ಸಮನ್ವಯ ಸಮಿತಿ ರಚನೆಗೆ ತೀರ್ಮಾನ: ಜೆಡಿಎಸ್​-ಬಿಜೆಪಿ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು ಇಂತಿವೆ

ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ತಂತ್ರ-ಪ್ರತಿತಂತ್ರ ಜೋರಾಗುತ್ತಿದೆ. ರಾಜ್ಯದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್​ ಕಸರತ್ತು ನಡೆಸುತ್ತಿದೆ. ಇದರ ಮಧ್ಯೆ ಇಂದು ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಮಾಡಲಾಗಿದೆ. ಸಭೆಯಲ್ಲಿ ಎರಡು ಪಕ್ಷದ ನಾಯಕರು ಭಾಗಿಯಾಗಿದ್ದರು. ಈ ವೇಳೆ ಎನ್​​ಡಿಎ ಒಕ್ಕೂಟದ ರಾಜ್ಯಮಟ್ಟದ ಸಮನ್ವಯ ಸಮಿತಿ ರಚನೆಗೆ ತೀರ್ಮಾನ ಮಾಡಲಾಗಿದೆ.

ಸಮನ್ವಯ ಸಮಿತಿ ರಚನೆಗೆ ತೀರ್ಮಾನ: ಜೆಡಿಎಸ್​-ಬಿಜೆಪಿ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು ಇಂತಿವೆ
ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 29, 2024 | 4:32 PM

ಬೆಂಗಳೂರು, ಮಾರ್ಚ್ 29: ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ತಂತ್ರ-ಪ್ರತಿತಂತ್ರ ಜೋರಾಗುತ್ತಿದೆ. ರಾಜ್ಯದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್​ ಕಸರತ್ತು ನಡೆಸುತ್ತಿದೆ. ಇದರ ಮಧ್ಯೆ ಇಂದು ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ (JDS) ಸಮನ್ವಯ ಸಭೆ ಮಾಡಲಾಗಿದೆ. ಸಭೆಯಲ್ಲಿ ಎರಡು ಪಕ್ಷದ ನಾಯಕರು ಭಾಗಿಯಾಗಿದ್ದರು. ಈ ವೇಳೆ ಎನ್​​ಡಿಎ ಒಕ್ಕೂಟದ ರಾಜ್ಯಮಟ್ಟದ ಸಮನ್ವಯ ಸಮಿತಿ ರಚನೆಗೆ ತೀರ್ಮಾನ ಮಾಡಲಾಗಿದೆ. ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರವಾರು ಸಮನ್ವಯ ಸಭೆ ನಡೆಸುವಂತೆ ಸೂಚಿಸಲಾಗಿದೆ.

ಹೆಚ್​ಡಿ ದೇವೇಗೌಡ ಕೊಟ್ಟ ಸಂದೇಶ ಕಾರ್ಯಕರ್ತರಿಗೆ ದೊಡ್ಡ ಶಕ್ತಿ ಬಂದಿದೆ: ಬಿವೈ ವಿಜಯೇಂದ್ರ

ಬಿಜೆಪಿ, ಜೆಡಿಎಸ್​ ಸಮನ್ವಯ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ ಅವರು, ಹೆಚ್​ಡಿ ದೇವೇಗೌಡ ಅವರು ಕೊಟ್ಟ ಸಂದೇಶ ಕಾರ್ಯಕರ್ತರಿಗೆ ದೊಡ್ಡ ಶಕ್ತಿ ಬಂದಿದೆ. ಇಂದಿನ ಸಭೆಯಿಂದ 2 ಪಕ್ಷದ ಕಾರ್ಯಕರ್ತರಿಗೆ ಆನೆ ಬಲ ಬಂದಿದೆ. ನಮ್ಮ ವೈಯಕ್ತಿಕ ಸಮಸ್ಯೆ ಏನೇ ಇದ್ದರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ದೇಶಕ್ಕೋಸ್ಕರ ಒಟ್ಟಾಗಿ ಕೆಲಸ ಮಾಡುವ ನಿರ್ಣಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಇರಲಿದೆ: ಹೆಚ್​ಡಿ ಕುಮಾರಸ್ವಾಮಿ

ಅಮಿತ್ ಶಾ ಬಗ್ಗೆ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯತೀಂದ್ರ ಯೋಗ್ಯತೆ ಏನು ಅಂತಾ ಅರ್ಥ ಮಾಡಿಕೊಳ್ಳಬೇಕು. ಸಿಎಂ ಮಗನಾಗಿ ಹೇಳಿಕೆ ಕೊಡುವುದು ಸರಿಯಲ್ಲ. ಯಾರು ಗೂಂಡಾ ವರ್ತನೆ ಮಾಡ್ತಿದ್ದಾರೆಂದು ಜನರ ಕೇಳಿದ್ರೆ ಗೊತ್ತಾಗುತ್ತೆ. ಶಾಸಕರಾಗಿದ್ದವರು ಹೀಗೆ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.

ರಾಜ್ಯದ 28 ಕ್ಷೇತ್ರಗಳನ್ನೂ ಗೆಲ್ಲಬೇಕು ಎಂಬ ಸಂದೇಶ ನೀಡಿದ್ದೇವೆ: ಹೆಚ್​.ಡಿ.ದೇವೇಗೌಡ 

ಟಿವಿ9ಗೆ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಪ್ರತಿಕ್ರಿಯಿಸಿದ್ದು, ರಾಜ್ಯದ 28 ಕ್ಷೇತ್ರಗಳನ್ನೂ ಗೆಲ್ಲಬೇಕು ಎಂಬ ಸಂದೇಶ ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ನಡುವೆ ಇದ್ದ ವ್ಯತ್ಯಾಸ ಮರೆತು ಕೆಲಸ ಮಾಡಬೇಕು. JDS ಬಗ್ಗೆ ಲಘುವಾಗಿ ಮಾತನಾಡಿದ ಕಾಂಗ್ರೆಸ್​ಗೆ ಉತ್ತರ ಕೊಟ್ಟಿದ್ದೇನೆ. ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕೆಂದು ಸಂದೇಶ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಸಮನ್ವಯ ಸಭೆಯ ನಿರ್ಧಾರಗಳು

  • ಲೋಕಸಭಾ, ವಿಧಾನಸಭಾ ಕ್ಷೇತ್ರವಾರು ಉಸ್ತುವಾರಿ ನೇಮಕ
  • ಲೋಕಸಭಾ & ವಿಧಾನಸಭಾ ಕ್ಷೇತ್ರವಾರು ಸಮನ್ವಯ ಸಭೆ ನಡೆಸುವುದು
  • ಕರಪತ್ರಗಳಲ್ಲಿ ಉಭಯ ಪಕ್ಷಗಳ ಚಿಹ್ನೆ, ಬಾವುಟ, ಫೋಟೋಗಳ ಬಳಕೆ
  • ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ 2 ಪಕ್ಷಗಳ ಮುಖಂಡರು ಹಾಜರು
  • ಉಭಯ ಪಕ್ಷಗಳ ಕಚೇರಿಗಳನ್ನು NDA ಕಾರ್ಯಾಲಯವಾಗಿ ಮಾರ್ಪಾಡು
  • ಚುನಾವಣಾ ಪ್ರಚಾರದಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ ಬಳಕೆ ಮತ್ತು ಎರಡೂ ಪಕ್ಷಗಳ ಮುಖಂಡರ ಆಡಿಯೋ, ವೀಡಿಯೋ ಸಂದೇಶ ಬಳಕೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ