AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮುಂದುವರಿದ ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು ದೃಢ

ಕರ್ನಾಟಕದಲ್ಲಿ ಡೆಂಗ್ಯೂ ಸೋಂಕಿನ ಅಬ್ಬರ ಮುಂದುವರೆದಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 7,840ಕ್ಕೆ ಏರಿಕೆ ಆಗಿದೆ. ಡೆಂಗ್ಯೂ ಜ್ವರದ ಸಕ್ರಿಯ ಪ್ರಕರಣಗಳ ಸಂಖ್ಯೆ 100 ಇದು. ಇಂದು ಡೆಂಗ್ಯೂಗೆ ರಾಜ್ಯದಲ್ಲಿ ಯಾವುದೆ ಸಾವಾಗಿಲ್ಲ.

ಕರ್ನಾಟಕದಲ್ಲಿ ಮುಂದುವರಿದ ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು ದೃಢ
ಕರ್ನಾಟಕದಲ್ಲಿ ಮುಂದುವರಿದ ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು ದೃಢ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:Jul 10, 2024 | 10:32 PM

ಬೆಂಗಳೂರು, ಜುಲೈ 10: ಕರ್ನಾಟಕದಾದ್ಯಂತ ಡೆಂಗ್ಯೂ (Dengue) ಮಹಾಮಾರಿ ದಿಗಿಲು ಮೂಡಿಸಿದೆ. ನಿತ್ಯ ನೂರಾರು ಕೇಸ್​ಗಳು ದಾಖಲಾಗುತ್ತಿದ್ದು, ಜನರು ಆತಂಕಗೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಸೋಂಕಿನ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 293 ಜನರಿಗೆ ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 7,840ಕ್ಕೆ ಏರಿಕೆ ಆಗಿದೆ. ಡೆಂಗ್ಯೂ ಜ್ವರದ ಸಕ್ರಿಯ ಪ್ರಕರಣಗಳ ಸಂಖ್ಯೆ 100 ಇದೆ. ಇಂದು ಡೆಂಗ್ಯೂ ರಾಜ್ಯದಲ್ಲಿ ಯಾವುದೆ ಸಾವು ಸಂಭವಿಸಿಲ್ಲ.

24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 7 ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ 118 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿವೆ. ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 7840ಕ್ಕೆ ಏರಿಕೆ ಆಗಿದೆ. ಇದುವರೆಗೆ ರಾಜ್ಯದಲ್ಲಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಡೆಂಗ್ಯೂ ಹೆಚ್ಚಳಕ್ಕೆ ಹೈಕೋರ್ಟ್ ಕಳವಳ: ಸರ್ಕಾರಕ್ಕೆ ಖಡಕ್​ ಸೂಚನೆ

ಮಳೆಗಾಲದಲ್ಲೇ ಡೆಂಗ್ಯೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತೆ. ಹೀಗಾಗಿ ನೀರು ನಿಲ್ಲದಂತೆ ಸ್ವಚ್ಛತೆಗೆ ಆದ್ಯತೆ, ಸೊಳ್ಳೆಗಳ ನಾಶಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಪ್ರತಿ ಜಿಲ್ಲೆಯಲ್ಲಿ 10 ಪ್ರತ್ಯೇಕ ಡೆಂಗ್ಯೂ ವಾರ್ಡ್ ತೆರೆಯಬೇಕು. ಡೆಂಗ್ಯೂ ಕಂಟ್ರೋಲ್​ಗೆ ಟಾಸ್ಕ್​ಫೋರ್ಸ್ ರಚನೆ ಮಾಡಬೇಕು. ಕೊಳಗೇರಿ ಪ್ರದೇಶದಲ್ಲೇ ಹೆಚ್ಚು ಡೆಂಗ್ಯೂ ವ್ಯಾಪಿಸಿದೆ. ಹೀಗಾಗಿ ಸ್ಲಂ ನಿವಾಸಿಗಳಿಗೆ ಉಚಿತವಾಗಿ ಸೊಳ್ಳೆ ಪರದೆ ವಿತರಣೆ ಮಾಡುವಂತೆ ಸೂಚಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Dengue Cases in Karnataka: ಒಂದೇ ದಿನ ಬೆಂಗಳೂರಿನಲ್ಲಿ 91 ಡೆಂಗ್ಯೂ ಪ್ರಕರಣ ಪತ್ತೆ; ಶಿವಮೊಗ್ಗದಲ್ಲಿ ಮಹಿಳೆ ಸಾವು

ಹಾಸನ ಜಿಲ್ಲೆ ಬಳಿಕ ಶಿವಮೊಗ್ಗದಲ್ಲಿ ಮಹಿಳೆಯೊಬ್ಬರು ಡೆಂಗ್ಯೂಗೆ ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ರಶ್ಮಿ ಮೃತ ದುರ್ದೈವಿ. ಕಳೆದ 15 ದಿನದಿಂದ ತೀವ್ರ ಜ್ವರದಿಂದ ನರಳುತ್ತಿದ್ದರು. ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಡೆಂಗ್ಯೂ ಕಂಟ್ರೋಲ್​ಗೆ ಟಾಸ್ಕ್ ಫೋರ್ಸ್

ಡೆಂಗ್ಯೂ ಕ್ರೌರ್ಯ ಸರ್ಕಾರವನ್ನೂ ನಡುಗುವಂತೆ ಮಾಡಿದೆ. ಐಎಎಸ್​ ಅಧಿಕಾರಿಗಳಿಗೆ ಬಿಸಿ ತಾಕಿಸಿದ್ದ ಸಿಎಂ, ನಿನ್ನೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:10 pm, Wed, 10 July 24

ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ