ನವದೆಹಲಿ: ದೆಹಲಿ ಕರ್ನಾಟಕ ಸಂಘದ (Delhi Karnataka Sangha) 75 ನೇ ಅಮೃತ ಮಹೋತ್ಸವವನ್ನು ಇಂದು (ಫೆ.25) ಸಂಜೆ 5 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ((PM Narendra Modi) ಅವರು ಉದ್ಘಾಟಿಸಲಿದ್ದಾರೆ. ಎರಡು (25 ಮತ್ತು 26) ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರಿಯಾದ ಸ್ಥಾನಮಾನ ಕೊಡದ ಕಾರಣ, ದೆಹಲಿ ಕನ್ನಡ ಸಂಘದ ಅಧ್ಯಕ್ಷರಾದ ಸಿಎಂ ನಾಗರಾಜ್ ಅವರ ನಡೆಗೆ ವಿರೋಧ ವ್ಯಕ್ತಪಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿಯವರು (Mahesh Joshi) ‘ನಾನು ಮೋದಿ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತೇನೆ’ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಇಂದು ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ‘ಏಕ ಭಾರತ ಶ್ರೇಷ್ಠ ಭಾರತ’ದ (Ek Bharat Shret Bharat) ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಸ್ಪಟಿಕಪುರ ನಂಜಾವಧೂತ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಯದುವೀರ್ ಒಡೆಯರ್ ಭಾಗವಹಿಸಲಿದ್ದಾರೆ. ಹಾಗೇ ಕಾರ್ಯಕ್ರಮದಲ್ಲಿ 3 ಸಾವಿರಕ್ಕೂ ಅಧಿಕ ಹೊರನಾಡ ಕನ್ನಡಿಗರು ಭಾಗಿ ನಿರೀಕ್ಷೆ ಇದೆ.
ಕಾರ್ಯಕ್ರಮ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಈ ಉತ್ಸವದ ಎರಡು ದಿನಗಳ ಆಚರಣೆಯಲ್ಲಿ ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕವನ ವಾಚನದ ಮೂಲಕ ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶನವಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ 1,000ಕ್ಕೂ ಹೆಚ್ಚು ಕಲಾವಿದರನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ:Barisu Kannada Dim Dimava: ಇಂದು ದೆಹಲಿಯಲ್ಲಿ ಬಾರಿಸು ಕನ್ನಡ ಡಿಂಡಿಮವ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಇಂದು ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಡಿ ವೀರೇಂದ್ರ ಹೆಗ್ಗಡೆ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಬಿಜೆಪಿ ಮುಖಂಡ ಸಿ.ಟಿ ರವಿ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ಫೆಬ್ರವರಿ 26 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಉಪಸ್ಥಿತರಿರುತ್ತಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:09 pm, Sat, 25 February 23