AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ಧಾರ; ವಿಷಯವಾರು ತಜ್ಞರ ನೇಮಕ

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಎಲ್ಲ ಸಮಿತಿಗಳು ಜೂನ್‌ 30ರೊಳಗೆ ವರದಿಗಳನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ.

ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ಧಾರ; ವಿಷಯವಾರು ತಜ್ಞರ ನೇಮಕ
ಉಪ ಮುಖ್ಯಮಂತ್ರಿ, ಡಾ. ಸಿ.ಎನ್ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
TV9 Web
| Updated By: guruganesh bhat|

Updated on: Jun 19, 2021 | 5:45 PM

Share

ಬೆಂಗಳೂರು:ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಎಲ್ಲ ಸಮಿತಿಗಳು ಜೂನ್‌ 30ರೊಳಗೆ ವರದಿಗಳನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ.

ವಿಷಯವಾರು ತಜ್ಞರ ಸಮಿತಿಯ ಮುಖ್ಯಸ್ಥರ ವಿವರ ಹೀಗಿದೆ:

ಸಾಮಾಜಿಕ ವಿಜ್ಞಾನ: ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ (ಅಧ್ಯಕ್ಷರು), ಪ್ರೊ.ಬಿ.ಪಿ.ವೀರಭದ್ರಪ್ಪ, ಪ್ರೊ.ಬಿ.ಕೆ.ತುಳಸೀಮಾಲಾ, ಪ್ರೊ.ಎನ್.ಆರ್.ಭಾನುಮೂರ್ತಿ, ಪ್ರೊ.ಹರೀಶ್‌ ರಾಮಸ್ವಾಮಿ, ಪ್ರೊ.ಜಿ.ಸರ್ವಮಂಗಳ, ಪ್ರೊ.ವಿ.ಎ.ಅಮಿನಾಭಾವಿ, ಪ್ರೊ.ಎ.ರಾಮೇಗೌಡ, ಪ್ರೊ.ಸಂಗೀತಾ ಮನೆ, ಪ್ರೊ.ಎನ್.ನರಸಿಂಹಮೂರ್ತಿ, ಪ್ರೊ.ನಿರಂಜನ, ಪ್ರೊ.ಆರ್.‌ಆನ್.‌ ಮನಗೊಳಿ, ಪ್ರೊ.ಗೋಪಾಲಕೃಷ್ಣ ಜೋಶಿ ಸದಸ್ಯರು.

ಭಾಷೆ ಮತ್ತು ಭಾಷಾಶಾಸ್ತ್ರ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ.ನಾಯಕ್‌ (ಅಧ್ಯಕ್ಷರು), ಪ್ರೊ.ಎಸ್.ಸಿ.ರಮೇಶ್‌, ಪ್ರೊ.ಕೆ.ಇ,ದೇವನಾಥನ್‌, ಪ್ರೊ.ಲಿಂಗರಾಜ ಗಾಂಧಿ, ಪ್ರೊ.ರಚೇಲ್‌ ಕುರಿಯನ್‌, ಪ್ರೊ.ಗಂಗಾಧರಯ್ಯ, ಪ್ರೊ.ಗೋಪಾಲಕೃಷ್ಣ ಜೋಶಿ ಸದಸ್ಯರು.

ಲಲಿತ ಕಲೆ ಮತ್ತು ದೃಶ್ಯ ಮಾಧ್ಯಮ: ಸಂಗೀತ ಮತ್ತು ಕಲಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ್‌ ವಿ.ಬೆಟ್ಟಕೋಟೆ (ಅಧ್ಯಕ್ಷರು), ಪ್ರೊ.ಜಯಕುಮಾರ್‌ ರೆಡ್ಡಿ, ಪ್ರೊ.ಎಸ್.‌ಎನ್.ಸುಶೀಲ, ಪ್ರೊ.ಕೆ.ರಾಮಕೃಷ್ಣಯ್ಯ, ಪ್ರೊ.ಗೋಪಾಲಕೃಷ್ಣ ಜೋಶಿ ಸದಸ್ಯರು.

ವಿಜ್ಞಾನ ಮತ್ತು ಗಣಿತಶಾಸ್ತ್ರ: ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್‌ (ಅಧ್ಯಕ್ಷರು), ಪ್ರೊ.ಟಿ.ಡಿ.ಕೆಂಪರಾಜು, ಪ್ರೊ.ಎಸ್.‌ವಿ.ಹಲಸೆ, ಪ್ರೊ.ಸಿದ್ದು ಪಿ.ಹಲಗೂರು, ಪ್ರೊ..ಎಸ್.ಎಂ.ಶಿವಪ್ರಸಾದ್‌, ಪ್ರೊ.ಶ್ರೀಧರ್‌, ಪ್ರೊ.ಮಂಜುನಾಥ ಪಟ್ಟಾಭಿ, ಪ್ರೊ.ಯು.ಎಸ್.ಮಹಾಬಲೇಶ್ವರ್‌, ಪ್ರೊ.ಪಿ.ಎಂ.ಪಾಟೀಲ್‌, ಪ್ರೊ.ಪರಮೇಶ್ವರ್‌ ವಿ.ಪಂಡಿತ್‌, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು).

ರಾಸಾಯನಿಕ ಮತ್ತು ಜೀವವಿಜ್ಞಾನ ಶಾಸ್ತ್ರ: ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ (ಅಧ್ಯಕ್ಷರು), ಪ್ರೊ.ಎಲ್.ಗೋಮತಿ ದೇವಿ, ಪ್ರೊ.ದಯಾನಂದ ಅಗಸರ್‌, ಪ್ರೊ.ಜಿ.ಆರ್.‌ನಾಯಕ್‌, ಪ್ರೊ.ವಿ.ಆರ್.ದೇವರಾಜ್‌, ಪ್ರೊ.ಬಾಲಕೃಷ್ಣ ಕಲ್ಲೂರಾಯ, ಪ್ರೊ.ಎಚ್.ಎಸ್.ಭೋಜನಾಯಕ್‌, ಪ್ರೊ.ಲಕ್ಷ್ಮೀ ಇನಾಂದಾರ್‌, ಪ್ರೊ.ವಿ.ಕೃಷ್ಣ, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು)

ಭೂ ವಿಜ್ಞಾನ: ಕೆಬಿಎನ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಂ.ಪಠಾಣ್‌ (ಅಧ್ಯಕ್ಷರು), ಪ್ರೊ.ಅಶೋಕ್‌ ಅಂಜಗಿ, ಪ್ರೊ.ಪಿ.ಮಾದೇಶ್‌, ಪ್ರೊ.ಆಸ್ಪ್ಯಾಕ್‌ ಅಹಮದ್‌, ಪ್ರೊ.ಎಸ್.‌ವಿ.ಕೃಷ್ಣಮೂರ್ತಿ, ಪ್ರೊ.ಎನ್.‌ನಂದಿನಿ, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು)

ವಾಣಿಜ್ಯ ಮತ್ತು ನಿರ್ವಹಣೆ: ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿಎಸ್.‌ಯಡಪಡಿತ್ತಾಯ (ಅಧ್ಯಕ್ಷರು), ಪ್ರೊ.ಎಂ.ರಾಮಚಂದ್ರಗೌಡ, ಪ್ರೊ.ಆರ್‌.ಎಲ್.ಹೈದರಾಬಾದ್‌, ಪ್ರೊ.ಎಚ್.‌ಎಸ್.‌ಅನಿತಾ, ಪ್ರೊ..ಡಿ.ಆನಂದ್‌, ಪ್ರೊ.ವಿಜಯ್‌ ಬೂತಪುರ್‌, ಪ್ರೊ.ಸಿಂಥಿಯಾ ಮೆನೇಜಸ್‌, ಪ್ರೊ.ಮುಸ್ತೈರಿ ಬೇಗಂ, ಪ್ರೊ.ಸುದರ್ಶನ್‌ ರೆಡ್ಡಿ, ಡಾ.ಅಲೋಯಿಸಿಸ್‌ ಎಡ್ವರ್ಡ್‌, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು).

ಎಂಜಿನಿಯರಿಂಗ್:‌ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ (ಅಧ್ಯಕ್ಷರು), ಪ್ರೊ.‌ಕೆ.ಆರ್.ವೇಣುಗೋಪಾಲ್‌, ಪ್ರೊ.ಕೆ.ಎನ್.ಬಿ.ಮೂರ್ತಿ, ಪ್ರೊ.ಎಸ್.ವಿದ್ಯಾಶಂಕರ್‌, ಪ್ರೊ.ಪುಟ್ಟರಾಜು, ಪ್ರೊ.ಶ್ರೀನಿವಾಸ ಬಲ್ಲಿ, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು).

ಪ್ರೊ.ಗೋಪಾಲಕೃಷ್ಣ ಜೋಶಿ ಅವರು ಎಲ್ಲ ವಿಷಯ ಸಮಿತಿಗಳಿಗೆ ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ.

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಮೊಟಕುಗೊಳಿಸುವುದಿಲ್ಲ ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಪದವಿ ಶಿಕ್ಷಣ ಸಂರಚನೆ ಹೀಗಿರುತ್ತದೆ. ಮೂರು ವರ್ಷ ವ್ಯಾಸಂಗ ಮಾಡಿದರೆ ಪದವಿ ಮುಗಿಯುತ್ತದೆ. ನಾಲ್ಕು ವರ್ಷ ಓದಿದರೆ ಅದನ್ನು ಡಿಗ್ರಿ ಆನರ್ಸ್‌ ಎಂದು ಪರಿಗಣಿಸಲಾಗುತ್ತದೆ, ಮತ್ತೂ ಐದು ವರ್ಷ ವ್ಯಾಸಂಗ ಮಾಡಿದರೆ ಸ್ನಾತಕೋತ್ತರ ಪದವಿಯೇ ಪೂರ್ಣಗೊಳಿಸಿದಂತೆ ಆಗುತ್ತದೆ. ಇದು ಪೂರ್ವ ವ್ಯವಸ್ಥೆಯ ಸುಧಾರಣಾ ಕ್ರಮವಷ್ಟೇ ಎಂದು ಡಿಸಿಎಂ ವಿವರಿಸಿದ್ದಾರೆ.

ಈ ವಿಷಯ ಇನ್ನು ಕರಡು ತಯಾರಿಕೆ ಹಂತದಲ್ಲಿದೆ. ಈಗಲೇ ಅದರ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ. ಮುಖ್ಯವಾಗಿ ಪದವಿ ಶಿಕ್ಷಣದಲ್ಲಿ ಎರಡು ವರ್ಷ ಕನ್ನಡ ಬೋಧನೆ ಆಗುತ್ತಿರುವ ಹಾಲಿ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಮಾತೃಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟವಾಗಿ ಪುನುರುಚ್ಛರಿಸಿದ್ದಾರೆ.

ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ದೃಷ್ಟಿ ಇಟ್ಟುಕೊಂಡು ಅತ್ಯಂತ ಪುರಾತನ ಭಾಷೆಯಾದ ಕನ್ನಡದ ಬೋಧನೆ ಮತ್ತು ಕಲಿಕೆಯನ್ನು ಮತ್ತಷ್ಟು ವಿಸ್ತೃತಗೊಳಿಸುವ ಉದ್ದೇಶ ಸರಕಾರಕ್ಕೆ ಇದೆಯೇ ವಿನಾ, ಅದಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ಚಿಂತನೆ ಹೊಂದಿಲ್ಲ. ಈ ಬಗ್ಗೆ ಯಾವುದೇ ತಪ್ಪು ಅಭಿಪ್ರಾಯ ಉಂಟಾಗುವುದು ಬೇಡ ಎಂದು ಡಿಸಿಎಂ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ವೇದಗಂಗಾ ನದಿಯಲ್ಲಿ ಕೊಚ್ಚಿಹೋಗಿ ಮರ ಹತ್ತಿ ಕುಳಿತಿದ್ದ ಯುವಕನನ್ನು ರೋಚಕ ಕಾರ್ಯಾಚರಣೆಯ ಮೂಲಕ ರಕ್ಷಿಸಿದ ಸ್ಥಳೀಯರು

SSLC Exams 2021: ಜುಲೈ ಮೂರನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬಹುತೇಕ ಖಚಿತ; ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

(Decision to implement National Education Policy in the Karnataka from the current year Appointment of subject matter experts)

ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ