Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ನಡೆಸಿದ ಪರೀಕ್ಷೆಯಲ್ಲಿ ಇಬ್ಬರು ಮೇಲ್ವಿಚಾರಕರಿಂದ ಕರ್ತವ್ಯಲೋಪ: ವೆಬ್ ಕಾಸ್ಟಿಂಗ್​​ನಿಂದ ಪತ್ತೆ, ಕ್ರಮಕ್ಕೆ ಆಗ್ರಹ

ಬಿಎಂಟಿಸಿ, ಕೆಕೆಆರ್​ಟಿಸಿಯ ಖಾಲಿ ಹುದ್ದೆಗಳನ್ನು ತುಂಬಲು ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಇಬ್ಬರು ಮೇಲ್ವಿಚಾರಕರು ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿರುವುದನ್ನು ವೆಬ್ ಕಾಸ್ಟಿಂಗ್​​ನಿಂದ ಪತ್ತೆ ಹಚ್ಚಲಾಗಿದೆ. ಹೀಗಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕೆಇಎ ನಡೆಸಿದ ಪರೀಕ್ಷೆಯಲ್ಲಿ ಇಬ್ಬರು ಮೇಲ್ವಿಚಾರಕರಿಂದ ಕರ್ತವ್ಯಲೋಪ: ವೆಬ್ ಕಾಸ್ಟಿಂಗ್​​ನಿಂದ ಪತ್ತೆ, ಕ್ರಮಕ್ಕೆ ಆಗ್ರಹ
ಕೆಇಎ ನಡೆಸಿದ ಪರೀಕ್ಷೆಯಲ್ಲಿ ಇಬ್ಬರು ಮೇಲ್ವಿಚಾರಕರಿಂದ ಕರ್ತವ್ಯಲೋಪ: ವೆಬ್ ಕಾಸ್ಟಿಂಗ್​​ನಿಂದ ಪತ್ತೆ, ಕ್ರಮಕ್ಕೆ ಆಗ್ರಹ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:Jul 14, 2024 | 8:31 PM

ಬೆಂಗಳೂರು, ಜುಲೈ 14: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಇಬ್ಬರು ಮೇಲ್ವಿಚಾರಕರಿಂದ (invigilators) ಕರ್ತವ್ಯ ಲೋಪವಾಗಿರುವುದು ವೆಬ್ ಕಾಸ್ಟಿಂಗ್​​ನಿಂದ ಪತ್ತೆ ಆಗಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್​ ಪ್ರಸನ್ನ ಭಾನುವಾರ ಪತ್ರ ಬರೆದಿದ್ದಾರೆ.

ಬಿಎಂಟಿಸಿ, ಕೆಕೆಆರ್​ಟಿಸಿಯ ಖಾಲಿ ಹುದ್ದೆಗಳನ್ನು ತುಂಬಲು ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಇಬ್ಬರು ಮೇಲ್ವಿಚಾರಕರು ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿರುವುದನ್ನು ವೆಬ್ ಕಾಸ್ಟಿಂಗ್​​ನಿಂದ ಪತ್ತೆ ಹಚ್ಚಲಾಗಿದೆ.

ಇದನ್ನೂ ಓದಿ: ಅಕ್ರಮ ತಡೆಗೆ KEA ಎಕ್ಸಾಂನಲ್ಲಿ‌ ವೆಬ್ ಕಾಸ್ಟಿಂಗ್ ಅಳವಡಿಕೆಗೆ ಪ್ಲಾನ್

ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ಎಸ್​ಜೆ ಪಾಲಿಟೆಕ್ನಿಕ್​​ನ ಕೊಠಡಿ ಸಂಖ್ಯೆ 102 ರಲ್ಲಿ (ಕೇಂದ್ರ ಸಂಕೇತ 112) ಕೊಠಡಿ ಮೇಲ್ವಿಚಾರಕರಾದ ಉಪನ್ಯಾಸಕ ಸಾಜಿದ್​ ಪರೀಕ್ಷೆ ನಡೆಯುವಾಗ ಮೊಬೈಲ್​ನಲ್ಲಿ ಮಾತನಾಡಿದ್ದು, ಕೆಇಎ ಕಚೇರಿಯಲ್ಲಿರುವ ಕಮಾಂಡ್ ಸೆಂಟರ್​ನಿಂದ ಗಮನಿಸಲಾಗಿದೆ. ಇದು ಪರೀಕ್ಷಾ ಕರ್ತವ್ಯ ಲೋಪವಾದ್ದರಿಂದ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಕಲಬುರಗಿಯ ನೆಹರು ಗಂಜ್​ನಲ್ಲಿರುವ ಶ್ರೀ ಶಬರಯ್ಯ ಗಾಡ ಬಾಲಕಿಯರ ಕಾಲೇಜಿನ ಪರೀಕ್ಷಾ ಕೇಂದ್ರದ ಕೊಠಡಿಯೊಂದರಲ್ಲಿ ಇಬ್ಬರು ವಿದ್ಯಾರ್ಥಿಗಳು ಪರಸ್ಪರ ಮಾತಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಒಬ್ಬ ಅಭ್ಯರ್ಥಿ ಮತ್ತೊಬ್ಬ ಅಭ್ಯರ್ಥಿಗೆ ಉತ್ತರ ಬರೆಯಲು ನೆರವು ನೀಡಿರುವುದು ಕಂಡುಬಂದಿದೆ. ಈ ವೇಳೆ ಕೊಠಡಿ ಮೇಲ್ವಿಚಾರಕರು ಅಲ್ಲೇ ಇದ್ದರೂ ಅದನ್ನು ತಡೆಯದೆ ನಿರ್ಲಕ್ಷ್ಯ ಮಾಡಿರುವುದು ಕಂಡುಬಂದಿದೆ. ಹಾಗಾಗಿ ಕೊಠಡಿ ಮೇಲ್ವಿಚಾರಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕಲಬುರಗಿ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ.

ಇದನ್ನೂ ಓದಿ: ಜು 22ರಿಂದ ಅಂಗನವಾಡಿಗಳಲ್ಲಿ ಎಲ್​ಕೆಜಿ-ಯುಕೆಜಿ ಆರಂಭ: ಕಾರ್ಯಕರ್ತೆಯರಿಗೆ ಜೀವ ವಿಮೆ

ಕೆಇಎ ಇದೇ ಮೊದಲ ಬಾರಿಗೆ ಜುಲೈ 13 ಮತ್ತು 14ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಿತ್ತು. ಭಾನುವಾರ ನಡೆದ ಪರೀಕ್ಷೆಯಲ್ಲಿ ಒಟ್ಟು ಶೇ 68 ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು. ಶನಿವಾರ ನಡೆದ ಪರೀಕ್ಷೆಯಲ್ಲಿ ಶೇ 34ರಷ್ಟು ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:31 pm, Sun, 14 July 24

ಗುಜರಾತ್ ಟೈಟನ್ಸ್ ಪರ ದಾಖಲೆ ಬರೆದ ಶುಭ್​ಮನ್ ಗಿಲ್
ಗುಜರಾತ್ ಟೈಟನ್ಸ್ ಪರ ದಾಖಲೆ ಬರೆದ ಶುಭ್​ಮನ್ ಗಿಲ್
ಜೆಡಿಎಸ್​ ಮುಖಂಡರ ಕೈಗಳಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಪ್ಲಕಾರ್ಡ್​​
ಜೆಡಿಎಸ್​ ಮುಖಂಡರ ಕೈಗಳಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಪ್ಲಕಾರ್ಡ್​​
ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ