ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ವಿಜಯೇಂದ್ರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ
ಚುನಾವಣೆ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ ನೀಡಿದೆ. ನಾಲಿಗೆಗೂ ಮೆದುಳಿಗೂ ಮಧ್ಯದ ಸಂಪರ್ಕ ಮರೆಯಬಾರದು ಎಂದು ಅರ್ಜಿದಾರರಿಗೆ ಎಚ್ಚರಿಕೆ ನೀಡಿ ಮಧ್ಯಂತರ ತಡೆ ನೀಡಲಾಗಿದೆ.
ಬೆಂಗಳೂರು, ಜೂನ್ 21: ಚುನಾವಣೆ ವೇಳೆ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಅವಹೇಳನಕಾರಿ ಪೋಸ್ಟ್ಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ ನೀಡಿದೆ. ಸಿಎಂ ಸೇರಿದಂತೆ ಮಂತ್ರಿಗಳಿಗೆ ಗೌರವ ಕೊಡುವುದನ್ನು ಕಲಿಯಬೇಕು. ನಾಲಿಗೆಗೂ ಮೆದುಳಿಗೂ ಮಧ್ಯದ ಸಂಪರ್ಕ ಮರೆಯಬಾರದು ಎಂದು ಅರ್ಜಿದಾರರಿಗೆ ಎಚ್ಚರಿಕೆ ನೀಡಿ ಮಧ್ಯಂತರ ತಡೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾದಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿಯ ಸೋಶಿಯಲ್ ಮೀಡಿಯಾ ವಿಭಾಗದ ಅಧ್ಷಕ್ತೆ ಹಾಗೂ ಅಡ್ಮಿನ್ ಮತ್ತು ಬಿಜೆಪಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೈಗ್ತೌಂಡ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು ಸಹ ನೀಡಲಾಗಿತ್ತು.
ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್ನಲ್ಲಿ ಪೋಸ್ಟ್ ಮಾಡಲಾಗಿತ್ತು. ಹೀಗಾಗಿ ಬಿಜೆಪಿ ಅಧಿಕೃತ ಎಕ್ಸ್ ಖಾತೆ ವಿರುದ್ಧ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ಓದಿ: ಚಿಕ್ಕಮಗಳೂರು: ಫೇಸ್ಬುಕ್ನಲ್ಲಿ ಪಾಕಿಸ್ತಾನ ಪರ ಪೋಸ್ಟ್, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು
ಈ ಬಗ್ಗೆ ಎಫ್ಎಸ್ಟಿ ತಂಡ ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು. ಈ ಹಿನ್ನಲೆ ಆರ್ಪಿ ಆಕ್ಟ್ 125 ಮತ್ತು ಐಪಿಸಿ 153 ಅಡಿಯಲ್ಲಿ ದ್ವೇಷ ಮತ್ತು ಎರಡು ಗುಂಪುಗಳ ನಡುವೆ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರೋಪ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ಇನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪೋಸ್ಟ್ ಹಾಕಲಾಗಿತ್ತು. ಹೀಗಾಗಿ ಬಿವೈ ವಿಜಯೇಂದ್ರ ಹಾಗೂ ಖಾತೆ ನಿರ್ವಹಣೆ ಮಾಡುವವರ ವಿರುದ್ದ ಪ್ರಕರಣ ದಾಖಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:47 pm, Fri, 21 June 24