AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri: 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಭಿನ್ನವಾಗಿ ನಡೆಸಲು ನಿರ್ಧಾರ, 20 ಕೋಟಿ ರೂ. ಅನುದಾನ ಬಿಡುಗಡೆ

86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಬಗ್ಗೆ ಹಾವೇರಿಯ ನಗರದ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಸಭೆ ನಡೆಸಲಾಯಿತು. ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕುರಿತು ಚರ್ಚಿಸಿದ್ದೇವೆ. ಅಧಿಕಾರಿಗಳು ಹಾಗೂ ಕಸಾಪ ರಾಜ್ಯಾಧ್ಯಕ್ಷ ಜೊತೆಗೆ ಚರ್ಚೆದ್ದೇವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

Haveri: 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಭಿನ್ನವಾಗಿ ನಡೆಸಲು ನಿರ್ಧಾರ, 20 ಕೋಟಿ ರೂ. ಅನುದಾನ ಬಿಡುಗಡೆ
86th Kannada Sahitya Sammelan
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 29, 2022 | 2:53 PM

Share

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಬಗ್ಗೆ ಹಾವೇರಿಯ ನಗರದ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಸಭೆ ನಡೆಸಲಾಯಿತು. ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕುರಿತು ಚರ್ಚಿಸಿದ್ದೇವೆ, ಈ ಬಗ್ಗೆ ಕಸಾಪ ರಾಜ್ಯಾಧ್ಯಕ್ಷ ಜೊತೆಗೆ ಚರ್ಚೆಯನ್ನು ನಡೆಸಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಜಿಲ್ಲಾಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಜೊತೆ ಚರ್ಚೆ ನಡೆಸಲಾಗಿದೆ. ಕೊರೊನಾದಿಂದ 2 ವರ್ಷ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ. ಹಾವೇರಿಯಲ್ಲಿ 3 ದಿನ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಸಮ್ಮೇಳನದಲ್ಲಿ 5 ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ‌ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 20 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಮತ್ತು ಇದರ ಪೂರ್ವ ತಯಾರಿಯ ಬಗ್ಗೆ ಚರ್ಚಿಸುವಂತೆ, ಇದಕ್ಕೆ ಬೇಕಾದ ಕಾಮಗಾರಿ ತಕ್ಷಣವೇ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಮೂರು ದಿನಗಳ ಕಾಲ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ಒಂದು ಪ್ರಧಾನ ವೇದಿಕೆ, ಎರಡು ಉಪವೇದಿಕೆಗಳು ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಹೇಳಲಾಗಿದೆ. ಜನವರಿ 6ರಂದು ಅದ್ದೂರಿ ಮೆರವಣಿಗೆ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವಸತಿ ವ್ಯವಸ್ಥೆ ಮಾಡಲು ನಿರ್ಧಾರ ಮಾಡಲಾಗಿದೆ. ಐದು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಬಳಸಿಕೊಂಡು ಅಚ್ಚುಕಟ್ಟಾಗಿ ಸಮ್ಮೇಳನ ನಡೆಸಲು ಈಗಾಗಲೇ ನಿರ್ಧಾರಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಶಿರ್ಸಿ ಸಿದ್ದಾಪುರದಿಂದ ಕನ್ನಡ ರಥ ಹೊರಡಿಸಲು ಸೂಚನೆ ನೀಡಲಾಗಿದೆ.

ಸಮ್ಮೇಳನಕ್ಕೆ ಬರುವ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮತ್ತು ಪೊಲೀಸ್ ಇಲಾಖೆ ಸೂಚನೆ ನೀಡಲಾಗಿದೆ. ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಒಂದು ದಿನದ ವೇತನ ಕೊಡಲು ನಿರ್ಧರಿಸಿದ್ದಾರೆ, ಇದಕ್ಕೆ ನಮ್ಮ ಸರ್ಕಾರ ಈಗಾಗಲೇ ಬಜೆಟ್​​ನಲ್ಲಿ 20 ಕೋಟಿ ಮೀಸಲಿಡಲಾಗಿತ್ತು ಅದರಂತೆ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಈ ಬಾರಿಯ ಸಾಹಿತ್ಯ ಸಮ್ಮೇಳವನ್ನು ಭಿನ್ನವಾಗಿ ನಡೆಸಲು ನಿರ್ಧಾರ: ಡಾ.ಮಹೇಶ ಜೋಷಿ

86ನೇ ಸಾಹಿತ್ಯ ಸಮ್ಮೇಳವನ್ನು ಎಲ್ಲ ಸಮ್ಮೇಳನಕ್ಕಿಂತ ಭಿನ್ನವಾಗಿ ನಡೆಸಲು ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಅರ್ಥಪೂರ್ಣವಾದ ಲಾಂಛನ ಮಾಡಿದ್ದೇವೆ. ಹಾವೇರಿಯ ಅಸ್ಮಿತೆಯನ್ನು ತೋರಿಸೋ ಎಲ್ಲವೂ ವಿಚಾರಗಳು ಲಾಂಛನದಲ್ಲಿದೆ ಎಂದು ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಹೇಳಿದ್ದಾರೆ.

ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನಡೆಸಲು ಚಿಂತನೆ 

ನಗರದ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ನಡೆದ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಜನವರಿ 6, 7 ಮತ್ತು 8ರಂದು ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಸಲು ನಿರ್ಧಾರ.

ಸಚಿವರು, ಅಧಿಕಾರಿಗಳು, ಮಾಜಿ ಶಾಸಕರು ಹಾಗೂ ಸಂಘಸಂಸ್ಥೆಗಳ ಜೊತೆ ಸಭೆ ನಡೆಸಲಾಗಿದೆ. 21 ಸಮಿತಿಗಳನ್ನು ರಚನೆ ಮಾಡಿದ್ದೇವೆ. 25 ಸಾವಿರ ಜನಕ್ಕೆ ವಸತಿ ವ್ಯವಸ್ಥೆ ಮಾಡಲು ಚರ್ಚೆ ನಡೆಸಲಾಗಿದೆ. ಸಾರಿಗೆ, ಆರೋಗ್ಯ, ವಸತಿ, ಪೊಲೀಸ್ ಬಂದೋಬಸ್ತ್ ಹೀಗೆ ಎಲ್ಲದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು. ಪ್ರತಿದಿನ ಮೂರು ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾದಂತೆ ಅದ್ಧೂರಿಯಾಗಿ ಕನ್ನಡ ಸಮ್ಮೇಳನವನ್ನು ಮಾಡಲಾಗುವುದು ಈ ಸಮಯದಲ್ಲಿ ದೀಪಾಲಂಕಾರ ಮಾಡಲು ತೀರ್ಮಾನ ಮಾಡಲಾಗಿದೆ.

ಎಲ್ಲ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಎಲ್ಲರೂ ಸಮ್ಮೇಳನದ ಯಶಸ್ಸಿಗೆ ಶ್ರಮಿಸುವಂತೆ ಮನವಿ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ ಜೋಷಿ ಅವರು ಈ ಜಿಲ್ಲೆಯವರಾಗಿದ್ದಾರೆ, ಹೀಗಾಗಿ ಇದೊಂದು ಐತಿಹಾಸಿಕ ಸಮ್ಮೇಳನ ಆಗುವಂತೆ ವ್ಯವಸ್ಥೆ ಮಾಡಲಾಗಿದೆ.