ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ: ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್​

ಲೋಕಸಭಾ ಚುನಾವಣೆ ವೇಳೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಶಾಸಕ ಯತ್ನಾಳ್ ಮಾಡಿದ್ದ ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಮಾನನಷ್ಟ ಪ್ರಕರಣ ದಾಖಲಿಸುವಂತೆ ಖಾಸಗಿ ದೂರು ನೀಡಿದ್ದರು. ಹಾಗಾಗಿ ಶಾಸಕ ಯತ್ನಾಳ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ನೋಟಿಸ್ ನೀಡಲಾಗಿದೆ.

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ: ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್​
ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ: ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್​
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Jul 15, 2024 | 9:02 PM

ಬೆಂಗಳೂರು, ಜುಲೈ 15: ಸಚಿವ ಶಿವಾನಂದ ಪಾಟೀಲ್ (Shivanand Patil) ವಿರುದ್ಧ ಮಾನಹಾನಿಕರ ಹೇಳಿಕೆ ಹಿನ್ನೆಲೆ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಇದೀಗ ದೂರು ಸಂಬಂಧ ಯತ್ನಾಳ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ನೋಟಿಸ್ ನೀಡಲಾಗಿದೆ. ಲೋಕಸಭಾ ಚುನಾವಣೆ ವೇಳೆ ಯತ್ನಾಳ್​ ಮಾಡಿದ್ದ ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಮಾನನಷ್ಟ ಪ್ರಕರಣ ದಾಖಲಿಸುವಂತೆ ಖಾಸಗಿ ದೂರು ನೀಡಿದ್ದರು. ಹೀಗಾಗಿ ಇದೀಗ ನೋಟಿಸ್​ ನೀಡಲಾಗಿದೆ.

ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಜು. 18ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಜೆಡಿಎಸ್ ಎಂಎಲ್​ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್​ಗೆ ಸಂಬಂಧಿಸಿದಂತೆ 2ನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಸೂರಜ್​ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ವಿಚಾರಣೆ ಮಾಡಿದ್ದು, ಜುಲೈ 18ಕ್ಕೆ ಆದೇಶ ಕಾಯ್ದಿರಿಸಿದೆ.

ಇದನ್ನೂ ಓದಿ: ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್

ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್​ನ ತನಿಖೆ ಚುರುಕುಗೊಂಡಿದೆ. ಜೂನ್ 22ರಂದು ಅರಕಲಗೂಡು ಮೂಲದ ಯುವಕ ಹಾಗೂ ಜೂನ್ 25ರಂದು ಹೊಳೆನರಸೀಪುರ ಮೂಲದ ಯುವಕ ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿದ್ದಾರೆ. ಎರಡೂ ಕೇಸ್​ನ ತನಿಖೆ ನಡೆಸುತ್ತಿರುವ ಸಿಐಡಿ ಹಾಸನದ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರು ಮಾಡಿತ್ತು. ಸಂತ್ರಸ್ತನನ್ನು ಕರೆ ತಂದು ಸ್ಥಳ ಮಹಜರು ಪೂರ್ಣಗೊಳಿಸಿತ್ತು.

ಇದನ್ನೂ ಓದಿ: ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್​ಗೆ ಯತ್ನಾಳ್ ಪತ್ರ

ಸೂರಜ್​ಗೆ ಬ್ಲ್ಯಾಕ್​ಮೇಲ್ ಮಾಡಲಾಗುತ್ತಿದೆ ಎಂದು ದೂರು ಕೊಟ್ಟಿದ್ದವನೇ ಸಂತ್ರಸ್ತನಾಗಿದ್ದಾನೆ. ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸದ್ಯ ಸೂರಜ್ ರೇವಣ್ಣ, ಸಿಐಡಿ ವಶದಲ್ಲಿ ವಿಚಾರಣೆ ಎದುರಿಸ್ತಿದ್ದಾರೆ. ಈ ಬೆನ್ನಲ್ಲೇ, ಮೊದಲ ಕೇಸ್ ದಾಖಲಾಗುವ ಮುನ್ನ, ಜೊತೆಗೆ ನಿಂತಿದ್ದವನೇ ಉಲ್ಟಾ ಹೊಡೆದಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:38 pm, Mon, 15 July 24