ಲೋಕಸಭೆ ಚುನಾವಣೆಗೆ ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್​ ನೀಡಲು ಆಗ್ರಹ: ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ

ಈ ಬಾರಿಯ ಲೋಕಸಭೆ ಚುನಾವಣೆಗೆ ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಕೂಗು ಕೇಳಿಬಂದಿದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್​ ನೀಡಲು ಆಗ್ರಹಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಕ್ರಿಶ್ಚಿಯನ್ ಸಮುದಾಯದ ಮುಖಂಡರಿಂದ ಧರಣಿ ಮಾಡಲಾಗುತ್ತಿದೆ. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಬೊರ್ತಲೋಮ್ ಎಂಬುವರಿಗೆ ಬೆಂಗಳೂರು ಸೆಂಟ್ರಲ್​​ ಟಿಕೆಟ್​ ನೀಡುವಂತೆ ಒತ್ತಾಯಿಸಲಾಗಿದೆ. 

ಲೋಕಸಭೆ ಚುನಾವಣೆಗೆ ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್​ ನೀಡಲು ಆಗ್ರಹ: ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ
ಕೆಪಿಸಿಸಿ ಕಚೇರಿ (ಸಂಗ್ರಹ ಚಿತ್ರ)
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Mar 06, 2024 | 4:44 PM

ಬೆಂಗಳೂರು, ಮಾರ್ಚ್​ 6: ಮಧ್ಯೆ ಲೋಕಸಭೆ ಚುನಾವಣೆಗೆ (Lok Sabha Elections) ಮೂರು ಪಕ್ಷಗಳು ಭಾರಿ ಸಿದ್ಧತೆ ಮಾಡಿಕೊಳ್ಳುತ್ತೇವೆ. ಸದ್ಯ ಟಿಕೆಟ್ ಹಂಚಿಕೆಯ ಕಸರುತ್ತು ಜೋರಾಗಿದೆ. ಸದ್ಯ ಇದರ ಮಧ್ಯೆ ಕಳೆದ ಬಾರಿ 2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಅಲ್ಪಸಂಖ್ಯಾತರ ಕೋಟದಡಿಯಲ್ಲಿ ಮುಸ್ಲಿಂ ಸಮುದಾಯದ ರಿಜ್ವಾನ್ ಅರ್ಷದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಆದರೆ ಈ ಬಾರಿ ಕ್ರಿಶ್ಚಿಯನ್ ಸಮುದಾಯಕ್ಕೆ (Christian Community) ಟಿಕೆಟ್ ನೀಡಬೇಕೆಂಬ ಕೂಗು ಕೇಳಿಬಂದಿದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್​ ನೀಡಲು ಆಗ್ರಹಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಕ್ರಿಶ್ಚಿಯನ್ ಸಮುದಾಯದ ಮುಖಂಡರಿಂದ ಧರಣಿ ಮಾಡಲಾಗುತ್ತಿದೆ.

ನಮ್ಮ ಸಮುದಾಯಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ. ಕ್ರೈಸ್ತ ಸಮಾಜಕ್ಕೆ ರಾಜಕೀಯದಲ್ಲಿ ಅವಕಾಶಗಳೇ ಸಿಗುತ್ತಿಲ್ಲ. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಬೊರ್ತಲೋಮ್ ಎಂಬುವರಿಗೆ ಬೆಂಗಳೂರು ಸೆಂಟ್ರಲ್​​ ಟಿಕೆಟ್​ ನೀಡುವಂತೆ ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್​ ಖರ್ಗೆ ಹುಟ್ಟಿರುವುದೇ ಅನ್ಯಾಯ: ಈಶ್ವರಪ್ಪ ಕಿಡಿ

ಅಲ್ಪಸಂಖ್ಯಾತ ಅಂದರೆ ಮುಸ್ಲಿಂರಿಗೆ ಅವಕಾಶ ಸಿಗುತ್ತಿದೆ. ಕ್ರೈಸ್ತ ಸಮುದಾಯಕ್ಕೆ ಅವಕಾಶಗಳೇ ಸಿಗುತ್ತಿಲ್ಲ. ನಾವು ಮುಸ್ಲಿಂರಿಗೆ ಕೊಡಬೇಡಿ ಅನ್ನುವುದಿಲ್ಲ. ರಾಜ್ಯದಲ್ಲಿ ನಮ್ಮದೂ‌ ಹೆಚ್ಚಿನ ಜನಸಂಖ್ಯೆಯಿದ್ದು, ಬೆಂಗಳೂರು ಕೇಂದ್ರದಲ್ಲಿ‌ಹೆಚ್ಚಿನ ಪ್ರಮಾಣದಲ್ಲಿದ್ದೇವೆ. ನಮಗೆ ಪ್ರತಿಬಾರಿ‌ ಅನ್ಯಾಯವಾಗುತ್ತಿದೆ. ಈಗ ಲೋಕಸಭೆ ಚುನಾವಣೆ ಹತ್ತಿರ‌ಬಂದಿದೆ. ನಮ್ಮ ಸಮುದಾಯಕ್ಕೆ ಒಂದು ಟಿಕೆಟ್ ನೀಡಬೇಕು ಎಂದು ಪ್ರತಿಭಟನೆಯಲ್ಲಿ ಸಮುದಾಯದ ನಾಯಕರು ಒತ್ತಾಯಿಸಿದ್ದಾರೆ.

ಬೆಂಗಳೂರು ಗ್ರಾ. ಕ್ಷೇತ್ರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್

ದೆಹಲಿಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್​ ಪ್ರತಿಕ್ರಿಯಿಸಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ. ಬಿಜೆಪಿಯಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ. ಅಶ್ವತ್ಥ್​​ ನಾರಾಯಣ ಡಿಸಿಎಂ, ಉಸ್ತುವಾರಿ ಸಚಿವರಾಗಿದ್ದರು. ಆರ್.ಅಶೋಕ್ ವಿಪಕ್ಷ ನಾಯಕರು, ಸಮರ್ಥರಿದ್ದಾರೆ. ಅಶೋಕ್​ ಕೂಡ ಎಂಪಿ ಚುನಾವಣೆಗೆಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡಬಹುದು ಎಂದಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ್ ಪರ ಘೋಷಣೆ ಆರೋಪ: ದೇಶದ್ರೋಹಿಗಳನ್ನು ಬಂಧಿಸಲು ಯೋಚನೆ ಮಾಡಬೇಕಾ: ವಿಜಯೇಂದ್ರ ಪ್ರಶ್ನೆ

ನಿನ್ನೆ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಆಯ್ತು. ಎರಡು ದಿನಗಳಲ್ಲಿ ಅಭ್ಯರ್ಥಿ ಯಾರೆಂದು ಗೊತ್ತಾಗಲಿದೆ. ನಾನು ಮಂಜುನಾಥ್​ರನ್ನ ಒಪ್ಪಿಸುವ ಕೆಲಸ ಮಾಡಿದ್ದೇನೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ