ಬೆಂಗಳೂರು; ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರ ಜತೆಗೆ ಶೇ.5ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.
ಶೇ. 5ರಷ್ಟು ಹೆಚ್ಚುವರಿ ದರದ ಜತೆ 5% ಜಿಎಸ್ಟಿ ಸೇರಿಸಲು ಆದೇಶವನ್ನು ನೀಡಿದೆ. ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್ಗೆ ವರದಿ ಸಲ್ಲಿಸಿದೆ. ಇಂದು ಈ ಬಗ್ಗೆ ಹೈಕೋರ್ಟ್ನಿಂದ ಮಹತ್ವದ ಆದೇಶ ಪ್ರಕಟಿಸುವುದಷ್ಟೇ ಬಾಕಿ ಎಂದು ರಾಜ್ಯ ಸಾರಿಗೆ ಇಲಾಖೆ ಹೇಳಿದೆ.
ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಓಲಾ ಹಾಗೂ ಉಬರ್ ಪ್ರಯಾಣ ದರವನ್ನು ನಿಗದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 15 ದಿನಗಳ ಕಾಲಾವಕಾಶ ನೀಡಿತ್ತು. ಆದ್ರೆ ಕಾಟಾಚಾರಕ್ಕೆ ಸಭೆ ಮಾಡಿ ಸುಮ್ಮನಾಗಿದ್ದ ಸಾರಿಗೆ ಇಲಾಖೆ ಇದೀಗ ದರ ನಿಗದಿ ಮಾಡಿ. ಈ ಬಗ್ಗೆ ಹೈಕೋರ್ಟ್ಗೂ ಸಾರಿಗೆ ಇಲಾಖೆ ವರದಿಯನ್ನು ನೀಡಿದೆ. ಇದೀಗ ಹೈಕೋರ್ಟ್ ತೀರ್ಪು ಬಾಕಿದೆ.
ಓಲಾ, ಉಬರ್, Rapido ಕಂಪನಿಗಳೊಂದಿಗೆ ಸಭೆ ನಡೆಸಿ ದರ ನಿಗದಿ ಬಗ್ಗೆ ಚರ್ಚಿಸಿ ಸಾರಿಗೆ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಆ್ಯಪ್ ಆಧಾರಿತ ಓಲಾ- ಉಬರ್ Rapido ಹಾಗೂ ಸರ್ಕಾರದ ನಡುವೆ ದರ ನಿಗದಿ ಹಗ್ಗಜಗ್ಗಾಟ ಒಂದು ರೀತಿಯ ಅಂತ್ಯವಾಗಿದೆ ಎಂದು ಹೇಳಬಹುದು. ಸಭೆಯಲ್ಲಿ ಕನಿಷ್ಠ 2 ಕಿ.ಮೀ.ಗೆ 100 ರೂ. ನಿಗದಿ ಮಾಡುವಂತೆ ಕಂಪನಿಗಳು ಡಿಮ್ಯಾಂಡ್ ಮಾಡಿತ್ತು. ಆದರೆ ಸಾರಿಗೆ ಇಲಾಖೆ ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.
ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:08 pm, Fri, 25 November 22