AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರಿಗೆ ಸರ್ಕಾರಿ ಉದ್ಯೋಗಿಗಳಿಗಿಂತ ಹೆಚ್ಚಿನ ಸವಲತ್ತು ನೀಡುತ್ತೇವೆ- ಲಕ್ಷ್ಮಣ ಸವದಿ ಭರವಸೆ

ಕೋಡಿಹಳ್ಳಿ ಚಂದ್ರಶೇಖರ ಅವರ ಹೆಸರೆತ್ತದೇ ಅವರನ್ನು ದೂಷಿಸಿದ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ, ಲಕ್ಷ್ಮಣ ಸವದಿ ನೌಕರರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಅಷ್ಟೇ ಅಲ್ಲ, ಈ ಹಿಂದೆ ಕೊಟ್ಟ ಕೆಲವು ವಾಗ್ದಾನಗಳನ್ನು ಈಡೇರಿಸಲು ತಾವು ಬದ್ಧ ಎಂದು ಪುನರುಚ್ಚರಿಸಿದ್ದಾರೆ.

ಸಾರಿಗೆ ನೌಕರರಿಗೆ ಸರ್ಕಾರಿ ಉದ್ಯೋಗಿಗಳಿಗಿಂತ  ಹೆಚ್ಚಿನ ಸವಲತ್ತು ನೀಡುತ್ತೇವೆ- ಲಕ್ಷ್ಮಣ ಸವದಿ ಭರವಸೆ
ಸಾರಿಗೆ ಸಚಿವ ಲಕ್ಷ್ಮಣ ಸವದಿ
ಡಾ. ಭಾಸ್ಕರ ಹೆಗಡೆ
| Edited By: |

Updated on:Dec 12, 2020 | 8:42 PM

Share

ಬೆಂಗಳೂರು: ಈಗ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದ ಕುರಿತಾಗಿ ಶನಿವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುಂಬಾ ಖಾರವಾದ ಟಿಪ್ಪಣಿಯೊಂದಿಗೆ ಪ್ರತಿಕ್ರಿಯಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ, ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿ, ಸಾರಿಗೆ ಸಂಸ್ಥೆ ನೌಕರರ ಜೊತೆ ಚರ್ಚೆಗೆ ಸದಾ ಸಿದ್ಧನಿದ್ದೇನೆ ಎಂದು ಮಾತುಕತೆಗೆ ವೇದಿಕೆ ಸಿದ್ದಗೊಳಿಸಿದ್ದಾರೆ. ರಾತ್ರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಾರಿಗೆ ನಿಗಮದವರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟ. ಆದರೆ, ಸರ್ಕಾರಿ ನೌಕರರಿಗಿಂತ ಹೆಚ್ಚಿನ ಸೌಲಭ್ಯಗಳನ್ನ ನೀಡುತ್ತೇವೆ ಎನ್ನುವ ಭರವಸೆ ನೀಡಿದರು.

ಶನಿವಾರ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸವದಿ, ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಈ ಮುಷ್ಕರವನ್ನು ಕೈಬಿಟ್ಟು ತಮ್ಮ ಕರ್ತವ್ಯಕ್ಕೆ ವಾಪಸಾಗಬೇಕೆಂದು ನಾನು ನಮ್ಮ ಸಾರಿಗೆ ಸಂಸ್ಥೆಗಳ ಎಲ್ಲಾ ನೌಕರ ಬಾಂಧವರಲ್ಲಿ ಮತ್ತೊಮ್ಮೆ ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇನೆ, ಎಂದು ಹೇಳಿದ್ದಾರೆ.

ಸವದಿ ಹೇಳಿದ್ದೇನು?

ಇಂದು ಮತ್ತು ನಿನ್ನೆ ನಾಡಿನ ಕೆಲವೆಡೆ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಸ್ಥಗಿತಗೊಂಡಿರುವುದು, ಮುಷ್ಕರ ನಡೆಯುವಂತಾಗಿರುವುದು ಮತ್ತು ಬಸ್ಸುಗಳಿಗೆ ಕಲ್ಲು ತೂರಾಟ ಹಾಗೂ ಹಾನಿಗೊಳಿಸುವಿಕೆಯಂತಹ ಅಹಿತಕರ ಘಟನೆ ನಡೆದಿರುವುದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ ಎಂದು ಹೇಳಿರುವ ಸಚಿವರು ಈ ಕುರಿತು ಸಾರ್ವಜನಿಕರಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ತಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ ಸಿಬ್ಬಂದಿಗಳ ಬಗ್ಗೆ ನನಗೆ ಮತ್ತು ನಮ್ಮ ಸರ್ಕಾರಕ್ಕೆ ಯಾವತ್ತೂ ಸಹಾನುಭೂತಿ ಇದೆ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿಯೂ ಸಹ ಎಲ್ಲಾ ಸಿಬ್ಬಂದಿಗಳಿಗೆ ಯಾವುದೇ ಕಡಿತವಿಲ್ಲದೇ ಸಂಬಳ ನೀಡಿದ್ದು ಇದಕ್ಕೆ ನಿದರ್ಶನವಾಗಿದೆ. ಕೋವಿಡ್​ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಮತ್ತೊಮ್ಮೆ ಭರವಸೆ ನೀಡಿದ ಸಚಿವರು, ಇನ್ನುಳಿದ ಬೇಡಿಕೆಗಳ ಬಗ್ಗೆ ಚರ್ಚಿಸಿ ಮಾರ್ಗೋಪಾಯಗಳನ್ನು ಕಂಡುಹಿಡಿಯಲು ಸರ್ಕಾರ ಸಿದ್ಧವಿದೆ ಎಂದರು.

ನಮ್ಮ ಸಾರಿಗೆ ಸಂಸ್ಥೆಗಳ ಯಾವುದೇ ಒಕ್ಕೂಟಕ್ಕೆ ಸೇರಿಲ್ಲದವರು ಏಕಾಏಕಿಯಾಗಿ ಯಾವುದೇ ಮುನ್ಸೂಚನೆ ನೀಡದೇ ಬಸ್ ಸಂಚಾರ ಸ್ಥಗಿತಗೊಳ್ಳುವಂತೆ ಮುಷ್ಕರಕ್ಕೆ ಕರೆಕೊಟ್ಟಿರುವುದು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ಬಂದ ಕೆಲವು ಸಿಬ್ಬಂದಿಗಳಿಗೆ ತೊಂದರೆ ನೀಡಿರುವುದು ಹಾಗೂ ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಯಾಗುವಂತೆ ವರ್ತಿಸಿರುವುದು ದುರದೃಷ್ಟಕರವಾಗಿದೆ. ಇಂತಹ ಬೆಳವಣಿಗೆಗಳಿಂದ ಸಾರಿಗೆ ಸಂಸ್ಥೆಗಳ ನೌಕರರಿಗೆ ದೊಡ್ಡ ಹಾನಿಯಾಗುವುದಲ್ಲದೇ ಸಾರ್ವಜನಿಕರಿಗೆ ಅನವಶ್ಯಕವಾಗಿ ತೊಂದರೆ ಉಂಟಾಗುವುದಕ್ಕೆ ಕಾರಣವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಾರಿಗೆ ಮಿತ್ರರು ಸರ್ಕಾರದೊಂದಿಗೆ ಪರಸ್ಪರ ಸಹಕಾರದೊಂದಿಗೆ ತಮ್ಮ ದೈನಂದಿನ ಕರ್ತವ್ಯ ಮುಂದುವರೆಸಬೇಕೆಂದು ನಾನು ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ.

ಸಾರಿಗೆ ಸಿಬ್ಬಂದಿಗಳೆಂದರೆ ನನಗೆ ನನ್ನ ಕುಟುಂಬವಿದ್ದಂತೆ, ಅವರ ಸಂಕಷ್ಟಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ. ಹಿಂದೆಯೂ ಅನೇಕ ಸಂದರ್ಭಗಳಲ್ಲಿ ಇದನ್ನು ಸಾರಿಗೆ ಸಿಬ್ಬಂದಿಗಳು ಮನಗಂಡಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳೂ ಸಹ ಸಾರಿಗೆ ಇಲಾಖೆಯ ಎಲ್ಲಾ ನೌಕರರ ಬೇಡಿಕೆಗಳ ಬಗ್ಗೆ ಉದಾರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಮುಂದೆಯೂ ನಮ್ಮ ಸಾರಿಗೆ ಸಿಬ್ಬಂದಿಗಳು ತಮ್ಮ ಬೇಡಿಕೆಗಳನ್ನು ತಿಳಿಸಬೇಕೆಂದರೆ ನನ್ನ ಬಳಿ ಬರುವುದಕ್ಕೆ ಸದಾ ಮುಕ್ತ ಅವಕಾಶವಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ. ನಮ್ಮ ಸಾರಿಗೆ ಒಕ್ಕೂಟಗಳು ಮತ್ತು ಸಿಬ್ಬಂದಿಗಳು ನನ್ನನ್ನು ಭೇಟಿ ಮಾಡಿ ತಮ್ಮ ಕಷ್ಟಸುಖಗಳನ್ನು ಹೇಳಿಕೊಳ್ಳುವುದಕ್ಕೆ ಸದಾ ಸ್ವಾಗತವಿದೆ, ಎಂದು ಅವರು ತಮ್ಮ ಹೇಳಿಕೆಯಲ್ಲಿ ಪುನರುಚ್ಚರಿಸಿದ್ದಾರೆ.

ರಾತ್ರಿ ಹೇಳಿದ್ದೇನು?

ನಮ್ಮ ಹಣಕಾಸಿನ ಇತಿಮಿತಿಯಲ್ಲಿ ಏನು ಮಾಡಬೇಕು ಮಾಡುತ್ತೇವೆ. ಸಾರಿಗೆ ನಿಗಮದ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟ. ಆದರೆ, ಸರ್ಕಾರಿ ನೌಕರರಿಗಿಂತ ಹೆಚ್ಚಿನ ಸೌಲಭ್ಯಗಳನ್ನ ನೀಡುತ್ತೇವೆ. ಅವರಿಗೆ ಆಗಿರುವ ಅನ್ಯಾಯ ಸರಿಪಡಿಸುತ್ತೇವೆ ಎಂದರು.

ನಡುರಾತ್ರಿ ಗಡುವು ನೀಡಿದ ಸಚಿವ ಸವದಿ, ನಾಳೆಯಿಂದ ಖಾಸಗಿ ಬಸ್ ಬಳಕೆಯ ಎಚ್ಚರಿಕೆ ರವಾನೆ

Published On - 7:24 pm, Sat, 12 December 20

Follow Us
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?