ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮಳೆ, ಚಳಿಗಾಳಿ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದ್ದು, ಚಳಿಗಾಳಿ ಬೀಸುತ್ತಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮಳೆ, ಚಳಿಗಾಳಿ
ಬೆಂಗಳೂರಿನಲ್ಲಿ ಗುರುವಾರ ಇಡೀದಿನ ಮಳೆ ಸುರಿಯಿತು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 11, 2021 | 6:18 PM

ಬೆಂಗಳೂರು: ಬಂಗಾಳ ಕೊಲ್ಲಿಯ ತಮಿಳುನಾಡು ಮತ್ತು ಆಂಧ್ರ ಪ್ರದೇಶದ ತೀರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಗುರುವಾರ ವ್ಯಾಪಕವಾಗಿ ಮಳೆ ಸುರಿಯಿತು. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದ್ದು, ಚಳಿಗಾಳಿ ಬೀಸುತ್ತಿದೆ. ಉಷ್ಣಾಂಶ ಕಡಿಮೆಯಾಗಿದ್ದು ರಸ್ತೆಗಳಲ್ಲಿ ಹೆಚ್ಚಿನ ಜನಸಂಚಾರ ಕಾಣಿಸುತ್ತಿಲ್ಲ. ಮನೆಗಳಲ್ಲಿಯೇ ನಡುಗುತ್ತಾ ಕುಳಿತಿದ್ದಾರೆ. ಬುಧವಾರ ಸಂಜೆಯಿಂದ ಆರಂಭವಾದ ಮಳೆ ಮುಂಜಾನೆಗೂ ಬಿಡುವು ಕೊಟ್ಟಿರಲಿಲ್ಲ. ಮಕ್ಕಳು ಒಲ್ಲದ ಮನಸ್ಸಿನಿಂದಲೇ ಶಾಲೆಗಳಿಗೆ ಹೋದರು.

ಮಳೆ ಮತ್ತು ಚಳಿಗಾಳಿ ಹೆಚ್ಚಾಗಿದ್ದರೂ ಜನರು ಪುನೀತ್​ ರಾಜ್​ಕುಮಾರ್ ಸಮಾಧಿ ದರ್ಶನ ಪಡೆಯಲು ಬರುತ್ತಲೇ ಇದ್ದರು. ಚಿಕ್ಕಪುಟ್ಟ ಮಕ್ಕಳೊಂದಿಗೆ ಬಂದಿದ್ದ ಹಲವರು ಮಳೆಯಲ್ಲಿ ನೆನೆಯುತ್ತಲೇ ಪುನೀತ್ ಸಮಾಧಿ ದರ್ಶನ ಮಾಡಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಜಿಕೆವಿಕೆ) ಆವರಣದಲ್ಲಿ ಆರಂಭವಾಗಿರುವ ಕೃಷಿ ಮೇಳದ ಮೇಲೆ ಮಳೆಯ ಪರಿಣಾಮ ಗೋಚರಿಸಿದೆ. ಧಾರಾಕಾರವಾಗಿ ಮಳೆ ಸುರಿದ ಕಾರಣ ಗ್ರಾಹಕರಿಲ್ಲದೆ ಸ್ಟಾಲ್​ಗಳು ಖಾಲಿಖಾಲಿಯಾಗಿದ್ದವು. ಈ ಬಾರಿ ಒಟ್ಟು 550 ಸ್ಟಾಲ್​ಗಳಿಗೆ ಅವಕಾಶ ನೀಡಲಾಗಿತ್ತು. ಮೊದಲ ದಿನವೇ 20 ಸಾವಿರ ಜನರು ಭೇಟಿ ಕೊಡುವ ನಿರೀಕ್ಷೆಯಿತ್ತು. ಆದರೆ ಮಳೆಯ ಕಾರಣದಿಂದಾಗಿ ಕೃಷಿಮೇಳಕ್ಕೆ ಆಗಮಿಸುವ ಗ್ರಾಹಕರ ಸಂಖ್ಯೆ ಕಡಿಮೆಯಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಶಾಲೆಗಳಿಂದ ಮಕ್ಕಳನ್ನ ಕರೆತರಲು ಪೋಷಕರು ಕಷ್ಟಪಡುತ್ತಿದ್ದಾರೆ. ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸವಾರರಿಗೂ ಸಂಕಷ್ಟ ಎದುರಾಗಿದೆ.

ಕೋಲಾರಕ್ಕೆ ಯೆಲ್ಲೊ ಅಲರ್ಟ್ ಕೋಲಾರ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿತ್ತು. ನಿನ್ನೆ ರಾತ್ರಿಯಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಜನರು ಬೆಚ್ಚನೆಯ ಉಡುಪು ತೊಟ್ಟು ಮಳೆಯಲ್ಲೇ ತಮ್ಮ ಕೆಲಸ ಕಾರ್ಯದಲ್ಲಿ ತೊಡಗಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ಯೆಲ್ಲೊ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 24 ಗಂಟೆಯಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸಾರ್ವಜನಿಕರ ನೆರವಿಗಾಗಿ ತಹಶೀಲ್ದಾರ್​ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ತುರ್ತು ಸಂದರ್ಭಗಳಲ್ಲಿ 97400 50061, 99163 01221 ಸಂಖ್ಯೆಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ವಾಯುಭಾರ ಕುಸಿತ ಹಿನ್ನಲೆ ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆ ಮುಂದುವರಿದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ರೈತರ ಬೆಳೆದಿರುವ ಹೂ, ಹಣ್ಣು ತರಕಾರಿ ಬೆಳೆಗಳಿಗೆ ಹಾನಿಯಾಗುವ ಭೀತಿ ಕಾಣಿಸಿಕೊಂಡಿದೆ. ಚಳಿಗಾಳಿ ಮಳೆಗೆ ಜಿಲ್ಲೆಯ ಜನರು ತತ್ತರಿಸಿದ್ದು, ಜರ್ಕಿನ್, ಛತ್ರಿ, ಸ್ವೇಟರ್​ಧಾರಿಗಳೇ ಎಲ್ಲೆಲ್ಲೂ ಕಾಣಿಸುತ್ತಿದ್ದಾರೆ.

ಈ ನಡುವೆ ಹವಾಮಾನ ಇಲಾಖೆಯು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಮಳೆ ಕ್ಷೀಣಿಸಿದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್​ ಹಿಂಪಡೆದಿದೆ. ನಾಳೆಯಿಂದ ತಮಿಳುನಾಡು, ಆಂಧ್ರದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಂಧ್ರಪ್ರದೇಶದಲ್ಲಿ ಇಂದೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Tamil Nadu Rain: ತಮಿಳುನಾಡಿನಲ್ಲಿ ವಿಪರೀತ ಮಳೆ; ಕಾವೇರಿ ಕಣಿವೆಯ ಡ್ಯಾಂಗಳು ಭರ್ತಿ ಇದನ್ನೂ ಓದಿ: Video: ಸ್ಮಶಾನದಲ್ಲಿ ಎಚ್ಚರವಿಲ್ಲದೆ ಬಿದ್ದಿದ್ದವನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​ ಅಧಿಕಾರಿ; ಚೆನ್ನೈ ಮಳೆ ಮಧ್ಯೆ ಮನಕಲಕುವ ದೃಶ್ಯ

Published On - 6:17 pm, Thu, 11 November 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ