರ ಮರಣ ವರದಿ ಮತ್ತು ಶವ ಸಂಸ್ಕಾರದ ವರದಿ ಪಡೆಯುವುದು ಕಡ್ಡಾಯ

ಮೃತರ ವಾರಸುದಾರರು ನೋಂದಣಾಧಿಕಾರಿ ಕಚೇರಿಯಲ್ಲಿ ಡೆತ್‌ಸರ್ಟಿಫಿಕೆಟ್ ಪಡೆಯಲು ಮರಣದ ವರದಿ ಮತ್ತು ಶವಸಂಸ್ಕಾರದ ವರದಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೊವಿಡ್​ನಿಂದ ಮೃತರ ಮರಣ ವರದಿ ಮತ್ತು ಶವ ಸಂಸ್ಕಾರದ ವರದಿ ಪಡೆಯುವುದು ಕಡ್ಡಾಯ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 18, 2021 | 9:40 PM

Share

ಬೆಂಗಳೂರು: ಕೊವಿಡ್‌ನಿಂದ ಬಲಿಯಾದವರ ಮರಣ ವರದಿ ಪತ್ರ ಮತ್ತು ಶವ ಸಂಸ್ಕಾರದ ವರದಿಗಳನ್ನು ವಾರಸುದಾರರು ಕಡ್ಡಾಯವಾಗಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಕೊವಿಡ್ ಸೋಂಕಿನಿಂದ ರೋಗಿ ಆಸ್ಪತ್ರೆಯಲ್ಲಿ ಮೃತಪಟ್ಟಲ್ಲಿ ಆಸ್ಪತ್ರೆ ಮುಖ್ಯಸ್ಥರು ಈ ವರದಿಗಳನ್ನು ಸೋಂಕಿತರ ಮನೆಯವರಿಗೆ ನೀಡಬೇಕು. ಮನೆಯಲ್ಲಿ ಮೃತಪಟ್ಟಲ್ಲಿ ಖಾಸಗಿ ವೈದ್ಯರಿಂದ ಮರಣದ ವರದಿ ಪಡೆಯಬೇಕು. ಗ್ರಾಮ ಲೆಕ್ಕಾಧಿಕಾರಿ ಶವಸಂಸ್ಕಾರದ ವರದಿಯನ್ನು ದೃಢೀಕರಿಸಬೇಕು ಎಂದು ಸರ್ಕಾರ ತಿಳಿಸಿದೆ.

ಮೃತರ ವಾರಸುದಾರರು ನೋಂದಣಾಧಿಕಾರಿ ಕಚೇರಿಯಲ್ಲಿ ಡೆತ್‌ಸರ್ಟಿಫಿಕೆಟ್ ಪಡೆಯಲು ಮರಣದ ವರದಿ ಮತ್ತು ಶವಸಂಸ್ಕಾರದ ವರದಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬ್ಲ್ಯಾಕ್​ ಫಂಗಸ್ ಚಿಕಿತ್ಸೆಗೆ ಮಾರ್ಗಸೂಚಿ ನಿಗದಿ ಕೊವಿಡ್ ಸೋಂಕಿತರಲ್ಲಿ ಕಾಣಿಸಿಕೊಳ್ಳಬಹುದಾದ ಬ್ಲ್ಯಾಕ್​ ಫಂಗಸ್​​ ಚಿಕಿತ್ಸೆಗೆ ಕರ್ನಾಟಕ ಸರ್ಕಾರ ಅಧಿಕೃತ ಮಾರ್ಗಸೂಚಿ ಪ್ರಕಟಿಸಿದೆ. ಬ್ಲ್ಯಾಕ್ ಫಂಗಸ್ ಕಂಡು ಬಂದವರಿಗೆ 14-21 ದಿನ ಚಿಕಿತ್ಸೆ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದ್ದು, ನಿಗದಿತ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ರಾಜ್ಯದ ಪ್ರಮುಖ 6 ಆಸ್ಪತ್ರೆಗಳಲ್ಲಿ ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ.

“ಬ್ಲಾಕ್‌ ಫಂಗಸ್ ರೋಗ ಸೂಚಿಸಬಹುದಾದ ರೋಗ”. ಎಲ್ಲಾ ಆಸ್ಪತ್ರೆಗಳು ರೋಗಿಗಳ ಮಾಹಿತಿ ಸಲ್ಲಿಸಬೇಕು. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬೇಕು  ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಚಿಕಿತ್ಸಾ ಸಾಮರ್ಥ್ಯ ಹೊಂದಿದ ಯಾವುದೇ ಆಸ್ಪತ್ರೆಯೂ  ಬ್ಲಾಕ್‌ ಫಂಗಸ್ ರೋಗಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆ ಆದೇಶದಲ್ಲಿ ಸ್ಪಷ್ಟ ಉಲ್ಲೇಖ ಮಾಡಲಾಗಿದೆ.

ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆ (BMCRI), ಮೈಸೂರು ಮೆಡಿಕಲ್ ಕಾಲೇಜು, ಹುಬ್ಬಳ್ಳಿಯ ಕಿಮ್ಸ್,  ಗುಲ್ಬರ್ಗಾ ಮೆಡಿಕಲ್ ಕಾಲೇಜು ಆಸ್ಪತ್ರೆ, ಶಿವಮೊಗ್ಗ ಮೆಡಿಕಲ್ ಕಾಲೇಜು, ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆ, ಕಲಬುರಗಿ ಮೆಡಿಕಲ್ ಕಾಲೇಜು, ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಮಾತ್ರ ಚಿಕಿತ್ಸೆ ನೀಡುವುದಾಗಿ ತಿಳಿಸಿದೆ. ಡಾ. ಎಚ್.ಎಸ್. ಸತೀಶ್ ಅಧ್ಯಕ್ಷತೆಯಲ್ಲಿ ಚಿಕಿತ್ಸೆ ವಿಧಾನ  ನಿಗದಿಪಡಿಸಲಾಗಿದೆ.

ಕೊವಿಡ್ ಸೋಂಕಿತರಿಗೆ ಬ್ಲ್ಯಾಕ್ ಫಂಗಸ್ ಬಂದ್ರೆ 3 ಆಸ್ಪತ್ರೆಗಳನ್ನು ಚಿಕಿತ್ಸೆಗೆಂದು ನಿಗದಿಪಡಿಸಲಾಗಿದ್ದು,  ವಿಕ್ಟೋರಿಯಾ ಆಸ್ಪತ್ರೆ  ಮತ್ತು ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ವಿಕ್ಟೋರಿಯಾ ಆಸ್ಪತ್ರೆ ಒಳಗೆ ನೆಫ್ರೋ ಯುರಾಲಜಿ ಕೇಂದ್ರ, ಟ್ರಾಮಾ ಕೇರ್, PMSSY ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.  ಕೊವಿಡ್ ಪಾಸಿಟಿವ್ ಇದ್ದು ಬ್ಲ್ಯಾಕ್ ಫಂಗಸ್‌ ಬಂದ್ರೆ ಅಲ್ಲೇ ಚಿಕಿತ್ಸೆ ನೀಡಲಾಗುತ್ತದೆ.  ಕೊವಿಡ್ ಗುಣಮುಖರಾದವರಿಗೆ  ಬ್ಲ್ಯಾಕ್ ಫಂಗಸ್‌ ಬಂದರೆ ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಇದನ್ನೂ ಓದಿ: ಕೊಪ್ಪಳ ಗವಿಮಠದಿಂದ ಸಮಾಜಮುಖಿ ಕಾರ್ಯ; 200 ಬೆಡ್​ಗಳ ಕೊವಿಡ್ ಕೇರ್ ಸೆಂಟರ್ ಆರಂಭ

‘ಗ್ರಾಮೀಣ ಭಾರತದಲ್ಲಿ ಕೊವಿಡ್​ನಿಂದಾಗಿ ಇಡೀ ಕುಟುಂಬಗಳೇ ಇಲ್ಲದಾಗಬಹುದು’ 

(death report is mandatory for one who died from Covid in Karnataka)

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ