ಸಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್ಸಿ ರವಿಕುಮಾರ್ಗೆ ಜಾಮೀನು
ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಹೇಳಿಕೆಗೆ ಭಾರೀ ಟೀಕೆಗೆ ಗುರಿಯಾಗಿದ್ದ ರವಿಕುಮಾರ್, ಮುಖ್ಯ ಕಾರ್ಯದರ್ಶಿಗೆ ಅಸಂಬದ್ಧ ಪದಗಳಿಂದ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಬೆಂಗಳೂರು, (ಜುಲೈ 09): ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ (BJP MLC N Ravikumar) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. 1 ಲಕ್ಷ ಬಾಂಡ್, ಒಬ್ಬರು ಶ್ಯೂರಿಟಿ ಒದಗಿಸಲು ಸೂಚನೆ ನೀಡಿದೆ. ಹಾಗೇ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಾಧಾರ ನಾಶಪಡಿಸದಂತೆ ರವಿಕುಮಾರ್ ಷರತ್ತು ಹಾಕಿದೆ.
ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಗೆ ಹೈಕೋರ್ಟ್ ಸಹ ರಿಲೀಫ್ ನೀಡಿತ್ತು. ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ (Karnataka High Court) ಜುಲೈ 8ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಹೊರಡಿಸಿತ್ತು. ಅಲ್ಲದೇ ತನಿಖೆಗೆ ಸಹಕರಿಸಲು ರವಿಕುಮಾರ್ ಗೆ ಕೋರ್ಟ್ ಖಡಕ್ ಸೂಚನೆಯನ್ನು ಸಹ ನೀಡಿತ್ತು. ರಾಜಕಾರಣಿಗಳು ಬಳಸು ಭಾಷೆ ಕೆಳಮಟ್ಟಕ್ಕಿಳಿದಿದೆ ಎಂದು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿತ್ತು.
ಇದನ್ನು ಓದಿ: ಸಿಎಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ: ಬಿಜೆಪಿ MLC ರವಿಕುಮಾರ್ಗೆ ತಾತ್ಕಾಲಿಕ ರಿಲೀಫ್
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೆ.ಪಿ.ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಎಂಬುವರು ನೀಡಿದ ದೂರಿನ ಮೇರೆಗೆ ಬಿಎನ್‌ಎಸ್ ಸೆಕ್ಷನ್ 351(3), 75(3), 79ರ ಅಡಿಯಲ್ಲಿ ಎಫ್ಐಆರ್ ಎಫ್ಐಆರ್ ದಾಖಲಾಗಿತ್ತು.
ಅಷ್ಟಕ್ಕೂ ರವಿಕುಮಾರ್ ವಿರುದ್ಧ ಆರೋಪವೇನು?
ಅಷ್ಟಕ್ಕೂ ಆಗಿದ್ದೇನಂದ್ರೆ ಜೂನ್ 30ರಂದು ಪ್ರತಿಭಟನೆ ವೇಳೆ ರವಿಕುಮಾರ್ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಗೆ ನಿಂದನೆ ಮಾಡಿದ್ದಾರೆ. ಪ್ರತಿಭಟನೆ ಬಳಿಕ ಸಿಎಸ್‌ಗೆ ದೂರು ಕೊಡಲು ಬಿಜೆಪಿ ನಿಯೋಗ ಹೋಗಿತ್ತು. ಈ ವೇಳೆ ಬಿಜೆಪಿ ನಿಯೋಗಕ್ಕೆ ಶಾಲಿನಿ ರಜನೀಶ್ ಸಿಗಲಿಲ್ಲ. ಶಾಲಿನಿ ರಜನೀಶ್ ಸಿಗದೇ ಇದ್ದಾಗ ಅಸಭ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:10 pm, Wed, 9 July 25