Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಡೆಂಗ್ಯೂ ರೋಗ ಪ್ರಕರಣ ಸಂಖ್ಯೆಯಲ್ಲಿ ಏರಿಕೆ; ಬೆಂಗಳೂರಿನಲ್ಲಿ ಅಧಿಕ ಬಾಧಿತರು

ಆಗಷ್ಟ ತಿಂಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದ್ದ ಡೆಂಗ್ಯೂ ಪ್ರಕರಣಗಳು, ಮೊನ್ನೆ ಸುರಿದ ಮಳೆಯಿಂದ ಮತ್ತೆ ಹೆಚ್ಚಳವಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಶೇ 22 ರಷ್ಟು ಡೆಂಗ್ಯೂ ರೋಗಿಗಳ ಸಂಖ್ಯೆ ಏರಿಕೆಯಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಉತ್ತಮ‌ ಮಳೆಯಾಗುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ರಾಜ್ಯದಲ್ಲಿ ಡೆಂಗ್ಯೂ ರೋಗ ಪ್ರಕರಣ ಸಂಖ್ಯೆಯಲ್ಲಿ ಏರಿಕೆ; ಬೆಂಗಳೂರಿನಲ್ಲಿ ಅಧಿಕ ಬಾಧಿತರು
ಡೆಂಗ್ಯೂ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 04, 2023 | 7:17 AM

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಜ್ವರ, ಶೀತ, ಡೆಂಗ್ಯೂ ಹಾಗೂ ಮಲೇರಿಯಾ ರೋಗಗಳು ಜನರನ್ನು ಬಾಧಿಸುತ್ತಿವೆ. ಅದರಲ್ಲಂತು ಡೆಂಗ್ಯೂ (Dengue) ರೋಗ ಅಪಾಯಕಾರಿ ರೋಗವಾಗಿದ್ದು, ನಿರ್ಲಕ್ಷಿಸಿದರೇ ಸಾವು ಕಟ್ಟಿಟ್ಟಬುತ್ತಿ. ಈ ವರ್ಷವೂ ರಾಜ್ಯದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ (Malaria) ರೋಗಿಗಳ ಸಂಖ್ಯೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯಲ್ಲೂ ಕೂಡ ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಏರಿಕೆಯಾಗಿವೆ. ಜುಲೈ 1ರಿಂದ ಜುಲೈ 30ರ ವರೆಗೆ ಬೆಂಗಳೂರು (Bengaluru) ನಗರದಲ್ಲಿ ಬರೋಬ್ಬರಿ 1,649 ಪ್ರಕರಣ ದಾಖಲಾಗಿದೆ.

ಆಗಷ್ಟ ತಿಂಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದ್ದ ಡೆಂಗ್ಯೂ ಪ್ರಕರಣಗಳು, ಮೊನ್ನೆ ಸುರಿದ ಮಳೆಯಿಂದ ಮತ್ತೆ ಹೆಚ್ಚಳವಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಶೇ 22 ರಷ್ಟು ಡೆಂಗ್ಯೂ ರೋಗಿಗಳ ಸಂಖ್ಯೆ ಏರಿಕೆಯಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಡೆಂಗ್ಯೂ ಪ್ರಕರಣ ದಾಖಲು

2022ರ ಜನವರಿಯಿಂದ 2023 ಆಗಸ್ಟ್​​​ವರೆಗೆ 4,507 ಪ್ರಕರಣ ದಾಖಲಾಗಿತ್ತು. 2023 ಒಂದರಲ್ಲೇ 5,526 ಪ್ರಕರಣ ದಾಖಲಾಗಿವೆ. ಬೆಂಗಳೂರು ಒಂದರಲ್ಲೇ 2,969 ಜನರಿಗೆ ಡೆಂಗ್ಯೂ ಕಾಡುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 22ಕ್ಕಿಂತ ಅಧಿಕ ಪ್ರಕರಣ ದಾಖಲಾಗಿವೆ.

ಇದನ್ನೂ ಓದಿ: ಡೆಂಗ್ಯೂ ಬಾರದಂತೆ ತಡೆಯುವುದು ಹೇಗೆ? ಸೋಂಕಿನ ಲಕ್ಷಣ, ಚಿಕಿತ್ಸೆ ಬಗ್ಗೆ ಇಲ್ಲಿದೆ ವಿವರ

ಡೆಂಗ್ಯೂ ರೋಗದ ಲಕ್ಷಣಗಳು

ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು, ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಡೆಂಗ್ಯೂ ರೋಗದ ಲಕ್ಷಣಗಳು. ಇನ್ನು ಮುಂದಿನ ದಿನಗಳಲ್ಲಿ ಉತ್ತಮ‌ ಮಳೆಯಾಗುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ