ಡಿಸಿಎಂ ಅಶ್ವಥ್​ ನಾರಾಯಣ್​ಗೆ ಕೊರೊನಾ ಪಾಸಿಟಿವ್​, ಹೋಂ​ ಐಸೋಲೇಷನ್​ನಲ್ಲಿ ಚಿಕಿತ್ಸೆ

ಡಿಸಿಎಂ ಅಶ್ವಥ್​ ನಾರಾಯಣ್​ಗೆ ಕೊರೊನಾ ಪಾಸಿಟಿವ್​, ಹೋಂ​ ಐಸೋಲೇಷನ್​ನಲ್ಲಿ ಚಿಕಿತ್ಸೆ

ಬೆಂಗಳೂರು: ಉಪಮುಖ್ಯಮಂತ್ರಿ ಅಶ್ವಥ್​ ನಾರಾಯಣ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಮಾಹಿತಿಯನ್ನು ಡಿಸಿಎಂ ಅಶ್ವಥ್​ ನಾರಾಯಣ್ ಖುದ್ದು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಅಶ್ವಥ್​ ನಾರಾಯಣ್​ ಟ್ವೀಟ್​ ಮಾಡಿದ್ದಾರೆ. ವಿಧಾನಮಂಡಲದ […]

KUSHAL V

|

Sep 19, 2020 | 5:37 PM

ಬೆಂಗಳೂರು: ಉಪಮುಖ್ಯಮಂತ್ರಿ ಅಶ್ವಥ್​ ನಾರಾಯಣ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಮಾಹಿತಿಯನ್ನು ಡಿಸಿಎಂ ಅಶ್ವಥ್​ ನಾರಾಯಣ್ ಖುದ್ದು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಅಶ್ವಥ್​ ನಾರಾಯಣ್​ ಟ್ವೀಟ್​ ಮಾಡಿದ್ದಾರೆ.

Follow us on

Related Stories

Most Read Stories

Click on your DTH Provider to Add TV9 Kannada