AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವಿ ಓದುವ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ತಕ್ಷಣವೇ ಈ ಯೋಜನೆಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಸರ್ಕಾರ ಮತ್ತು ಅಜೀಮ್ ಪ್ರೇಮ್‌ಜೀ ಫೌಂಡೇಶನ್ ಜಂಟಿಯಾಗಿ 'ದೀಪಿಕಾ ವಿದ್ಯಾರ್ಥಿವೇತನ' ಯೋಜನೆ ಆರಂಭಿಸಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಪದವಿ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ. ಆರ್ಥಿಕ ನೆರವು ಸಿಗಲಿದೆ. ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಈ ಯೋಜನೆಯಡಿ, 2026-27ನೇ ಸಾಲಿಗೆ ಆಗಸ್ಟ್ 30, 2026ರೊಳಗೆ ಅರ್ಹ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.

ಪದವಿ ಓದುವ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ತಕ್ಷಣವೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 22, 2026 | 3:37 PM

Share

ಬೆಂಗಳೂರು, ಆ.22: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಹಾಗೂ ಅಜೀಮ್ ಪ್ರೇಮ್‌ಜೀ ಫೌಂಡೇಶನ್ ಜಂಟಿಯಾಗಿ ಬೃಹತ್ ಕೊಡುಗೆ ನೀಡಿದೆ. 2026-27ನೇ ಸಾಲಿನ ‘ದೀಪಿಕಾ ವಿದ್ಯಾರ್ಥಿವೇತನ’ (Deepika Scholarship) ಯೋಜನೆಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಅಧಿಕೃತ ಚಾಲನೆ ನೀಡಿದ್ದಾರೆ.

ಈ ಯೋಜನೆಯಡಿ ಅರ್ಹ ಪದವಿ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ವಾರ್ಷಿಕ 30,000 ರೂ. ವಿದ್ಯಾರ್ಥಿವೇತನ ದೊರೆಯಲಿದೆ. ಸರ್ಕಾರಿ ಶಾಲಾ ಮತ್ತು ಕಾಲೇಜುಗಳಲ್ಲಿ 10ನೇ ತರಗತಿ ಹಾಗೂ 12ನೇ ತರಗತಿಯನ್ನು (PUC) ವ್ಯಾಸಂಗ ಮಾಡಿ, ಪ್ರಸ್ತುತ ಪದವಿ (Degree) ಕೋರ್ಸ್‌ಗಳಿಗೆ ದಾಖಲಾಗಿರುವ ಎಲ್ಲಾ ವಿದ್ಯಾರ್ಥಿನಿಯರು ಅರ್ಹರು.

ಉನ್ನತ ಶಿಕ್ಷಣಕ್ಕಾಗಿ ಪ್ರತಿ ವರ್ಷ 30,000 ರೂ. ಆರ್ಥಿಕ ನೆರವು ಸಿಗಲಿದೆ. ಮೊದಲ ಹಂತದಲ್ಲಿ ಅಜೀಮ್ ಪ್ರೇಮ್‌ಜೀ ಫೌಂಡೇಶನ್‌ ವತಿಯಿಂದ ಸುಮಾರು 37,000 ವಿದ್ಯಾರ್ಥಿನಿಯರಿಗೆ ನೇರವಾಗಿ ಈ ವಿದ್ಯಾರ್ಥಿವೇತನ ತಲುಪಲಿದೆ.

ಇನ್ನುಳಿದ ಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ವಿದ್ಯಾರ್ಥಿನಿಯರಿಗೆ ಕರ್ನಾಟಕ ಸರ್ಕಾರವೇ ನೇರವಾಗಿ ಈ ವಿದ್ಯಾರ್ಥಿವೇತನ ಒದಗಿಸಲಿದೆ. 2026-27ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 30, 2026 ಕೊನೆಯ ಅವಕಾಶವಾಗಿದೆ. ಈಗ ಅರ್ಜಿ ಸಲ್ಲಿಸಲು ಸಾಧ್ಯವಾಗದ ವಿದ್ಯಾರ್ಥಿನಿಯರಿಗಾಗಿ ಜನವರಿ 2027 ರಲ್ಲಿ ಎರಡನೇ ಹಂತದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ.

ಯಾರೆಲ್ಲಾ ಅರ್ಜಿ ಸಲ್ಲಿಸಲು ಅರ್ಹರು?

ವಿದ್ಯಾರ್ಥಿನಿಯರು 10ನೇ ತರಗತಿ (SSLC) ಮತ್ತು 12ನೇ ತರಗತಿಯನ್ನು (PUC) ಕಡ್ಡಾಯವಾಗಿ ಸರ್ಕಾರಿ ಶಾಲೆಗಳು ಅಥವಾ ಸರ್ಕಾರಿ ಪಿಯು ಕಾಲೇಜುಗಳಲ್ಲೇ ಪೂರ್ಣಗೊಳಿಸಿರಬೇಕು.

ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ (Higher Education Institution) ಪ್ರಥಮ ವರ್ಷದ ಪದವಿಗೆ ದಾಖಲಾಗಿರಬೇಕು.

ಇದನ್ನೂ ಓದಿ: ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ!

ಅರ್ಹ ಕೋರ್ಸ್‌ಗಳು (ಕನಿಷ್ಠ 3 ವರ್ಷಗಳ ಅವಧಿ):

ಸಾಮಾನ್ಯ ಪದವಿ (General Degree – BA, BSc, BCom, etc.)

ವೃತ್ತಿಪರ ಪದವಿ (Professional Degree – BE, BTech, etc.)

ಡಿಪ್ಲೊಮಾ ಕೋರ್ಸ್‌ಗಳು (Diploma Courses – ಕನಿಷ್ಠ ಅವಧಿ ನಿಯಮಾವಳಿಗಳಂತೆ)

ಅರ್ಜಿ ಸಲ್ಲಿಸುವ ವಿಧಾನ

ಅರ್ಹ ವಿದ್ಯಾರ್ಥಿನಿಯರು ಅಜೀಮ್ ಪ್ರೇಮ್‌ಜೀ ಫೌಂಡೇಶನ್‌ನ ಅಧಿಕೃತ ಪೋರ್ಟಲ್ ಮೂಲಕವೇ ನೇರವಾಗಿ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್ ಲಿಂಕ್: Azim Premji Scholarship Portal

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು