ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ

ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರದ​ ಜತೆ ಶೇ.5ರಷ್ಟು ದರ ನಿಗದಿ ಮಾಡಿದೆ.

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 25, 2022 | 2:29 PM

ಬೆಂಗಳೂರು; ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರ ​ ಜತೆಗೆ ಶೇ.5ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ಶೇ. 5ರಷ್ಟು ಹೆಚ್ಚುವರಿ ದರದ ಜತೆ 5% ಜಿಎಸ್​ಟಿ ಸೇರಿಸಲು ಆದೇಶವನ್ನು ನೀಡಿದೆ. ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ. ಇಂದು ಈ ಬಗ್ಗೆ ಹೈಕೋರ್ಟ್​ನಿಂದ ಮಹತ್ವದ ಆದೇಶ ಪ್ರಕಟಿಸುವುದಷ್ಟೇ ಬಾಕಿ ಎಂದು ರಾಜ್ಯ ಸಾರಿಗೆ ಇಲಾಖೆ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಶುಲ್ಕ ವಿಧಿಸಲು ಅವಕಾಶ ಕೋರಿ ಹೈಕೋರ್ಟ್​ಗೆ ಓಲಾ, ಉಬರ್ ಅರ್ಜಿ: 5 ದಿನದಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ

ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಓಲಾ ಹಾಗೂ ಉಬರ್​ ಪ್ರಯಾಣ ದರವನ್ನು ನಿಗದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ 15 ದಿನಗಳ ಕಾಲಾವಕಾಶ ನೀಡಿತ್ತು. ಆದ್ರೆ ಕಾಟಾಚಾರಕ್ಕೆ ಸಭೆ ಮಾಡಿ ಸುಮ್ಮನಾಗಿದ್ದ ಸಾರಿಗೆ ಇಲಾಖೆ ಇದೀಗ ದರ ನಿಗದಿ ಮಾಡಿ. ಈ ಬಗ್ಗೆ ಹೈಕೋರ್ಟ್​ಗೂ ಸಾರಿಗೆ ಇಲಾಖೆ ವರದಿಯನ್ನು ನೀಡಿದೆ. ಇದೀಗ ಹೈಕೋರ್ಟ್ ತೀರ್ಪು ಬಾಕಿದೆ.

ಓಲಾ, ಉಬರ್, Rapido ಕಂಪನಿಗಳೊಂದಿಗೆ ಸಭೆ ನಡೆಸಿ ದರ ನಿಗದಿ ಬಗ್ಗೆ ಚರ್ಚಿಸಿ ಸಾರಿಗೆ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಆ್ಯಪ್ ಆಧಾರಿತ ಓಲಾ- ಉಬರ್ Rapido ಹಾಗೂ ಸರ್ಕಾರದ ನಡುವೆ ದರ ನಿಗದಿ ಹಗ್ಗಜಗ್ಗಾಟ ಒಂದು ರೀತಿಯ ಅಂತ್ಯವಾಗಿದೆ ಎಂದು ಹೇಳಬಹುದು. ಸಭೆಯಲ್ಲಿ ಕನಿಷ್ಠ 2 ಕಿ.ಮೀ.ಗೆ 100 ರೂ. ನಿಗದಿ ಮಾಡುವಂತೆ ಕಂಪನಿಗಳು ಡಿಮ್ಯಾಂಡ್ ಮಾಡಿತ್ತು. ಆದರೆ ಸಾರಿಗೆ ಇಲಾಖೆ ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Fri, 25 November 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು