ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎಂದ ಕೇಂದ್ರ ಸರ್ಕಾರ: ಡಿಕೆ ಶಿವಕುಮಾರ್​ ಆರೋಪ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು 2023-24ನೇ ಸಾಲಿನ ಬಜೆಟ್​​ನಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 5,300 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಆದರೆ ಇದೀಗ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎಂದ ಕೇಂದ್ರ ಸರ್ಕಾರ: ಡಿಕೆ ಶಿವಕುಮಾರ್​ ಆರೋಪ
ಡಿಸಿಎಂ ಡಿಕೆ ಶಿವಕುಮಾರ್​
Edited By: ವಿವೇಕ ಬಿರಾದಾರ

Updated on: Aug 07, 2023 | 1:43 PM

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯನ್ನು (Upper Bhadra Project) ರಾಷ್ಟ್ರೀಯ ಯೋಜನೆ ಎಂದು 2023-24ನೇ ಸಾಲಿನ ಬಜೆಟ್​​ನಲ್ಲಿ ಕೇಂದ್ರ ಸರ್ಕಾರ (Central Government) ಘೋಷಿಸಿತ್ತು. ಇದಕ್ಕಾಗಿ 5,300 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಆದರೆ ಇದೀಗ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದ್ದಾರೆ. ಅದಕ್ಕೆ ನಾನೇನು ಮಾಡಬೇಕು, ನನಗೂ ಜವಬ್ದಾರಿ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಯೋಜನೆ ಸಂಬಂಧ ಜಲಸಂಪನ್ಮೂಲ ಇಲಾಖೆಯಲ್ಲಿ 600 ಕೋಟಿ ರೂ. ಮಾತ್ರ ಇದೆ. ಆದರೆ 1 ಕೋಟಿ 25 ಲಕ್ಷ ರೂ. ಕೆಲಸ ಮಂಜೂರು ಆಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕುದುರೆ.. ಶೂರ.. ಧೀರ ಅಂತ ತಿವಿದ ಹಿಂದಿನ ಸಿಎಂ ಬೊಮ್ಮಾಯಿ -ಬೊಮ್ಮಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್​​​ಗೂ ನಗು!

ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಆರೋಪದ ಬಗ್ಗೆ ತನಿಖೆ ಮಾಡಿಸೋಣ. ನನ್ನ ವಿರುದ್ಧ ತನಿಖೆ ಮಾಡಿಸಬೇಕೆಂದು ಡಾ.ಅಶ್ವತ್ಥ್ ಹೇಳಿದ್ದರು. ಮುನಿರತ್ನ ವಿರುದ್ಧದ ಆರೋಪ ಬಗ್ಗೆ ತನಿಖೆ ಮಾಡಿಸಿ ಎಂದಿದ್ದರು.

ಬಿಬಿಎಂಪಿ ಕಾಮಗಾರಿಗಳ ಬಗ್ಗೆಯೂ ತನಿಖೆ ಮಾಡಿಸುತ್ತೇವೆ. ಬಿಬಿಎಂಪಿಯಲ್ಲಿ ಟೆಂಡರ್ ಆಗದಿದ್ದರೂ ಕಾಮಗಾರಿ ನಡೆಸಿದ್ದಾರೆ. ಹೀಗಾಗಿ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಬಿಎಂಪಿಯಲ್ಲಿ ಕೆಲಸ ಯಾರು ಕೊಟ್ಟರು ಗೊತ್ತಿಲ್ಲ. ಟೆಂಡರ್ ಆಗಿಲ್ಲ ಆದರೂ ಕಾಮಗಾರಿ ಮಾಡಿದ್ದಾರೆ. 25 ದಿನಕ್ಕೆ, 15 ದಿನಕ್ಕೆ ಬಿಲ್ ಆಗಿಬಿಡತ್ತಾ? 15 ದಿನಕ್ಕೆ ಇಲ್ಲಿ ಕೆಲಸ ಆಗಿಬಿಡತ್ತಾ? ಅದಕ್ಕಾಗಿಯೇ ಪರಿಶೀಲನೆಗೆ ಅಧಿಕಾರಿಗಳನ್ನು ಕೇಳಿದ್ದೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us