Kannada Rajyotsava 2023: ಈ ಬಾರಿ 10 ಸಂಘ ಸಂಸ್ಥೆಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ

ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದೆ.ಪೈಕಿ ಪೈಕಿ ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Kannada Rajyotsava 2023: ಈ ಬಾರಿ 10 ಸಂಘ ಸಂಸ್ಥೆಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 26, 2023 | 2:31 PM

ಬೆಂಗಳೂರು, (ಅಕ್ಟೋಬರ್ 26): ಕರ್ನಾಟಕ ರಾಜ್ಯೋತ್ಸವ 2023 (Karnataka Rajyotsava) ಆಚರಣೆಗೆ ಕೆಲವೇ ದಿನಗಳು ಮಾತ್ರವೇ ಬಾಕಿ ಉಳಿದಿವೆ. ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದವರ ಪಟ್ಟಿ ಪ್ರಕಟವಾಗಬೇಕಿದೆ. ಈ ಸಂಬಂಧ ಇಂದು (ಗುರುವಾರ) ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು,  ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿದೆ. ಈ ಪೈಕಿ 10 ಸಂಘ ಸಂಸ್ಥೆಗಳಿಗೆ ವಿಶೇಷವಾದ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಇನ್ನು ಈ ಸಭೆಯಲ್ಲಿ ಪ್ರಶಸ್ತಿಗೆ ಆಯ್ಕೆ ಕೆಲ ಮಾನದಂಡ, ಸಲಹೆ ಸೂಚನೆಗಳು ಸಿದ್ದರಾಮಯ್ಯ ನೀಡಿದ್ದಾರೆ.  ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇನ್ನು ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸುವುದರ ಜೊತೆಗೆ ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದಿದ್ದಾರೆ.

ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿದ್ದು, ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದೆ.ಪೈಕಿ ಪೈಕಿ ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ ಅಷ್ಟು ಪ್ರಶಸ್ತಿಗಳನ್ನು ನೀಡಲು ಈ ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿದೆ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಈ ಬಾರಿ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧಾರಿಸಲಾಗಿದ್ದು, 10 ಸಂಘ ಸಂಸ್ಥೆಗಳಿಗೆ ವಿಶೇಷವಾದ ಪ್ರಶಸ್ತಿ ನೀಡಲು ತೀರ್ಮಾನವಾಗಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಒಟ್ಟು 3,523 ಅರ್ಜಿಗಳು ಬಂದಿತ್ತು. ಶಿಪಾರಸ್ಸು ಬಂದಿದ್ದು 26,555. 28 ಸಮಿತಿ ಸದಸ್ಯರು ಈಗಾಗಲೇ ಅರ್ಹರನ್ನು ಆಯ್ಕೆ ಮಾಡಿದ್ದಾರೆ. ಸಮಿತಿ ಸದಸ್ಯರು ಕೂಡ ಸಿಎಂ ತೀರ್ಮಾನಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿದರು.

Published On - 2:23 pm, Thu, 26 October 23