ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಸಚಿವ ಯತೀಂದ್ರ
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಹೆಚ್.ಡಿ.ಕೋಟೆ ತಾಲೂಕಿನ ಕಣಿಯರಹುಂಡಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ. ಸ್ಮಾರಕ ನಿರ್ಮಾಣದ ಬೇಡಿಕೆ ಬಗ್ಗೆ ಸಚಿವ ಯತೀಂದ್ರ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.
ಮೈಸೂರು, ಜುಲೈ 12: ಸ್ವರ ಸರಸ್ವತಿ ಎಸ್ ಜಾನಕಿಯವರಿಗೂ ಮೈಸೂರಿಗೂ ಅವಿನಾಭಾವ ಸಂಬಂಧವಿದೆ. 2008ರಿಂದ ತಮ್ಮ ಇಳಿವಯಸ್ಸಿನವರೆಗೆ ಅಂದರೆ ತಮ್ಮ ಕೊನೆಯ ದಿನಗಳನ್ನು ಕಳೆದಿದ್ದ ಜಾನಕಿಯವರು, ನಾನು ಮೈಸೂರಿನಲ್ಲೇ ಮಣ್ಣಾಗಬೇಕು ಎಂಬ ಮಾತನ್ನ ಹೇಳಿದ್ದರಂತೆ. ಹೀಗಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕರು ಮತ್ತು ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಂಜೆ 5 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದೆ. ಸರ್ಕಾರದ ಪ್ರತಿನಿಧಿಯಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಜಾನಕಿಯಮ್ಮ ಅವರ ಸ್ಮಾರಕ ನಿರ್ಮಿಸಬೇಕೆಂಬ ಸಾರ್ವಜನಿಕರ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಯತೀಂದ್ರ, ಈ ಕುರಿತು ಸಿಎಂ ಗಮನಕ್ಕೆ ತರುವುದಾಗಿ ಹೇಳಿದರು. ಇದು ಸರ್ಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳೇ ತೀರ್ಮಾನಿಸಬೇಕಾದ ವಿಷಯವಾಗಿದ್ದು, ನಾನು ಕೂಡ ಈ ಬಗ್ಗೆ ಮನವಿ ಸಲ್ಲಿಸುವುದಾಗಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

