ಬೆಂಗಳೂರು, ಜುಲೈ 15: ಸಚಿವ ಶಿವಾನಂದ ಪಾಟೀಲ್ (Shivanand Patil) ವಿರುದ್ಧ ಮಾನಹಾನಿಕರ ಹೇಳಿಕೆ ಹಿನ್ನೆಲೆ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಇದೀಗ ದೂರು ಸಂಬಂಧ ಯತ್ನಾಳ್ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ನೋಟಿಸ್ ನೀಡಲಾಗಿದೆ. ಲೋಕಸಭಾ ಚುನಾವಣೆ ವೇಳೆ ಯತ್ನಾಳ್ ಮಾಡಿದ್ದ ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಮಾನನಷ್ಟ ಪ್ರಕರಣ ದಾಖಲಿಸುವಂತೆ ಖಾಸಗಿ ದೂರು ನೀಡಿದ್ದರು. ಹೀಗಾಗಿ ಇದೀಗ ನೋಟಿಸ್ ನೀಡಲಾಗಿದೆ.
ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ಗೆ ಸಂಬಂಧಿಸಿದಂತೆ 2ನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಸೂರಜ್ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ವಿಚಾರಣೆ ಮಾಡಿದ್ದು, ಜುಲೈ 18ಕ್ಕೆ ಆದೇಶ ಕಾಯ್ದಿರಿಸಿದೆ.
ಇದನ್ನೂ ಓದಿ: ಯತ್ನಾಳ್ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ನ ತನಿಖೆ ಚುರುಕುಗೊಂಡಿದೆ. ಜೂನ್ 22ರಂದು ಅರಕಲಗೂಡು ಮೂಲದ ಯುವಕ ಹಾಗೂ ಜೂನ್ 25ರಂದು ಹೊಳೆನರಸೀಪುರ ಮೂಲದ ಯುವಕ ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿದ್ದಾರೆ. ಎರಡೂ ಕೇಸ್ನ ತನಿಖೆ ನಡೆಸುತ್ತಿರುವ ಸಿಐಡಿ ಹಾಸನದ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರು ಮಾಡಿತ್ತು. ಸಂತ್ರಸ್ತನನ್ನು ಕರೆ ತಂದು ಸ್ಥಳ ಮಹಜರು ಪೂರ್ಣಗೊಳಿಸಿತ್ತು.
ಇದನ್ನೂ ಓದಿ: ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್ಗೆ ಯತ್ನಾಳ್ ಪತ್ರ
ಸೂರಜ್ಗೆ ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ ಎಂದು ದೂರು ಕೊಟ್ಟಿದ್ದವನೇ ಸಂತ್ರಸ್ತನಾಗಿದ್ದಾನೆ. ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸದ್ಯ ಸೂರಜ್ ರೇವಣ್ಣ, ಸಿಐಡಿ ವಶದಲ್ಲಿ ವಿಚಾರಣೆ ಎದುರಿಸ್ತಿದ್ದಾರೆ. ಈ ಬೆನ್ನಲ್ಲೇ, ಮೊದಲ ಕೇಸ್ ದಾಖಲಾಗುವ ಮುನ್ನ, ಜೊತೆಗೆ ನಿಂತಿದ್ದವನೇ ಉಲ್ಟಾ ಹೊಡೆದಿದ್ದ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:38 pm, Mon, 15 July 24