ಇನ್ನು ಮುಂದೆ ಜಿಲ್ಲಾಧಿಕಾರಿಗಳು ವಾರದಲ್ಲಿ 1 ದಿನ ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು -ಕಂದಾಯ ಸಚಿವ ಆರ್. ಅಶೋಕ್ ಆದೇಶ

| Updated By: ಸಾಧು ಶ್ರೀನಾಥ್​

Updated on: May 14, 2022 | 7:50 PM

R Ashoka: ಸರ್ಕಾರಿ ಆಡಳಿತ ಚುರುಕುಗೊಳಿಸಲು ಮತ್ತು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ.

ಇನ್ನು ಮುಂದೆ ಜಿಲ್ಲಾಧಿಕಾರಿಗಳು ವಾರದಲ್ಲಿ 1 ದಿನ ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು -ಕಂದಾಯ ಸಚಿವ ಆರ್. ಅಶೋಕ್ ಆದೇಶ
ಆರ್​.ಅಶೋಕ್​
Follow us on

ದಾವಣಗೆರೆ: ಸರ್ಕಾರಿ ಆಡಳಿತ ಚುರುಕುಗೊಳಿಸಲು ಮತ್ತು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಇನ್ನು ಮುಂದೆ ಜಿಲ್ಲಾಧಿಕಾರಿಗಳು (Deputy Commissioners) ವಾರದಲ್ಲಿ 1 ದಿನ ತಾಲೂಕು ಕಚೇರಿಗಳಲ್ಲಿ (Taluk Office) ಕೆಲಸ ಮಾಡಬೇಕು. ಈ ಬಗ್ಗೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ದಾವಣಗೆರೆ ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ (Revenue Minister R Ashoka).

ದಾವಣಗೆರೆ ನಗರದ ನೂತನ್ ಬಳಿ ಇರುವ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಗ್ರಾಮ ಲೆಕ್ಕಾಧಿಕಾರಿಗಳ ಸಮಾವೇಶದಲ್ಲಿ ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಗಳು ಸದ್ಯದಲ್ಲಿಯೇ VA ಬದಲು VEO:
ಈಗಾಗಲೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ‌ ಇದೆ. ಈ ವಾರದಲ್ಲಿ ಒಂದು ದಿನ ಡಿಸಿಗಳು ತಾಲೂಕಾ ಕಚೇರಿಯಲ್ಲಿ ಸೇವೆ ಸಲ್ಲಿಸಬೇಕು. ಇದು ಕಡ್ಡಾಯ. ವಿಎ (Village Accountant) ಬದಲು ವಿಇಓ (Village Executive Accountant) ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ಇಷ್ಟರಲ್ಲಿ ನಿರ್ಧಾರ ಮಾಡಲಾಗುವುದು. ಗ್ರಾಮ ಲೆಕ್ಕಾಧಿಕಾರಿಗಳನ್ನ ಇನ್ನು ಮುಂದೆ ಗ್ರಾಮ ಕಾರ್ಯನಿರ್ವಣಾಧಿಕಾರಿ ಮಾಡಬೇಕು ಎಂಬ ಬೇಡಿಕೆ ಇದೆ. ಈ ವಿಚಾರದ ಬಗ್ಗೆಯೂ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಇಷ್ಟರಲ್ಲಿಯೇ ವಿಎ ಬದಲು ವಿಇಓ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗುವುದು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:36 pm, Sat, 14 May 22