ಡೆಂಗ್ಯೂ ಹೆಚ್ಚಳಕ್ಕೆ ನಿರ್ಲಕ್ಷ್ಯವೇ ಕಾರಣ? ಆರೋಗ್ಯ ಸಚಿವರಿಂದಲೇ ಅಸಮಾಧಾನ, ಅಧಿಕಾರಿಗಳಿಗೆ ಖಡಕ್ ಸೂಚನೆ

| Updated By: ಗಣಪತಿ ಶರ್ಮ

Updated on: Jul 27, 2024 | 5:32 PM

Dengue Cases in Bengaluru: ಬೆಂಗಳೂರಿನಲ್ಲಿ ಡೆಂಗ್ಯೂ ರುದ್ರನರ್ತನ ನಿಂತಿಲ್ಲ. ಪ್ರತಿ ದಿನ ಡೆಂಘೀ ಪ್ರಕರಣಗಳು ಏರಿಕೆ ಕಾಣುತ್ತಿವೆ. ಇದು ಆರೋಗ್ಯ ಸಚಿವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ, ಅದೇನು ಮಾಡುತ್ತೀರೋ ಮಾಡಿ, ಡೆಂಗ್ಯೂ ನಿಯಂತ್ರಣಕ್ಕೆ ತಂದೇ ತರಬೇಕು ಎಂದು ಅಧಿಕಾರಿಗಳಿಗೆ ಡೆಡ್​​ಲೈನ್ ನೀಡಿದ್ದಾರೆ.

ಡೆಂಗ್ಯೂ ಹೆಚ್ಚಳಕ್ಕೆ ನಿರ್ಲಕ್ಷ್ಯವೇ ಕಾರಣ? ಆರೋಗ್ಯ ಸಚಿವರಿಂದಲೇ ಅಸಮಾಧಾನ, ಅಧಿಕಾರಿಗಳಿಗೆ ಖಡಕ್ ಸೂಚನೆ
ಡೆಂಗ್ಯೂ ಹೆಚ್ಚಳಕ್ಕೆ ನಿರ್ಲಕ್ಷ್ಯವೇ ಕಾರಣ? ಆರೋಗ್ಯ ಸಚಿವರಿಂದಲೇ ಅಸಮಾಧಾನ, ಅಧಿಕಾರಿಗಳಿಗೆ ಖಡಕ್ ಸೂಚನೆ
Follow us on

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಈ ವರ್ಷ ನೀರಿಕ್ಷೆಗೂ ಮಿರಿ ಊಹೆಗೂ ಸಿಗದಂತೆ ಡೆಂಗ್ಯೂ ಜ್ವರ ಜನರ ಜೀವ ಹಿಂಡುತ್ತಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಡೆಂಘೀ ಕೇಸ್ ನುಗ್ಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 454 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 454ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದ ಒಟ್ಟು ಡೆಂಘಿ ಪ್ರಕರಣಗಳ ಸಂಖ್ಯೆ 16492ಕ್ಕೆ ಏರಿಕೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದು ಕೂಡ 210 ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು ಈ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ 7490 ಕೇಸ್ ದಾಖಲಾಗಿದ್ದು ಆತಂಕ ಹೆಚ್ಚಿಸಿದೆ.

ಬೆಂಗಳೂರಿನಲ್ಲಿ ಪ್ರತಿ ದಿನ 200ರಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ. ಡೆಂಗ್ಯೂ ಹೆಚ್ಚಳಕ್ಕೆ ನಿರ್ಲಕ್ಷ್ಯವೇ ಕಾರಣವಾ ಎಂಬ ಮಾತುಗಳು ಕೇಳಿ ಬರುತ್ತಿವೆ. ಖುದ್ದು ಆರೋಗ್ಯ ಸಚಿವ ದಿನೆಶ್ ಗುಂಡೂರಾವ್ ಅವರೇ ಈ ಕುರಿತು ಅಸಮಾಧಾನ ಹೊರಹಾಕಿದ್ದಾರೆ. ಅಷ್ಟೆ ಅಲ್ಲ ಡೆಂಘಿ ನಿರ್ವಹಣೆಗೆ ಡೆಡ್ ಲೈನ್ ಕೂಡ ನೀಡಿದ್ದಾರೆ.

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಗುಂಡೂರಾವ್

ಬೆಂಗಳೂರಿನಲ್ಲಿ ಮಹದೇವಪುರ ಡೆಂಘಿ ಹಾಟ್​​ಸ್ಪಾಟ್ ಆಗಿದೆ.‌ ಸೋಂಕು ನಿಯಂತ್ರಣದ ಜವಾಬ್ದಾರಿ ಹೊತ್ತ ಅಧಿಕಾರಿಗಳಿಗೆ ಆರೋಗ್ಯ ಸಚಿವರು ಬಿಸಿ‌ ಮುಟ್ಟಿಸಿದ್ದಾರೆ. ಎರಡು ವಾರಗಳಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ತರಬೇಕೆಂದು ಖಡಕ್ ಸೂಚನೆ‌ ನೀಡಿರುವ ಸಚಿವರು, ತಾವು ಕಾರ್ಯ ನಿರ್ವಹಿಸುವ ಕೆಲಸವನ್ನು ಫೋಟೊ ತೆಗೆದು ಕಳುಹಿಸಬೇಕೆಂದು ತಾಕೀತು ಮಾಡಿದ್ದಾರೆ.

ಮಕ್ಕಳ ಬಗ್ಗೆ ಕಾಳಜಿ ವಹಿಸಲು ವೈದ್ಯರ ಎಚ್ಚರಿಕೆ

ವೈದ್ಯರು ಕೂಡ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಮಳೆಗಾಲ ಕಡಿಮೆಯಾಗುವರೆಗೂ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಮಕ್ಕಳ ಆರೋಗ್ಯ ಬಗ್ಗೆ ಗಮನ ಹರಿಸುವಂತೆ ಕೆಸಿ ಜನರಲ್ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ ಶ್ರುತಿ ಹೆಗಡೆ ಪೋಷಕರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನ ನಿಗಾ ವಹಿಸಿ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಿಂದ ಆಸ್ಪತ್ರೆಗಳಲ್ಲಿ ಮೀಸಲಿಟ್ಟಿರುವ ಡೆಂಗ್ಯೂ ವಾರ್ಡ್​ಗಳೆಲ್ಲ ಸದ್ಯ ಭರ್ತಿಯಾಗುತ್ತಿವೆ. ಮಕ್ಕಳು ಕೂಡ ಡೆಂಗ್ಯೂಗೆ ಒಳಪಟ್ಟು ಒದ್ದಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ