AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿದ ವಿದ್ಯುತ್‌ ಉತ್ಪಾದನೆ; ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಗರಂ ಆಗಿದರು. ಅಲ್ಲದೆ, ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಉತ್ಪಾದನೆ ದುಪ್ಪಟ್ಟಾಗಿತ್ತು. ಸದ್ಯ 32,009 ಮೆಗಾವ್ಯಾಟ್‌ ಉತ್ಪಾದನೆಯಾಗುತ್ತಿದ್ದು, ಕಳೆದ 4 ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.

ಕುಸಿದ ವಿದ್ಯುತ್‌ ಉತ್ಪಾದನೆ; ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಮುಖ್ಯಮಂತ್ರಿ ಸಿದ್ದರಾಮಯ್ಯ
Anil Kalkere
| Edited By: |

Updated on: Sep 22, 2023 | 4:21 PM

Share

ಬೆಂಗಳೂರು, ಸೆ.22: ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವ ಹಿನ್ನೆಲೆ ಇಂಧನ ಇಲಾಖೆ (Power Department) ಅಧಿಕಾರಿಗಳ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಗರಂ ಆದರು. ಅಧಿಕಾರಿಗಳೊಂದಿಗಿನ ಸಭೆಯಲ್ಲಿ, ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಉತ್ಪಾದನೆ ದುಪ್ಪಟ್ಟಾಗಿತ್ತು. ಸದ್ಯ 32,009 ಮೆಗಾವ್ಯಾಟ್‌ ಉತ್ಪಾದನೆಯಾಗುತ್ತಿದ್ದು, ಕಳೆದ 4 ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿಲ್ಲವೇಕೆ ಎಂದು ಪ್ರಶ್ನಿಸಿದರು.

2013 -14ರಲ್ಲಿ 14,048 ಮೆಗಾವ್ಯಾಟ್‌ ಇದ್ದದ್ದು 2017-18ರ ವೇಳೆಗೆ 27,780 ಮೆಗಾವ್ಯಾಟ್​ಗೆ ಉತ್ಪಾದನೆ ಏರಿಕೆಯಾಗಿತ್ತು. ಸದ್ಯ ಕೇವಲ 32,009 ಮೆಗಾ ವ್ಯಾಟ್‌ ಉತ್ಪಾದನೆ ಆಗುತ್ತಿದೆ. ವಿವಿರ ನೀಡುವಂತೆ ಸಿದ್ದರಾಮಯ್ಯ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿಲ್ಲ. ಅಗತ್ಯ ಗುಣಮಟ್ಟದಲ್ಲಿ ಇಲ್ಲದಿರುವುದರಿಂದ ವಿದ್ಯುತ್‌ ಉತ್ಪಾದನೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದ್ದು, ಪ್ರತಿದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ: ವಿಚಾರಣೆ ಅ. 6ಕ್ಕೆ ಮುಂದೂಡಿದ ಹೈಕೋರ್ಟ್

ಇದಲ್ಲದೆ, ಕಲ್ಲಿದ್ದಲು ಆಮದು ಮಾಡಲು ಸಹ ಟೆಂಡರ್‌ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಮಾಹಿತಿ ಪಡೆದ ಸಿದ್ದರಾಮಯ್ಯ, ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡದಂತೆ ಸೂಚಿಸಿದ ಸಿಎಂ, ನೀರಾವರಿಗೆ ಸೌರ ವಿದ್ಯುತ್‌ ಪಂಪ್‌ ಸೆಟ್‌ಗಳ ಬಳಕೆಯನ್ನು ಉತ್ತೇಜಿಸುವ ಕುರಿತು ಚರ್ಚೆ ನಡೆಸಿದರು. ಗೃಹ ಜ್ಯೋತಿ ಯೋಜನೆಯಡಿ ಆಗಸ್ಟ್‌ ತಿಂಗಳಲ್ಲಿ 1.26 ಕೋಟಿ ಗ್ರಾಹಕರಿಗೆ ಹಾಗೂ ಸೆಪ್ಟೆಂಬರ್‌ ತಿಂಗಳಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ಮೊತ್ತದ ವಿದ್ಯುತ್‌ ಬಿಲ್‌ ನೀಡಲಾಗಿದೆ. ಇದಕ್ಕಾಗಿ 1400 ಕೋಟಿ ರೂ. ಒದಗಿಸಲಾಗಿದೆ ಎಂದರು.

ಎಸ್ಕಾಂಗಳ ಆರ್ಥಿಕ ಸ್ಥಿತಿಗತಿ ಕುರಿತೂ ಸಹ ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯುತ್‌ ಸೋರಿಕೆ ಕುರಿತಂತೆ ರಾಜ್ಯದ ಎಲ್ಲ ಎಸ್ಕಾಂಗಳೂ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದ ಸಿಎಂ, ಅಗತ್ಯವಿರುವಲ್ಲಿ ಟ್ರಾನ್ಸ್‌ಫಾರ್ಮರ್‌ ಅಳವಡಿಕೆ ಹಾಗೂ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಪ್ರಸಕ್ತ ವರ್ಷದಲ್ಲಿ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗಾಗಿ 2500 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ ಪ್ರಸಕ್ತ ವಿದ್ಯುತ್‌ ಪರಿಸ್ಥಿತಿ ಕುರಿತು ಹಾಗೂ ಆರ್ಥಿಕ ಸ್ಥಿತಿಗತಿ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದು ಸೂಕ್ತ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ