Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪರಿಣಾಮ ಕರ್ನಾಟಕ ಹಲವು ಭಾಗಗಳಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ
ಮಳೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 25, 2022 | 4:24 PM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮುಂದಿನ 4 ದಿನ ಕರ್ನಾಟಕದ (Karnataka) ಹಲವೆಡೆ ಮಳೆ (Rain) ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ(Bengaluru Weather)) ಇಂದು(ಡಿಸೆಂಬರ್ 25) ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣವಿದ್ದು, ಅದು ನಾಳೆಯೂ ಮುಂದುವರಿಯಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಂದ್ರೆ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಸೂಚಿಸಿದೆ.

ಡಿಸೆಂಬರ್ 27 ಮತ್ತು 28 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮಳೆ ಸಾಧ್ಯತೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಕೂಲ್ ವೆದರ್ ಇನ್ನೂ ಎರಡು ದಿನ ಮುಂದುವರೆಯಲಿದೆ. ಇನ್ನು ಇದೇ ಡಿಸೆಂಬರ್ ತಿಂಗಳ ಆರಂಭದಲ್ಲಿ ಕರ್ನಾಟಕದಾದ್ಯಂತ ಒಂದು ವಾರ ಕಾಲ ಮೋಡಕವಿದ ವಾತಾವರಣದ ಜೊತೆ ತುಂತೂರು ಮಳೆಯಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:04 pm, Sun, 25 December 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ