ಕೆಇಎ ಸಂಸ್ಥೆಯಿಂದ ಪಿಎಸ್​ಐ ಪರೀಕ್ಷೆ ನಡೆಸಲು ನಿರ್ಧಾರ: ಗೃಹ ಸಚಿವ ಡಾ ಜಿ ಪರಮೇಶ್ವರ್

ಕೆಇಎ ಸಂಸ್ಥೆಯಿಂದ ಪಿಎಸ್​ಐ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದ್ದೇವೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದೇಶ ಬಂದಿದೆ. ಇಂಡಿಪೆಂಡೆಂಟ್ ಏಜೆಸ್ಸಿಯಿಂದ ಆಗಲಿದೆ. ಇನ್ನು ದಿನಾಂಕ ನಿಗದಿಯಾಗಿಲ್ಲ. ಆದಷ್ಟು ಬೇಗನೆ ಪರೀಕ್ಷೆ ಆಗಲಿದೆ ಎಂದಿದ್ದಾರೆ. 

ಕೆಇಎ ಸಂಸ್ಥೆಯಿಂದ ಪಿಎಸ್​ಐ ಪರೀಕ್ಷೆ ನಡೆಸಲು ನಿರ್ಧಾರ: ಗೃಹ ಸಚಿವ ಡಾ ಜಿ ಪರಮೇಶ್ವರ್
ಗೃಹ ಸಚಿವ ಜಿ ಪರಮೇಶ್ವರ
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on:Nov 18, 2023 | 8:04 PM

ಬೆಂಗಳೂರು, ನವೆಂಬರ್​ 18: ಕೆಇಎ ಸಂಸ್ಥೆಯಿಂದ ಪಿಎಸ್​ಐ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದ್ದೇವೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ (Dr G Parameshwar) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದೇಶ ಬಂದಿದೆ. ಇಂಡಿಪೆಂಡೆಂಟ್ ಏಜೆಸ್ಸಿಯಿಂದ ಆಗಲಿದೆ. 545 ಪಿಎಸ್​ಐ ಹುದ್ದೆಗಳ ಪರೀಕ್ಷೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಆದಷ್ಟು ಬೇಗನೆ ಪರೀಕ್ಷೆ ಆಗಲಿದೆ ಎಂದು ಹೇಳಿದ್ದಾರೆ.

ಪಿಎಸ್ಐ ಕೇಸ್ ಮಾತ್ರವಲ್ಲದೆ ಅವರು ಅನೇಕ ಕೇಸ್‌ಗಳಲ್ಲಿಯೂ ಸಹ ಇದ್ದಾರೆ ಎನ್ನುವ ಮಾಹಿತಿ‌ ಇದೆ. ಹೀಗಾಗಿ ಎಲ್ಲಾ‌‌‌ ವಿಚಾರಗಳನ್ನು ಬಹಿರಂಗ ಮಾಡುವುದಕ್ಕೆ ಆಗುವುದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ತನಿಖೆ ಮಾಡುವುದಕ್ಕೆ ಆದೇಶ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆರ್​ಡಿ ಪಾಟೀಲ್​ನ ಮತ್ತೊಂದು ಕರ್ಮಕಾಂಡ ಬಯಲು: 402 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮವೆಸಗಲು ಪ್ಲ್ಯಾನ್​​

ಆರ್​.ಡಿ ಪಾಟೀಲ್​ನ ಮತ್ತೊಂದು ಕರ್ಮಕಾಂಡ ಇತ್ತೀಚೆಗೆ ಬಟಾ ಬಯಲಾಗಿತ್ತು. 545 ಪಿಎಸ್ಐ ನೇಮಕಾತಿ ಬಳಿಕ 402 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮವೆಸಗುವುದಕ್ಕೆ ಪ್ಲ್ಯಾನ್ ಮಾಡಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ನಡೆಯಬೇಕಿದ್ದ 402 ಪಿಎಸ್​ಐ ಹುದ್ದೆಗಳ ನೇಮಕಾತಿ, 402 ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಲು ಆರ್​ಡಿ ಪಾಟೀಲ್​​ ಅಕೌಂಟ್​ಗೆ ಕೋಟ್ಯಾಂತರ ಹಣ ಹರಿದು ಬಂದಿತ್ತು.

ಇದನ್ನೂ ಓದಿ: PSI Recruitment Scam: ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ: ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಭೇಟಿ

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್​​ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್​ಗೆ ಕಲಬುರಗಿ ಹೈಕೋರ್ಟ್​ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿತ್ತು.  ಪ್ರಕರಣದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್​ನ್ನು ಇದೀಗ ಕೆಇಎ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ.

ಅದು ಬಿಜೆಪಿ ಆಂತರಿಕ ವಿಚಾರ, ಹೀಗಾಗಿ ಅದು ನಮಗೆ ಮುಖ್ಯವಲ್ಲ

ವಿರೋಧ ಪಕ್ಷದ ನಾಯಕರಾಗಿ ಆರ್​.ಅಶೋಕ್ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಅದು ಬಿಜೆಪಿ ಆಂತರಿಕ ವಿಚಾರ, ಹೀಗಾಗಿ ಅದು ನಮಗೆ ಮುಖ್ಯವಲ್ಲ. ವಿಪಕ್ಷ ನಾಯಕರಾದವರು ಎಚ್ಚರಿಸಿಬಹುದು, ಸಲಹೆ ಕೊಡಬಹುದು. ಅದು ವಿಪಕ್ಷ ನಾಯಕ ಅಶೋಕ್​ ಮತ್ತು ಅವರ ಪಕ್ಷದವರಿಗೆ ಬಿಟ್ಟಿದ್ದು. ವಿಪಕ್ಷ ನಾಯಕರಾದ ಆರ್​.ಅಶೋಕ್​ಗೆ ನಾನು ಸಹ ಅಭಿನಂದಿಸುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:41 pm, Sat, 18 November 23

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!