AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams: ರಾಜ್ಯದಲ್ಲಿ ಮುಂಗಾರು ಒಂಚೂರು ಕ್ಷೀಣ: ಆಗಸ್ಟ್-ಸೆಪ್ಟೆಂಬರ್​ಗೆ ರಾಜ್ಯದ 12 ಪ್ರಮುಖ ಜಲಾಶಯ ತುಂಬಿತುಳುಕಲಿವೆ

Karnataka Reservoirs water level: ಈ ಮೊದಲು ಜುಲೈ ಮಧ್ಯ ಭಾಗದಲ್ಲಿ ರಾಜ್ಯದ ಜಲಾಶಯಗಳು ತುಂಬುತ್ತಿದ್ದವು. ಆದರೆ ಕಳೆದ ಎರಡು ವರ್ಷಗಳಿಂದ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಮುಂಗಾರು ಹೆಚ್ಚಾಗುತ್ತಿದೆ. ಹಾಗಾಗಿ ಈ ಬಾರಿಯೂ ಮಳೆ ಚೆನ್ನಾಗಿ ಆದರೆ, ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಜಲಾಶಯಗಳು ತುಂಬಿತುಳುಕಲಿವೆ. ಆದರೆ ಸದ್ಯಕ್ಕೆ ಕೃಷಿ ನೀರಾವರಿ ಮತ್ತು ಕುಡಿಯುವ ನೀರಿಗೆ ಯಾವುದೇ ಬಾಧಕವಿಲ್ಲ.

Karnataka Dams: ರಾಜ್ಯದಲ್ಲಿ ಮುಂಗಾರು ಒಂಚೂರು ಕ್ಷೀಣ: ಆಗಸ್ಟ್-ಸೆಪ್ಟೆಂಬರ್​ಗೆ ರಾಜ್ಯದ 12 ಪ್ರಮುಖ ಜಲಾಶಯ ತುಂಬಿತುಳುಕಲಿವೆ
ರಾಜ್ಯದಲ್ಲಿ ಮುಂಗಾರು ಒಂಚೂರು ಕ್ಷೀಣ: ಆಗಸ್ಟ್-ಸೆಪ್ಟೆಂಬರ್ ವೇಳೆಗೆ ರಾಜ್ಯದ 12 ಪ್ರಮುಖ ಜಲಾಶಯಗಳು ತುಂಬಿತುಳುಕಲಿವೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 06, 2021 | 10:59 AM

Share

ಬೆಂಗಳೂರು: ಈ ಬಾರಿ ಮುಂಗಾರು ಜೋರಾಗಿದ್ದು, ಬಹುತೇಕ ಕಡೆ ಒಳ್ಳೆಯ ಮಳೆಯಾಗಿದೆ. ಆದರೆ ಕರ್ನಾಟಕದ ಜಲಾಶಯಗಳ ಮಟ್ಟಿಗೆ ಹೇಳಬೇಕೆಂದ್ರೆ ಜಲಾಶಯಗಳಲ್ಲಿ ನೀರಿನ ಮಟ್ಟ ಏರಲು ಇನ್ನೂ ಸಾಕಷ್ಟು ಮಳೆಯಾಗಬೇಕಿದೆ. ಜೂನ್​ ತಿಂಗಳ ಮುಂಗಾರು ಮಳೆಗೆ ಜಲಾಶಯಗಳಿಗೆ ಭಾರೀ ನೀರು ಹರಿದುಬಂದಿದೆ. ಆದರೂ ಆಗಸ್ಟ್-ಸೆಪ್ಟೆಂಬರ್​ ಮಳೆ ನೀರಿಗೆ ಕೆಆರ್​ಎಸ್ ಅಣೆಕಟ್ಟೆ ಸೇರಿದಂತೆ ಬಹುತೇಕ ಎಲ್ಲ ಜಲಾಶಯಗಳು ತುಂಬುವ ಅಂದಾಜಿದೆ.

ಭಾರತೀಯ ಹವಾಮಾನ ಇಲಾಖೆ ಅಂದಾಜು ಮಾಡಿದಷ್ಟು ಮಳೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಆಗಿಲ್ಲ. ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಮಳೆಯ ಕೊರತೆ ಕಾಣಿಸಿಕೊಂಡಿದೆ. ಹಾಗಾಗಿ ಮುಂದಿನ ತಿಂಗಳುಗಳಲ್ಲಿ ಮುಂಗಾರು ಮಳೆ ಹೇಗೆ ಸುರಿಯಲಿದೆ ಎಂಬುದರ ಆಧಾರದ ಮೇಲೆ ರಾಜ್ಯದ 12 ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುವುದನ್ನು ಅವಲಂಬಿಸಿದೆ.

ಈ ಮೊದಲು ಜುಲೈ ಮಧ್ಯ ಭಾಗದಲ್ಲಿ ರಾಜ್ಯದ ಜಲಾಶಯಗಳು ತುಂಬುತ್ತಿದ್ದವು. ಆದರೆ ಕಳೆದ ಎರಡು ವರ್ಷಗಳಿಂದ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಮುಂಗಾರು ಹೆಚ್ಚಾಗುತ್ತಿದೆ. ಹಾಗಾಗಿ ಈ ಬಾರಿಯೂ ಮಳೆ ಚೆನ್ನಾಗಿ ಆದರೆ, ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಜಲಾಶಯಗಳು ತುಂಬಿತುಳುಕಲಿವೆ. ಆದರೆ ಸದ್ಯಕ್ಕೆ ಕೃಷಿ ನೀರಾವರಿ ಮತ್ತು ಕುಡಿಯುವ ನೀರಿಗೆ ಯಾವುದೇ ಬಾಧಕವಿಲ್ಲ.

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ, ಸೂಪಾ, ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಎಂಬ ವಿವರ ಇಲ್ಲಿ ಲಭ್ಯವಿದೆ.

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 91 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2276 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2896 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2842 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

5) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1633 ಅಡಿ ಗರಿಷ್ಠ ಸಾಮರ್ಥ್ಯ: 1609 ಅಡಿ

6) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 156 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

7) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1785 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

8) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2062 ಅಡಿ ಗರಿಷ್ಠ ಸಾಮರ್ಥ್ಯ: 2063 ಅಡಿ

9) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2136 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

10) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 539 ಮೀಟರ್ ಗರಿಷ್ಠ ಸಾಮರ್ಥ್ಯ: 564 ಮೀಟರ್

11) ನಾರಾಯಣಪುರ ಜಲಾಶಯ | Narayanapura Dam ಇಂದಿನ ನೀರಿನ ಮಟ್ಟ: 490.03 ಮೀಟರ್ ಗರಿಷ್ಠ ಸಾಮರ್ಥ್ಯ: 491 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 517 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(deficit monsoon 2021 karnataka 12 reservoirs and dams water level as on 6th july 2021)

Published On - 9:25 am, Tue, 6 July 21

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್