ದೀಪಾವಳಿ ಹಬ್ಬದಂದು ದೇಗುಲಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದ ಆದೇಶ
ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಕೊಡಲಾಗಿದೆ.
ಬೆಂಗಳೂರು: ದೀಪಾವಳಿ ಹಬ್ಬದಂದು ಗೋಪೂಜೆ ಮಾಡುವಂತೆ ದೇಗುಲಗಳಿಗೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ. ದೇಗುಲಗಳಲ್ಲಿ ಗೋಪೂಜೆ ಮಾಡಲು ಸರ್ಕಾರದ ಆದೇಶಿಸಿದೆ. ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಯಲ್ಲಿ ಪೂಜೆಗೆ ಸೂಚನೆ ಕೊಡಲಾಗಿದೆ.
ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಕೊಡಲಾಗಿದೆ. ಬಲಿಪಾಡ್ಯಮಿ ದಿನ ಸಂಜೆ 5.30 ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಕೊವಿಡ್ ಸಮಯದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ದೀಪಾವಳಿ ಆಚರಣೆಗೆ ಸರಳ ಸಲಹೆಗಳು
ಇದನ್ನೂ ಓದಿ: Diwali 2021: ದೇವ ದೀಪಾವಳಿ ಯಾವಾಗ? ದೀಪಾವಳಿ ವೇಳೆ ಲಕ್ಷ್ಮಿಗೆ ಮಾತ್ರ ಪೂಜೆ ಮಾಡುತ್ತಾರೆ! ವಿಷ್ಣುವಿಗೆ ಪೂಜೆ ಏಕಿಲ್ಲ?