ಕರ್ನಾಟಕದಲ್ಲಿ ಡೆಂಗ್ಯೂ ಶೇ 60 ರಷ್ಟು ಏರಿಕೆ!

ಬೆಂಗಳೂರಿನ ವಾತಾವರಣ ಆಗಾಗ ಬದಲಾಗುತ್ತಿದ್ದು ಡೆಂಗ್ಯೂ ಜ್ವರ ಪ್ರಕರಣಗಳ ಏರಿಕೆಗೆ ಕಾರಣವಾಗಿದೆ. ಸದ್ಯ ರಾಜ್ಯದಲ್ಲಿ ಶೇ60 ರಷ್ಟು ಜನರು ಡೆಂಗ್ಯೂ ರೋಗದಿಂದ ಬಳಲುತ್ತಿದ್ದಾರೆ. ರಾಜ್ಯದಲ್ಲಿ ಜನವರಿಯಿಂದ ಜೂನ್20 ರವರೆಗೆ ಒಟ್ಟು 7343 ಕೇಸ್ ಪತ್ತೆಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಜನರಿಗೆ ಡೆಂಗ್ಯೂ ಬಂದಿದೆ.

ಕರ್ನಾಟಕದಲ್ಲಿ ಡೆಂಗ್ಯೂ ಶೇ 60 ರಷ್ಟು ಏರಿಕೆ!
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Jun 25, 2024 | 3:43 PM

ಬೆಂಗಳೂರು, ಜೂನ್​ 25: ಕರ್ನಾಟಕ ಆರೋಗ್ಯ ಇಲಾಖೆಯ (Health Department) ಅಂಕಿ ಅಂಶಗಳ ಪ್ರಕಾರ 2023ಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ60 ರಷ್ಟು ಏರಿಕೆಯಾಗಿದೆ. 2023ರ ಜೂನ್​ನಲ್ಲಿ ಒಟ್ಟು 2,003 ಪ್ರಕರಣಗಳು ವರದಿಯಾಗಿದ್ದವು. ಆದರೆ, ಈ ವರ್ಷ ಜೂನ್​ನಲ್ಲಿ​ 4886 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 1,230 ಜನರಿಗೆ ಡೆಂಗ್ಯೂ ಬಂದಿದೆ.

ಬೆಂಗಳೂರಿನ ವಾತಾವರಣ ಆಗಾಗ ಬದಲಾಗುತ್ತಿದ್ದು ಡೆಂಗ್ಯೂ ಜ್ವರ ಪ್ರಕರಣಗಳ ಏರಿಕೆಗೆ ಕಾರಣವಾಗಿದೆ. ಸದ್ಯ ರಾಜ್ಯದಲ್ಲಿ ಶೇ60 ರಷ್ಟು ಜನರಿಗೆ ಡೆಂಗ್ಯೂ ಬಂದಿದೆ. ಇದರ ಜೊತೆಗೆ ಇತರ ಜ್ವರದ ಕೇಸ್​ಗಳು ಕೂಡ ಏರಿಕೆ ಕಂಡಿವೆ.

ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಬಂದಿದೆ. ಅದರಲ್ಲೂ ರಾಜಧಾನಿಯಲ್ಲಿ ಕಳೆದ ತಿಂಗಳು ಮೇನಲ್ಲಿ 727 ಇದ್ದ ಡೆಂಗ್ಯೂ ಪ್ರಕರಣಗಳು ಕಳೆದ 20 ದಿನಗಳಲ್ಲಿ 1230 ಪ್ರಕರಣಗಳು ವರದಿಯಾಗಿವೆ. ಜೂನ್ ತಿಂಗಳಿನಲ್ಲಿಯೇ ಡೆಂಗ್ಯೂ ಸಂಖ್ಯೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಜನವರಿಯಿಂದ ಸೋಮವಾರ (ಜೂ.24)ರ ವರೆಗೆ 2457 ಕೇಸ್ ಪತ್ತೆಯಾಗಿವೆ. ರಾಜ್ಯದಲ್ಲಿ ಜನವರಿಯಿಂದ ಜೂನ್20 ರವರೆಗೆ ಒಟ್ಟು 7343 ಕೇಸ್ ಪತ್ತೆಯಾಗಿವೆ. ಈ ಮೂಲಕ ಶೇ 60ರಷ್ಟು ಡೆಂಗ್ಯೂ ಪ್ರಕರಣಗಳು ಏರಿಕೆ ಕಂಡಿವೆ.

ಇದನ್ನೂ ಓದಿ: ಡೆಂಗ್ಯೂ ಜ್ವರವಿದ್ದಾಗ ಈ ಆಹಾರಗಳನ್ನು ಸೇವಿಸಿ: ಡಾ ರವಿಕಿರಣ ಪಟವರ್ಧನ

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಡಿಸ್ ಸೊಳ್ಳೆ ಉತ್ಪತ್ತಿಯನ್ನು ನಾಶ ಪಡಿಸಬೇಕು, ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸಬೇಕು. ಆಸ್ಪತ್ರೆಗಳಲ್ಲಿನ ಡೆಂಗ್ಯೂ ಪ್ರಕರಣಗಳ ಮಾನಿಟರ್ ಮಾಡಬೇಕು ವಾರ್ಡ್ ಅಥವಾ ಗ್ರಾಮಗಳಿಗೆ ಭೇಟಿ ನೀಡಿ ಶಂಕಿತ ಪ್ರಕರಣದ ಮೇಲೆ ನಿಗಾ ವಹಿಸಬೇಕು. ಶಂಕಿತ ಡೆಂಗ್ಯು ಪ್ರಕರಣಗಳ ಟೆಸ್ಟ್​​ಗೆ NSI antigen ಹಾಗೂ IgM ಟೆಸ್ಟಿಂಗ್ ಕಿಟ್ ಪರಿಶೀಲಿಸಬೇಕು ಎಂದು ಸೂಚಿಸಿದೆ.

ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಏರಿಕೆ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಜನರು ಮನೆ ಸುತ್ತ ಸ್ವಚ್ಛತೆ ಕಾಪಾಡುವುದು ಈ ಹೊತ್ತಿನಲ್ಲಿ ಅಗತ್ಯ ಮಲಗುವ ಹೊತ್ತಿನಲ್ಲಿ ಸೊಳ್ಳೆ ಪರದೆ ಹಾಕುವುದು, ಬಿಸಿ ನೀರು ಕುಡಿಯುವುದು, ಆರೋಗ್ಯಕರ ಆಹಾರ ಸೇವನೆ ಅಗತ್ಯ ಎಂಬ ಸಲಹೆ ನೀಡಿದ್ದಾರೆ. ಜ್ವರ ಬಂದು ಮೂರನೇ ದಿನಕ್ಕೆ ಬಿಟ್ಟು ಮತ್ತೆ ಜ್ವರ ಮರುಕಳಿಸಿದರೆ, ಇದರ ಜತೆ ವಾಂತಿ ಇದ್ದರೇ ಕಡ್ಡಾಯವಾಗಿ ಡೆಂಗ್ಯೂ ಟೆಸ್ಟ್ ಮಾಡಿಸಬೇಕು ಎಂದು ವೈದ್ಯರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Tue, 25 June 24