ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ವಿಜಯೇಂದ್ರ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 21, 2024 | 9:28 PM

ಚುನಾವಣೆ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್​ಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ ನೀಡಿದೆ. ನಾಲಿಗೆಗೂ ಮೆದುಳಿಗೂ ಮಧ್ಯದ ಸಂಪರ್ಕ ಮರೆಯಬಾರದು ಎಂದು ಅರ್ಜಿದಾರರಿಗೆ ಎಚ್ಚರಿಕೆ ನೀಡಿ ಮಧ್ಯಂತರ ತಡೆ ನೀಡಲಾಗಿದೆ.

ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ವಿಜಯೇಂದ್ರ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ
ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ವಿಜಯೇಂದ್ರ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ
Follow us on

ಬೆಂಗಳೂರು, ಜೂನ್​ 21: ಚುನಾವಣೆ ವೇಳೆ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಅವಹೇಳನಕಾರಿ ಪೋಸ್ಟ್​ಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ ನೀಡಿದೆ. ಸಿಎಂ ಸೇರಿದಂತೆ ಮಂತ್ರಿಗಳಿಗೆ ಗೌರವ ಕೊಡುವುದನ್ನು ಕಲಿಯಬೇಕು. ನಾಲಿಗೆಗೂ ಮೆದುಳಿಗೂ ಮಧ್ಯದ ಸಂಪರ್ಕ ಮರೆಯಬಾರದು ಎಂದು ಅರ್ಜಿದಾರರಿಗೆ ಎಚ್ಚರಿಕೆ ನೀಡಿ ಮಧ್ಯಂತರ ತಡೆ ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾದಲ್ಲಿ ಪೋಸ್ಟ್​ ಮಾಡಿದ್ದ ಬಿಜೆಪಿಯ ಸೋಶಿಯಲ್​ ಮೀಡಿಯಾ ವಿಭಾಗದ ಅಧ್ಷಕ್ತೆ ಹಾಗೂ ಅಡ್ಮಿನ್​ ಮತ್ತು ಬಿಜೆಪಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೈಗ್ತೌಂಡ್​ ಪೊಲೀಸ್​ ಠಾಣೆಗೆ ಕಾಂಗ್ರೆಸ್​ ದೂರು ಸಹ ನೀಡಲಾಗಿತ್ತು.

ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಲಾಗಿತ್ತು. ಹೀಗಾಗಿ ಬಿಜೆಪಿ ಅಧಿಕೃತ ಎಕ್ಸ್​ ಖಾತೆ ವಿರುದ್ಧ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ಫೇಸ್​ಬುಕ್​ನಲ್ಲಿ ಪಾಕಿಸ್ತಾನ ಪರ ಪೋಸ್ಟ್, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು

ಈ ಬಗ್ಗೆ ಎಫ್ಎಸ್​ಟಿ ತಂಡ ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು. ಈ ಹಿನ್ನಲೆ ಆರ್​ಪಿ ಆಕ್ಟ್ 125 ಮತ್ತು ಐಪಿಸಿ 153 ಅಡಿಯಲ್ಲಿ ದ್ವೇಷ ಮತ್ತು ಎರಡು ಗುಂಪುಗಳ ನಡುವೆ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರೋಪ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

ಇನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪೋಸ್ಟ್​ ಹಾಕಲಾಗಿತ್ತು. ಹೀಗಾಗಿ ಬಿವೈ ವಿಜಯೇಂದ್ರ ಹಾಗೂ ಖಾತೆ ನಿರ್ವಹಣೆ ಮಾಡುವವರ ವಿರುದ್ದ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:47 pm, Fri, 21 June 24