ಕೇಂದ್ರ ಸರ್ಕಾರದ 3 ವಿಚಾರಗಳ ಬಗ್ಗೆ ನಿರ್ಣಯ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧಾರ

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯನ್ನು ಮಾಡಲಾಗಿದೆ. ಸಭೆಯಲ್ಲಿ ಒಟ್ಟು 17ಕ್ಕೂ ಹೆಚ್ಚು ವಿಷಯಗಳ ಮೇಲೆ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಲಾಗಿದೆ. ಅದರಲ್ಲಿ ಪ್ರಮುಖವಾಗಿ ಕೇಂದ್ರದ 3 ವಿಚಾರಕ್ಕೆ ವಿರೋಧಿಸಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಅನುಮೋದಿಸಲಾಗಿದೆ.

ಕೇಂದ್ರ ಸರ್ಕಾರದ 3 ವಿಚಾರಗಳ ಬಗ್ಗೆ ನಿರ್ಣಯ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧಾರ
ಕೇಂದ್ರ ಸರ್ಕಾರದ 3 ವಿಚಾರಗಳ ಬಗ್ಗೆ ನಿರ್ಣಯ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧಾರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 22, 2024 | 10:25 PM

ಬೆಂಗಳೂರು, ಜುಲೈ 22: ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ (cabinet meeting) ಮಾಡಲಾಗಿದೆ. ಒಟ್ಟು 17ಕ್ಕೂ ಹೆಚ್ಚು ವಿಷಯಗಳ ಮೇಲೆ ಇಂದಿನ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮೂರು ಪ್ರಮುಖ ವಿಚಾರಗಳ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ತೀರ್ಮಾನ ವಿರೋಧಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಮೂರು ನಿರ್ಣಯಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ ಸಭೆ

  • ನೀಟ್ ಪರೀಕ್ಷೆಯನ್ನು ವಿರೋಧಿಸಿ ನಿರ್ಣಯ
  • ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆ ವಿರೋಧಿಸಿ ನಿರ್ಣಯ
  • ಒನ್ ನೇಷನ್ ಒನ್ ಎಲೆಕ್ಷನ್ ತೀರ್ಮಾನಕ್ಕೂ ವಿರೋಧಿಸಿ ನಿರ್ಣಯ

ಇದನ್ನೂ ಓದಿ: ಸಿಟಿ ರವಿ, ರವಿ ಕುಮಾರ್​ಗೆ ಶಾಕ್: ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

ಕೇಂದ್ರದ 3 ವಿಚಾರಕ್ಕೆ ವಿರೋಧಿಸಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಅನುಮೋದನೆ ನೀಡಲಾಗಿದ್ದು, ನಾಳೆ ವಿಧಾನಸಭೆಯಲ್ಲಿ 3 ನಿರ್ಣಯ ಮಂಡಿಸಲು ಕ್ಯಾಬಿನೆಟ್ ನಿರ್ಧರಿಸಿದೆ.

ದಿ ಗ್ರೇಟರ್ ಬೆಂಗಳೂರು ಗೌವರ್ನೆನ್ಸ್ ಬಿಲ್​ಗೆ ಅನುಮೋದನೆ 

ದಿ ಗ್ರೇಟರ್ ಬೆಂಗಳೂರು ಗೌವರ್ನೆನ್ಸ್ ಬಿಲ್​-2024 ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ವಿವಿಧ ಹಂತದಲ್ಲಿ ಅಧಿಕಾರ ವಿಕೇಂದ್ರೀಕರಣ ಮತ್ತು ಸಿಟಿ ಕಾರ್ಪೊರೇಷನ್​ಗಳು ಬರಲಿವೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಮುಖ್ಯಮಂತ್ರಿ ಅಧ್ಯಕ್ಷರಾಗಿ ಇರಲಿದ್ದಾರೆ.

ಬೆಂಗಳೂರು ಮಹಾನಗರವನ್ನು 5 ವಿಭಾಗಗಳಾಗಿ ವಿಭಜಿಸುವ ವಿಧೇಯಕಕ್ಕೆ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಹಾಗಾಗಿ ವಿಧಾನಸಭೆಯಲ್ಲಿ ಬೆಂಗಳೂರು ವಿಭಜಿಸುವ ವಿಧೇಯಕ ಮಂಡನೆ ಆಗಲಿದೆ.

ಕನ್ನಡಿಗರಿಗೆ ಮೀಸಲಾತಿ ಬಗ್ಗೆ ಸಿಎಂಗೆ ಸಂತೋಷ್ ಲಾಡ್ ಮನವರಿಕೆ

ರಾಜ್ಯದಲ್ಲಿ ಖಾಸಗಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರವಾಗಿ ಕೂಡ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಚರ್ಚೆ ಆಗಿದ್ದು, ಸಿಎಂಗೆ ಕಾರ್ಮಿಕ ಇಲಾಖೆ ಸಚಿವ ಲಾಡ್ ಸಂಪೂರ್ಣ ವಿವರಣೆ ನೀಡಿದ್ದಾರೆ. ಅಗತ್ಯ ಮತ್ತು ಅನಿವಾರ್ಯತೆ ಹಿನ್ನೆಲೆಯಲ್ಲಿ ವಿವರಣೆ ನೀಡಿದ್ದು, ಕನ್ನಡಿಗರಿಗೆ ಹೇಗೆ ಅನುಕೂಲವಾಗುತ್ತದೆ ಅಂತಾ ಮನವರಿಕೆ ಮಾಡಿದ್ದಾರೆ.

ಇದನ್ನೂ ಓದಿ: Assembly session; ಭೋಜೇಗೌಡ ಮಾತ್ರ ವಿರೋಧ ಪಕ್ಷದ ಸದಸ್ಯರ ಪೈಕಿ ನನ್ನ ಜೊತೆ ಇರೋದು: ಸಿದ್ದರಾಮಯ್ಯ

ಸಚಿವ ಲಾಡ್ ಪ್ರಸ್ತಾಪಿಸಿದ ಬಹುತೇಕ ವಿಚಾರಗಳಿಗೆ ಸಿಎಂ ಸಮ್ಮತಿಸಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲು ತೀರ್ಮಾನಿಸಲಾಗಿದೆ. ಸಚಿವರ ನಡುವೆ ಈ ಸಂಬಂಧ ಜಟಾಪಟಿ ವಿಚಾರವನ್ನು ಲಾಡ್ ಪ್ರಸ್ತಾಪಕ್ಕೆ ಎಂ.ಬಿ.ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವರ ವಿರೋಧದ ನಡುವೆಯೂ ಸಿಎಂಗೆ ನೇರವಾಗಿ ಸಂತೋಷ್ ಲಾಡ್ ಮನವರಿಕೆ ಮಾಡಿದ್ದಾರೆ.

ಕೆಲಸದ ಅವಧಿ ಹೆಚ್ಚಳ ಬಗ್ಗೆ ಸಚಿವರ ನಡುವೆ ಜಟಾಪಟಿ 

ಕಾರ್ಮಿಕರ ಕೆಲಸದ ಅವಧಿ 12 ರಿಂದ 14 ಗಂಟೆಗೆ ಹೆಚ್ಚಳ ವಿಚಾರ ಸಭೆಯಲ್ಲಿ ಅನೌಪಚಾರಿಕ ಚರ್ಚೆ ಆಗಿದ್ದು, ಇದಕ್ಕೂ ಕೂಡ ಸಂಪುಟ ಸಭೆಯಲ್ಲಿ ಸಚಿವರ ನಡುವೆ ಜಟಾಪಟಿ ಉಂಟಾಗಿದೆ. ಐಟಿ ಬಿಟಿ ಕಂಪನಿಗಳಿಂದಲೇ ಉದ್ಯೋಗದ ಅವಧಿಗೆ ಸಂಬಂಧಪಟ್ಟಂತೆ ಇನ್ನಷ್ಟು ಮಾಹಿತಿ ತರಿಸಿಕೊಳ್ಳಲು ನಿರ್ಧರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.