ಡಿನೋಟಿಫಿಕೇಷನ್ ಪ್ರಕರಣ: ಮುಂದಿನ ವಿಚಾರಣೆ ವೇಳೆ ತಪ್ಪದೇ ಹೆಚ್‌ಡಿಕೆ ಹಾಜರಿಗೆ ಕೋರ್ಟ್ ಖಡಕ್ ಸೂಚನೆ
ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಲಾಸ್ಟ್ ಖಡಕ್ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮುಂದಿನ ವಿಚಾರಣೆ ವೇಳೆ ಹಾಜರಾಗುವ ಅನಿರ್ವಾತೆಯಲ್ಲಿ ಸಿಲುಕಿದ್ದಾರೆ.
ಬೆಂಗಳೂರು: ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ(denotification case )ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಪದೇಪದೇ ಗೈರಾಗುತ್ತಿರುವುದಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್(special Court) ಅಸಮಾಧಾನ ವ್ಯಕ್ತಪಡಿಸಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಹಿನ್ನೆಲೆಯಲ್ಲಿ ಹಾಜರಾತಿಯಿಂದ ವಿನಾಯಿತಿ ಕೋರಿ ಹೆಚ್.ಡಿ.ಕುಮಾರಸ್ವಾಮಿ ಪರ ಅರ್ಜಿ ಸಲ್ಲಿಸಿದರು. ಇದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ, ಮುಂದಿನ ವಿಚಾರಣೆ ವೇಳೆ ತಪ್ಪದೇ ಕುಮಾರಸ್ವಾಮಿ ಹಾಜರಾಗಬೇಕೆಂದು ಸೂಚನೆ ನೀಡಿದೆ.
ಇದನ್ನೂ ಓದಿ: ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ ಪಾವತಿಸದಕ್ಕೆ ಕರ್ನಾಟಕದ ಇಬ್ಬರು IAS ಅಧಿಕಾರಿಗಳಿಗೆ ಬಂಧನ ವಾರಂಟ್
ಮುಂದಿನ ವಿಚಾರಣೆ ವೇಳೆ ತಪ್ಪದೇ ಕುಮಾರಸ್ವಾಮಿ ಹಾಜರಿಗೆ ಕೋರ್ಟ್ ಸೂಚಿಸಿದೆ. ಇದಕ್ಕೆ ಕುಮಾರಸ್ವಾಮಿ ಪರ ವಕೀಲ ಪ್ರತಿಕ್ರಿಯಿಸಿ, ಹೆಚ್.ಡಿ.ಕುಮಾರಸ್ವಾಮಿ ಹಾಜರಿ ಇರಿಸುವುದಾಗಿ ಭರವಸೆ ನೀಡಿದರು. ಬಳಿಕ ನ್ಯಾಯಾಲಯ ಮಂದಿನ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ. ಚುನಾವಣೆಯಲ್ಲಿ ಬ್ಯುಸಿಯಾಗಿರುವ ಕುಮಾರಸ್ವಾಮಿಗೆ ಇದೀಗ ಕೋರ್ಟ್ಗೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ.
ಚಾಮರಾಜನಗರದ ಎಂ.ಎಸ್.ಮಹಾದೇವಸ್ವಾಮಿ ದೂರು ದಾಖಲಿಸಿದ್ದರು. ಈ ಹಿಂದೆ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ನ್ಯಾಯಾಲಯ, ಬಿ ರಿಪೋರ್ಟ್ ತಿರಸ್ಕರಿಸಿ ವಿಚಾರಣೆಗೆ ಹಾಜರಾಗಬೇಕೆಂದು ಕುಮಾರಸ್ವಾಮಿಗೆ ಸಮನ್ಸ್ ಜಾರಿಗೊಳಿಸಿತ್ತು. ಸದ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮಾಜಿ ಮುಖ್ಯಮಂತ್ರಿ ಹೆಚ್ಡಿಎ ಕುಮಾರಸ್ವಾಮಿ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಹಗಲಿರುಳು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಮತದಾರರ ಮನಗೆಲ್ಲಲು ಪಂಚರತ್ನ ಯಾತ್ರೆ ಮೂಲಕ ಪ್ರತಿ ವಿಧಾಸನಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.
ಬಿಜೆಪಿ ಸಂಸದ ಸಂಗಣ್ಣ ಕರಡಿ ಬೆಂಬಲಿಗರು ಖುಲಾಸೆ
ಬೆಂಗಳೂರು: ರೈತರ ಸಾಲಮನ್ನಾಗೆ ಆಗ್ರಹಿಸಿ ಪ್ರತಿಭಟನೆ ವೇಳೆ ಗಲಾಟೆ ಪ್ರಕರಣದಲ್ಲಿ ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಹಾಗೂ ಅವರ ಬೆಂಬಲಿಗರ ವಿರುದ್ಧ ದೂರು ದಾಖಲಾಗಿತ್ತು. ಆದ್ರೆ, ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. 2018ರ ಮೇ 28ರಂದು ಕೊಪ್ಪಳದಲ್ಲಿ ಪ್ರತಿಭಟನೆ ವೇಳೆ ಗಲಾಟೆ ಆಗಿತ್ತು. ಆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ, ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿ ಕೋರ್ಟ್ ಆದೇಶಿಸಿದೆ.
Published On - 7:59 pm, Thu, 16 February 23