ಗುಡ್​ನ್ಯೂಸ್: ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಆ ಮೂಲಕ ಸರ್ಕಾರಿ ಭೂಮಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್​ಗಳ ಜೊತೆ ಸಭೆ ನಡೆಸಿದ್ದೇನೆ ಎಂದಿದ್ದಾರೆ.

ಗುಡ್​ನ್ಯೂಸ್: ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ
ಗುಡ್​ನ್ಯೂಸ್: ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on: Oct 05, 2024 | 2:56 PM

ಬೆಂಗಳೂರು, ಅಕ್ಟೋಬರ್​ 05: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್​ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್​ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ (Krishna Byre Gowda) ಹೇಳಿದ್ದರು.  ಅದರಂತೆಯೆ ಇದೀಗ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಆ ಮೂಲಕ ರೈತರಿಗೆ ಸರ್ಕಾರ ಗುಡ್​ನ್ಯೂಸ್​ ನೀಡಿದೆ.

ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ. ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್​ಗಳ ಜೊತೆ ಸಭೆ ನಡೆಸಿದ್ದೇನೆ. ನಾಲ್ಕೈದು ತಿಂಗಳಲ್ಲಿ ಎಲ್ಲಾ ರೈತರ ಅರ್ಜಿ ಇತ್ಯರ್ಥ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸಭೆ: ಭೂ ಕಂದಾಯ(ತಿದ್ದುಪಡಿ) ವಿಧೇಯಕ ಅಂಗೀಕಾರ

ಈ ಬಾರಿ ಬಗರ್​ ಹುಕಂ ಕಮಿಟಿಯಲ್ಲಿ ಸಕ್ರಮದ ಜೊತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಡುತ್ತೇವೆ. ರೈತರ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಹಿಂದೆ ಭೂಮಿ ಮಂಜೂರಾಗಿ ಪೋಡಿ ದುರಸ್ತಿ ಆಗದ 10 ಲಕ್ಷ ಪ್ರಕರಣಗಳಿವೆ. ಇವರೆಲ್ಲರ ದುರಸ್ತಿ ಪ್ರಕ್ರಿಕೆಯೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಜಾತಿ ಜನಗಣತಿ ವರದಿ ಜಾರಿ ಬಗ್ಗೆ ನಾನು ನನ್ನ ಅಭಿಪ್ರಾಯ ಸಭೆಯಲ್ಲಿ ಹೇಳುತ್ತೇನೆ ಎಂದ ಕೃಷ್ಣಭೈರೇಗೌಡ 

ಜಾತಿ ಜನಗಣತಿ ವರದಿ ಜಾರಿ ವಿಚಾರವಾಗಿ ಮಾತನಾಡಿ ಅವರು, ಪರ ವಿರೋಧ ಚರ್ಚೆ ಆಗಲಿ. ಯಾರಿಗೆ ಆಗಲಿ ಅಭಿಪ್ರಾಯ ಹೇಳುವ ಅವಕಾಶ ಇದೆ. ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ಹೇಳುತ್ತೇವೆ. ನಾನು ನನ್ನ ಅಭಿಪ್ರಾಯ ಸಭೆಯಲ್ಲಿ ಹೇಳುತ್ತೇನೆ.

ಇದನ್ನೂ ಓದಿ: ರಾಷ್ಟ್ರೀಯ ರೈತರ ದಿನದಂದುಕರ್ನಾಟಕದ ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ

ನನ್ನ ಅಭಿಪ್ರಾಯ, ಸಂಪುಟ ತೀರ್ಮಾನ ಬಗ್ಗೆ ನಂತರ ಹಂಚಿಕೊಳುತ್ತೇನೆ. ನಾನೇನೇ ಹೇಳಿದರೂ ಸರ್ಕಾರದ ಹೇಳಿಕೆ ಆಗುತ್ತೆ. ಬೇರೆ ಸಚಿವರು ಏನೇ ಅಭಿಪ್ರಾಯ ಹೇಳಿದರೂ ಸಮಚಿತ್ತದಿಂದ ಸ್ವೀಕರಿಸುತ್ತೇವೆ. ಕೊನೆಗೆ ಸಂಪುಟದಲ್ಲಿ ಏನು ತೀರ್ಮಾನ ಆಗುತ್ತದೆ ನೋಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್