ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ

ಪರಿಷತ್ ಉಪಸಭಾಪತಿ S.L.ಧರ್ಮೇಗೌಡ(65) ಗುಣಸಾಗರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ
ಪರಿಷತ್ ಉಪಸಭಾಪತಿ S.L.ಧರ್ಮೇಗೌಡ
Follow us
ಆಯೇಷಾ ಬಾನು
| Updated By: ರಶ್ಮಿ ಕಲ್ಲಕಟ್ಟ

Updated on:Dec 29, 2020 | 12:49 PM

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ(65) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

H.D.ಕುಮಾರಸ್ವಾಮಿ ಆಪ್ತರಾಗಿದ್ದ ಎಸ್.ಎಲ್.ಧರ್ಮೇಗೌಡ. ಗನ್‌ಮ್ಯಾನ್‌, ಎಸ್ಕಾರ್ಟ್ ಸಿಬ್ಬಂದಿ ಮನೆಗೆ ಕಳಿಸಿ ನಿನ್ನೆ ಸಂಜೆ ವೇಳೆಗೆ ತಮ್ಮ ಡ್ರೈವರ್ ಜತೆ ಕಾರಿನಲ್ಲಿ ಸಖರಾಯಪಟ್ಟಣದ ಮನೆಯಿಂದ ಗುಣಸಾಗರಕ್ಕೆ ಬಂದಿದ್ದರು.

ಬಳಿಕ ರೈಲು ಹಳಿ ಬಳಿ ಕಾರು ನಿಲ್ಲಿಸಲು ಡ್ರೈವರ್‌ಗೆ ಸೂಚಿಸಿದ್ರು. ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು. ನೀನು ಹೋಗು ಎಂದು ಚಾಲಕನನ್ನು ಕಳಿಸಿದ್ದಾರೆ. ನಂತರ ಕಡೂರಿನ ವ್ಯಕ್ತಿಗೆ ಕರೆ ಮಾಡಿ ಜನಶತಾಬ್ಧಿ ರೈಲು ಬರುವ ಸಮಯವನ್ನು ವಿಚಾರಿಸಿದ್ದಾರೆ. ಬಳಿಕ ತಮ್ಮ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಮಾಡಿಕೊಂಡು ಚಲಿಸುವ ರೈಲಿಗೆ ತಲೆ ಕೊಟ್ಟಿದ್ದಾರೆ.

ರಾತ್ರಿ 10 ಗಂಟೆಯಾದರೂ ವಾಪಸಾಗದ ಹಿನ್ನೆಲೆಯಲ್ಲಿ ಧರ್ಮೇಗೌಡ ಅವರಿಗಾಗಿ ಹುಡುಕಾಟ ಶುರುವಾಗಿತ್ತು. ಈ ವೇಳೆ ಗುಣಸಾಗರ ಬಳಿ ತಡರಾತ್ರಿ 1.30ರ ಸುಮಾರಿಗೆ ಧರ್ಮೇಗೌಡರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಸಿ.ಟಿ.ರವಿ, ಚಿಕ್ಕಮಗಳೂರು ಎಸ್‌ಪಿ ಭೇಟಿ ನೀಡಿದ್ದಾರೆ.

ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಸೋದರ ಭೋಜೇಗೌಡ ಸಹ ಜೆಡಿಎಸ್ ನ ಪ್ರಭಾವಿ ನಾಯಕರಲ್ಲಿ ಒಬ್ಬರು.

ಪಾರ್ಥಿವ ಶರೀರ ಶಿವಮೊಗ್ಗಕ್ಕೆ ರವಾನೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಶಿವಮೊಗ್ಗಕ್ಕೆ ಕಳಿಸಲಾಗಿದೆ. ಇಂದು ಮಧ್ಯಾಹ್ನ ಸಖರಾಯಪಟ್ಟಣ ಸಮೀಪದ ಮದಗದಕೆರೆ ರಸ್ತೆಯಲ್ಲಿರುವ ತೋಟದಮನೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ನಂತರ ಸಖರಾಯಪಟ್ಟಣದಲ್ಲಿರುವ ಧರ್ಮೇಗೌಡರ ತಂದೆ ಎಸ್.ಆರ್.ಲಕ್ಷ್ಮಯ್ಯ ಸಮಾಧಿಯ ಪಕ್ಕದಲ್ಲೇ ಸಮಾಧಿ ಮಾಡಲಾಗುವುದು ಎಂದು ಮೃತರ ಸೋದರ ಕುಶಾಲ್ ಗೌಡ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರದೇಶವೆನಿಸಿದ ಕಡೂರು ಮತ್ತು ತರೀಕೆರೆ ತಾಲ್ಲೂಕುಗಳಲ್ಲಿ ಧರ್ಮೇಗೌಜನಪ್ರಿಯರಾಗಿದ್ದರು. 2004ರಲ್ಲಿ ಬೀರೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಸಭಾಪತಿ ಕುರ್ಚಿಗಾಗಿ ಫುಲ್​ ಫೈಟ್​: ಅಕ್ಷರಶಃ ರಣಾಂಗಣವಾದ ಮೇಲ್ಮನೆ

Published On - 6:45 am, Tue, 29 December 20

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ