AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್: ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಬೇಟಿ ನೀಡಿದ ವಿಚಾರವಾಗಿ ಪ್ರಕಟವಾದ ಸುದ್ದಿಯ ಫೇಸ್​​ಬುಕ್​ ಪೋಸ್ಟ್​​ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಸಾವನ್ನು ಬಯಸಿ ಕಮೆಂಟ್ ಪೋಸ್ಟ್ ಮಾಡಿದವರನ್ನು ಬಂಧಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಈ ಕುರಿತು ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯು ಪೀಣ್ಯ ಪೊಲೀಸರಿಗೆ ದೂರು ನೀಡಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್: ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 08, 2025 | 10:18 AM

Share

ಬೆಂಗಳೂರು, ಜುಲೈ 8: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವಿಚಾರವಾಗಿ ಪ್ರಕಟವಾಗಿರುವ ಸುದ್ದಿಗಳಿಗೆ ಕಿಡಿಗೇಡಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ಕಾರಣ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ (Congress) ಸಮಿತಿ ಪೊಲೀಸರಿಗೆ ದೂರು ನೀಡಿದೆ. ಸಿದ್ದರಾಮಯ್ಯ ಸಾವಿನ ಬಗ್ಗೆ ಪ್ರಸ್ತಾಪಿಸಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಲಾಗಿದೆ. ಮುಖ್ಯಮಂತ್ರಿಗಳ ವಿರುದ್ಧ ಅಶ್ಲೀಲ ಪದಗಳಿಂದ ನಿಂದನೆ ಮಾಡಲಾಗಿದೆ ಎಂದು ಪೀಣ್ಯ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಕುಶಾಲ್ ಹರುವೇಗೌಡ ಹಾಗೂ ಸಂಜಯ್ ಎಂಬವರು ದೂರು ನೀಡಿದ್ದಾರೆ.

ದೂರಿನಲ್ಲೇನಿದೆ?

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಕುರಿತು ದಿನಾಂಕ 7-7-2025ರಂದು ‘‘ದಿಢೀರ್ ಆಸ್ಪತ್ರೆಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ’’ ಎಂದು ಖಾಸಗಿ ವಾಹಿನಿಯಲ್ಲಿ ಬಿತ್ತರವಾದ ಸುದ್ದಿಯ ಫೇಸ್​​​ಬುಕ್ ಪೋಸ್ಟ್​ಗೆ ಮುಖ್ಯಮಂತ್ರಿಯ ಸಾವನ್ನು ಬಯಸುವ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿರುವ ಇಂತಹ ವಿಕೃತ ಮನಸ್ಸಿನ ವ್ಯಕ್ತಿಗಳು ಮಾಡುವ ಅಪಪ್ರಚಾರದ ಸುಳ್ಳು ವದಂತಿ ಹಾಗೂ ದಿಕ್ಕು ತಪ್ಪಿಸುವ ಹೇಳಿಕೆಗಳಿಂದ ರಾಜ್ಯದ ಜನರಿಗೆ, ಸಿದ್ದರಾಮಯ್ಯ ನವರ ಅಭಿಮಾನಿಗಳಿಗೆ ಹಾಗೂ ಲಕ್ಷಾಂತರ ಕಾರ್ಯಕರ್ತರಿಗೆ ತೀವ್ರ ಸ್ವರೂಪದ ನೋವು ಉಂಟಾಗಿರುತ್ತದೆ. ಇದರಿಂದ ಕಾನೂನಿನ ಸುವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಹಾಗೂ ಶಾಂತಿ ಕದಡುವ ಇಂತಹ ಕಿಡಿಗೇಡಿಗಳ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತೇವೆ. ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಸ್ಕ್ರೀನ್​ಶಾಟ್​​ಗಳ ನಕಲು ಪ್ರತಿಗಳನ್ನು ದೂರಿನೊಂದಿಗೆ ಲಗತ್ತಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಿಎಂ ಬದಲಾವಣೆ ಚರ್ಚೆಗೆ ಸ್ವಾಮೀಜಿಗಳೂ ಎಂಟ್ರಿ: ಒಪ್ಪಂದದಂತೆ ಸಿಎಂ ಸ್ಥಾನ ಕಲ್ಪಿಸಿಕೊಟ್ಟರೆ ಒಳ್ಳೆಯದೆಂದ ಸ್ವಾಮೀಜಿ

ಇದನ್ನೂ ಓದಿ
Image
ರೆಡಿಮೇಡ್ ಬಟ್ಟೆಗಳ ಪ್ಯಾಕ್​ನಲ್ಲಿ ಡ್ರಗ್ಸ್ ಸೇಲ್! ನೈಜೀರಿಯಾ ಪ್ರಜೆಗಳು ವಶ
Image
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Image
ಹೈಟೆಕ್ ಆಗಲಿದೆ ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣ!
Image
ಎತ್ತಿನಹೊಳೆ‌ ಡ್ಯಾಂ ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ಜನರಿಂದಲೂ ವಿರೋಧ!

ಇಂದಿಡೀ ದಿನ ಸಿದ್ದರಾಮಯ್ಯ ವಿಶ್ರಾಂತಿ

ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲಿದ್ದಾರೆ. ಯಾವುದೇ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ನಾಳೆ ಅವರು ದೆಹಲಿಗೆ ತೆರಳಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್