ಕೊರೋನಾಗಿಂತ ಡೆಂಗ್ಯೂ ಆತಂಕವೇ ಹೆಚ್ಚು; ಅವಿಭಜಿತ ಜಿಲ್ಲೆಗಳಲ್ಲಿ 800ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಮಳೆ ಆರ್ಭಟ ಕಡಿಮೆಯಾದರೂ ಮಹಮಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿಲ್ಲ. ಅಕಾಲಿಕವಾಗಿ ಮಳೆ ಬಂದು ಹೋಗುತ್ತಿರುವುದರಿಂದ ಕೊರೋನಾಗಿಂತ ಹೆಚ್ಚು ಮಾರಕವಾಗಿ ಡೆಂಗ್ಯೂ ಜ್ವರ ಕಾಡುತ್ತಿದೆ.

ಕೊರೋನಾಗಿಂತ ಡೆಂಗ್ಯೂ ಆತಂಕವೇ ಹೆಚ್ಚು; ಅವಿಭಜಿತ ಜಿಲ್ಲೆಗಳಲ್ಲಿ 800ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ
ಕರ್ನಾಟಕದಲ್ಲಿ ಹೆಚ್ಚಿದ ಡೆಂಗ್ಯೂ
Follow us
TV9 Web
| Updated By: Rakesh Nayak Manchi

Updated on:Nov 06, 2022 | 4:44 PM

ಮಂಗಳೂರು: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಆತಂಕ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಜ್ವರ, ಮೈ ಕೈ ನೋವು, ತಲೆನೋವು ಸೇರಿದಂತೆ ಡೆಂಗ್ಯೂ ರೋಗ ಲಕ್ಷಣವುಳ್ಳ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದೆ. ಕಳೆದೆರಡು ವರ್ಷಕ್ಕಿಂತ ಈ ಬಾರಿ ಶೇಕಡಾ 25 ರಷ್ಟು ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿದರೆ ಪಕ್ಕದ ಜಿಲ್ಲೆ ಉಡುಪಿಯಲ್ಲಿ 500ರ ಗಡಿ ದಾಟಿದೆ. ಗ್ರಾಮೀಣ ಭಾಗದಲ್ಲಿ ರಬ್ಬರ್, ಅಡಿಕೆ ತೋಟಗಳೇ ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಲಾರ್ವಾ ಉತ್ಪತ್ತಿ ತಾಣಗಳಾಗುತ್ತಿದ್ದರೆ ನಗರದಲ್ಲಿ ನೀರು ನಿಲ್ಲುವ ಹೂವಿನ ಕುಂಡ, ಟೈರ್, ತೆರೆದಿಡುವ ನೀರಿನ ಟ್ಯಾಂಕ್, ಟೆರೇಸ್ ಮೇಲಿರುವ ಒವರ್ ಹೆಡ್ ಟ್ಯಾಂಕ್ ಕಾರಣವಾಗುತ್ತಿದೆ.

ನಿಮಗೆ ತಿಳಿದಿರಬೇಕಾದ ಅಂಶಗಳು

  • ತಿಳಿನೀರಿನಲ್ಲಿ ಉತ್ಪತ್ತಿಯಾಗುವ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆಯೇ ಡೆಂಗೆ ಹರಡಲು ಕಾರಣವಾಗುತ್ತದೆ.
  • ಹಗಲೊತ್ತಿನಲ್ಲಿ ಕಚ್ಚುವ ಈ ಸೊಳ್ಳೆ ನೀರಿನಲ್ಲಿ ಮೊಟ್ಟೆಯಿಟ್ಟು ಸಂತಾನೋತ್ಪತ್ತಿ ಮಾಡುತ್ತದೆ.
  • ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, ಗರ್ಭಿಣಿಯರು, ವೃದ್ಧರು, ರೋಗಿಗಳು ಎಚ್ಚರಿಕೆ ಇರಬೇಕು.
  • ಡೆಂಗ್ಯೂ ಶಾಕ್ ಸಿಂಕ್ರೋಮ್‌ನಿಂದ ರೋಗಿಗಳು ಸಾವಿಗೀಡಾಗುವ ಸಾಧ್ಯತೆಗೆಳು ಹೆಚ್ಚು.

ಸದ್ಯ ಆರೋಗ್ಯ ಇಲಾಖೆ ಸೊಳ್ಳೆ ನಿಯಂತ್ರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ರ್ಯಾಪಿಡ್ ಟೆಸ್ಟಿಂಗ್ ಟೀಮ್‌ಗಳನ್ನು ರಚಿಸಿ ತೊಟ್ಟಿಗಳು, ಕೆರೆಗಳು, ನೀರು ನಿಲ್ಲುವ ಜಾಗಗಳಲ್ಲಿ ಲಾರ್ವಗಳನ್ನು ನಾಶಪಡಿಸಲು ಗಪ್ಪಿ ಮೀನುಗಳನ್ನು ಬಿಡಲಾಗುತ್ತಿದೆ. ಒಟ್ಟಿನಲ್ಲಿ ಡೆಂಗೆ ಮಹಾಮಾರಿ ನಿಯಂತ್ರಣದ ಬಗ್ಗೆ ಜನ ಇನ್ನಷ್ಟು ಜಾಗೃತರಾಗಬೇಕಿದೆ.

ವರದಿ: ಅಶೋಕ್ ಟಿವಿ9 ಮಂಗಳೂರು

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Sun, 6 November 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ