AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿಗಾಗಿ ಕರವೇ ಕಾರ್ಯಕರ್ತರಿಂದ ದೆಹಲಿ ಚಲೋ, ಅ.18ರಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ

ಕರವೇ ಕಾರ್ಯಕರ್ತರು ಅಕ್ಟೋಬರ್ 18ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕರವೇ ಅಧ್ಯಕ್ಷ ನಾರಯಣ ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ದೆಹಲಿಗೆ ಪ್ರಯಾಣಿಸಲಿದ್ದಾರೆ. ಕೆಲವರು ಬೆಳಗಾವಿಯಿಂದ ದೆಹಲಿಗೆ ಟ್ರೈನ್ ಮೂಲಕ, ಇನ್ನು ಕೆಲವರು ಬೆಂಗಳೂರಿನಿಂದ ಪ್ಲೈಟ್ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ.

ಕಾವೇರಿಗಾಗಿ ಕರವೇ ಕಾರ್ಯಕರ್ತರಿಂದ ದೆಹಲಿ ಚಲೋ, ಅ.18ರಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ
ಕಾವೇರಿ
TV9 Web
| Edited By: ವಿವೇಕ ಬಿರಾದಾರ|

Updated on: Oct 16, 2023 | 12:48 PM

Share

ಬೆಂಗಳೂರು ಅ.16: ಇಂದಿನಿಂದ ತಮಿಳುನಾಡು (Tamilnadu) ರಾಜ್ಯಕ್ಕೆ ಮತ್ತೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ಕಾವೇರಿ (Cauvery) ನೀರು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನವಾಗಿದೆ. ಈ ಆದೇಶದಿಂದ ಕಾವೇರಿ ಕೊಳ್ಳದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇನ್ನು ತಮಿಳುನಾಡಿಗೆ ನೀರು ಹರಿಸದಂತೆ ಮಂಡ್ಯದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳ ಪ್ರತಿಭಟನೆ 42ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾವೇರಿಗಾಗಿ ದೆಹಲಿ ಚಲೋ ಕರೆ ನೀಡಿದೆ.

ಕರವೇ ಕಾರ್ಯಕರ್ತರು ಅಕ್ಟೋಬರ್ 18ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕರವೇ ಅಧ್ಯಕ್ಷ ನಾರಯಣ ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ದೆಹಲಿಗೆ ಪ್ರಯಾಣಿಸಲಿದ್ದಾರೆ. ಕೆಲವರು ಬೆಳಗಾವಿಯಿಂದ ದೆಹಲಿಗೆ ಟ್ರೈನ್ ಮೂಲಕ, ಇನ್ನು ಕೆಲವರು ಬೆಂಗಳೂರಿನಿಂದ ಪ್ಲೈಟ್ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಮುಂದುವರೆದ ಕಾವೇರಿ ಕಿಚ್ಚು; ಅನ್ನದಾತನ ವಿಭಿನ್ನ ರೀತಿ ಹೋರಾಟ

ದೆಹಲಿ ಕನ್ನಡ ಸಂಘ ಮತ್ತು ಕರವೇಯಿಂದ‌ ದೆಹಲಿಯ ಜಂತರ್ ಮಂತರ್‌ನಲ್ಲಿ‌ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಕರವೇ ಕಾರ್ಯಕರ್ತರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಬಳಿ, ಪ್ರಧಾನಿ ಮೋದಿ ಭೇಟಿಗಾಗಿ ಮನವಿ ಮಾಡಿದ್ದಾರೆ. ಪ್ರಧಾನಿ ಮೋದಿ ಭೇಟಿಗೆ ಕರ್ನಾಟಕ ಸಂಘ ದೆಹಲಿ ಅಧ್ಯಕ್ಷ ನಾಗರಾಜ್​​, ಕರವೇ ರಾಜ್ಯಾಧ್ಯಕ್ಷ ನಾರಾಯಣ‌ಗೌಡರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಕಾವೇರಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿಗೆ ಒತ್ತಾಯಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ