AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಲ್​​​ಸಿ ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್, ಬಂಧನದಿಂದ ಬಚಾವ್

ನೀಟ್ ಪರೀಕ್ಷೆ ಕುರಿತ ಪ್ರತಿಭಟನೆಗಳ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಇನ್ನೊಂದೆಡೆ ಕರ್ನಾಟಕ ಹೈಕೋರ್ಟ್, ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಎಂಎಲ್​​​ಸಿ ಸಿಟಿ  ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್, ಬಂಧನದಿಂದ ಬಚಾವ್
CT Ravi, High Court
ರಮೇಶ್​ ಎಮ್​.
| Edited By: |

Updated on: Jul 27, 2026 | 5:09 PM

Share

ಮುಖ್ಯಾಂಶಗಳು

  • ಎಂಎಲ್​ಸಿ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ಪೊಲೀಸರ ಎಫ್ಐಆರ್
  • ಜುಲೈ 31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
  • ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ

ಬೆಂಗಳೂರು, (ಜುಲೈ 27): ನೀಟ್ ಪ್ರತಿಭಟನೆ (NEET Protest) ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ (CT Ravi) ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣ ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಇನ್ನೊಂದಡೆ ಎಫ್ಐಆರ್ ಪ್ರಶ್ನಿಸಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), ಜುಲೈ 31ಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಸಂಖ್ಯೆ 149ಕ್ಕೆ ತಡೆ ನೀಡುವಂತೆ ಕೋರಿ ಸಿಟಿ ರವಿ ಪರ ವಕೀಲರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಿದ್ದಾರೆ. 3ನೇ ವ್ಯಕ್ತಿ ಈ ಕೇಸ್ ನಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಸಿಟಿ ರವಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ಇನ್ನು ನೋಟಿಸ್ ತಲುಪಿಲು ಹೋದ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ. ಕಾಂಗರೂ ಕೋರ್ಟ್ ನಂತೆ ವರ್ತಿಸಿದ್ದಾರೆಂದು ಎಸ್ ಪಿಪಿ ಬಿ.ಎನ್. ಜಗದೀಶ್ ಎಂದು ಪ್ರತಿವಾದ ಮಂಡಿಸಿದರು. ಈ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿದೆ. ಅಲ್ಲದೇ ಅಲ್ಲಿಯವರೆಗೂ ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ: ಮುಲ್ಲಾಗಳಿಗೆ ಎದೆ ಸೀಳಿದ್ರೆ 3 ಅಕ್ಷರ ಬರಲ್ಲ ಹೇಳಿಕೆ ಕೇಸ್: ಸಿಟಿ ರವಿ ನಿವಾಸಕ್ಕೆ ನೋಟಿಸ್​ ಅಂಟಿಸಿದ ಪೊಲೀಸ್

ಸಿಟಿ ರವಿ ಹೇಳಿದ್ದೇನು?

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ನಡೆದ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ್ದ ಸಿಟಿ ರವಿ, ‘ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಅವರು ಬಂದು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದರೆ ಅದರ ಅರ್ಥವೇನು? ಎಂದಿದ್ದು, ಇದು ಮುಸ್ಲಿಂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಜಾಮಿಯಾ ಮಸೀದಿ ಸಮಿತಿಯ ಅರ್ಧಯಕ್ಷರ ದೂರಿನ ಮೇರೆಗೆ ಕ್ರಮ

ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಈಗಾಗಲೇ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದಾರೆ. ಬಳಿಕ ಸಿ.ಟಿ. ರವಿ ಅವರ ನಿವಾಸಕ್ಕೂ ತನಿಖಾಧಿಕಾರಿ ಹಾಗೂ ನಗರ ಠಾಣೆ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ನೋಟಿಸ್ ಅಂಟಿಸಿದ್ದರು.

ಇದೀಗ ಈ ಎಫ್‌ಐಆರ್ ಪ್ರಕರಣವು ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ