ಅಮಿತ್ ಶಾ ಬಗ್ಗೆ ಅವಹೇಳನಕಾರಿ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

| Updated By: ಗಂಗಾಧರ​ ಬ. ಸಾಬೋಜಿ

Updated on: Mar 29, 2024 | 6:36 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಮತ್ತು  ನೀತಿ ಸಂಹಿತೆ ಇದ್ದರೂ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ರಾಜೀವ್ ಗಾಂಧಿ ಪ್ರತಿಮೆ ಮುಚ್ಚದ ಹಿನ್ನೆಲೆ ಚುನಾವಣಾ ಆಯೋಗಕ್ಕೆ ಬಿಜೆಪಿಯ ಎಂಎಲ್​ಸಿಗಳಾದ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಅಮಿತ್ ಶಾ ಬಗ್ಗೆ ಅವಹೇಳನಕಾರಿ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
ಯತೀಂದ್ರ ಸಿದ್ದರಾಮಯ್ಯ
Follow us on

ಬೆಂಗಳೂರು, ಮಾರ್ಚ್​​ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ಅವಹೇಳನಕಾರಿ ಹೇಳಿಕೆ ಮತ್ತು  ನೀತಿ ಸಂಹಿತೆ ಇದ್ದರೂ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ರಾಜೀವ್ ಗಾಂಧಿ ಪ್ರತಿಮೆ ಮುಚ್ಚದ ಹಿನ್ನೆಲೆ ಚುನಾವಣಾ ಆಯೋಗಕ್ಕೆ ಬಿಜೆಪಿಯ ಎಂಎಲ್​ಸಿಗಳಾದ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಡಾ.ಯತೀಂದ್ರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡುತ್ತೇವೆ: ಎನ್.ರವಿಕುಮಾರ್​

ದೂರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪರಿಷತ್​ನ ಬಿಜೆಪಿ ಸದಸ್ಯ ಎನ್.ರವಿಕುಮಾರ್​, ಅಮಿತ್ ಶಾ ವೈಯಕ್ತಿಕ ವಿಚಾರದ ಬಗ್ಗೆ ಯತೀಂದ್ರ ಹೇಳಿಕೆ ನೀಡಿದ್ದಾರೆ. ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಡಾ.ಯತೀಂದ್ರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದ ಯತೀಂದ್ರ ಸಿದ್ದರಾಮಯ್ಯ

ಕೃಷ್ಣಾ ನದಿ ಚೆಕ್​ಪೋಸ್ಟ್ ಬಳಿ ವಾಹನ ತಡೆದು ಸಾಮಗ್ರಿ ಸುಟ್ಟಿದ್ದಾರೆ. ಪಕ್ಷದ ಧ್ವಜ ಸೇರಿದಂತೆ ಬೇರೆ ವಸ್ತು ಸಾಗಿಸಲು ಅನುಮತಿ ಇತ್ತು. ಆದರೆ ಆ ಅಧಿಕಾರಿ ಕಾಂಗ್ರೆಸ್ ಬೆಂಬಲಿಗನಿರಬೇಕು, ಸುಟ್ಟು ಹಾಕಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಅವರನ್ನು ಗೂಂಡಾ ಎನ್ನುವ ಯತೀಂದ್ರ ಸಿದ್ದರಾಮಯ್ಯ ತಾನೇನಂತೆ? ಹೆಚ್ ಡಿ ಕುಮಾರಸ್ವಾಮಿ

ಅಮಿತ್ ಶಾ ಒಬ್ಬ ಗೂಂಡಾ ರೌಡಿ. ಅವರ ಮೇಲೆ ಕೊಲೆ ಆರೋಪವಿತ್ತು. ಅಂಥವರನ್ನ ಪಕ್ಕದಲ್ಲಿ ಇಟ್ಟುಕೊಂಡು ಮೋದಿ ರಾಜಕೀಯ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯರ ಪುತ್ರ, ಮಾಜಿ ಶಾಸಕ ಯತೀಂದ್ರ ಮಾಡಿದ ಗಂಭೀರ ಆರೋಪ ಮಾಡಿದ್ದರು. ಸದ್ಯ ಇದೇ ಮಾತಿಗೆ ಬಿಜೆಪಿ ನಾಯಕರನ್ನು ಕೆರಳಿಸಿದ್ದು, ಯತೀಂದ್ರ ವಿರುದ್ಧ ಕಿಡಿಕಾರಿದ್ದಾರೆ.

ಡಾ.ಯತೀಂದ್ರ ಆಕ್ಷೇಪಾರ್ಹ ಹೇಳಿಕೆಗೆ ಬಿಜೆಪಿ ಆಕ್ರೋಶ

ಯತೀಂದ್ರ ಸಿದ್ದರಾಮಯ್ಯಗೆ ಪ್ರಬುದ್ಧತೆ ಇಲ್ಲ ಅಂತಾ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಅಶ್ವತ್ಥ್ ನಾರಾಯಣ ಅಂತೂ ಕೂಡಲೇ ಕ್ಷಮೆ ಯಾಚಿಸಬೇಕು ಅಂತಾ ಆಗ್ರಹಿಸಿದ್ದರು. ಕೀಳು ಮಟ್ಟದ ಹೇಳಿಕೆ ಸರಿಯಲ್ಲ, ಅವರು ಡಾಕ್ಟರ್ ಅಂದ್ರು. ಮಾಜಿ ಸಚಿವ ಸಿ.ಟಿ.ರವಿ ಅಂತೂ ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು‌ ಹೀಗೆ ಮಾತನಾಡೋದು ಅಂತಾ ಕೌಂಟರ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:36 pm, Fri, 29 March 24