ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಕೇಸ್: ಸೂಲಿಬೆಲೆಗೆ ಜಾಮೀನು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಭಾಷಣ ಪ್ರಕರಣದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ರಾಯಚೂರಿನ 1ನೇ ಹೆಚ್ಚು ಸೆಷನ್ಸ್ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜನವರಿ 20ರಂದು ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಕೇಸ್: ಸೂಲಿಬೆಲೆಗೆ ಜಾಮೀನು
ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಕೇಸ್: ಸೂಲಿಬೆಲೆಗೆ ಜಾಮೀನು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 04, 2024 | 7:53 PM

ರಾಯಚೂರು, ಅಕ್ಟೋಬರ್​ 04: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ದ‌ ಅಪಮಾನಕರ ಭಾಷಣ ಪ್ರಕರಣಕ್ಕೆ ಸಂಬಂಧಿಸಂತೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದ ಹಿನ್ನೆಲೆ ರಾಯಚೂರಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಇಂದು ನಿರೀಕ್ಷಣಾ ಜಾಮೀನು ನೀಡಲಾಗಿದೆ.

18 ಜನವರಿ 2024 ರಂದು ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು. ಈ ವೇಳೆ ಭಾಷಣದಲ್ಲಿ ಕಲಬುರ್ಗಿ ಇಎಸ್‌ಐ ಆಸ್ಪತ್ರೆ ವಿಚಾರವಾಗಿ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಆರೋಪ ಮಾಡಲಾಗಿತ್ತು.

ಇದನ್ನೂ ಓದಿ: ಅ.28ರಂದು ಮುಡಾ ಕೇಸ್​​ಗೆ ಹೊಸ ರೂಪ: ಹೊಸ ಬಾಂಬ್ ಸಿಡಿಸಿದ ದೂರುದಾರ ಅಬ್ರಾಹಂ!

ಕಲಬುರ್ಗಿಯ ಕಾಂಗ್ರೆಸ್ ಮುಖಂಡ ನೀಡಿದ ದೂರು ಆಧರಿಸಿ ಜನವರಿ 20 ರಂದು ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆ ಮೂಲಕ ಎಫ್​ಐಆರ್​ನಲ್ಲಿ ಜಾತಿನಿಂದನೆ ಆರೋಪ ಮಾಡಲಾಗಿತ್ತು. ಆದರೆ ಕಲಬುರ್ಗಿ ಹೈಕೋರ್ಟ್ ಜಾತಿನಿಂದನೆ ಆರೋಪದ ಎಫ್‌ಐಆರ್ ರದ್ದುಗೊಳಿಸಿತ್ತು.

ಬಳಿಕ ಚಕ್ರವರ್ತಿ ಸೂಲಿಬೆಲೆ ಅಪಮಾನಕರ ಭಾಷಣ, ದ್ವೇಷ ಭಾಷಣ ಪ್ರಕರಣ ಎದುರಿಸುತ್ತಿದ್ದರು. ಈ ವಿಚಾರವಾಗಿ ಇಂದು ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಖರ್ಗೆ ಸಾಹೇಬರ ಕಾಲದಲ್ಲಿ ಇಎಸ್​ಐ ಆಸ್ಪತ್ರೆ ನಿರ್ಮಾಣ‌ ಮಾಡಲಾಗಿತ್ತು. ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್ ಕ್ಯಾಮರಾದಿಂದ ನೋಡಿದರೆ ಈ ಚಿತ್ರ ಕಾಣುತ್ತದೆ. ಮೊದಲ ಅಕ್ಷರ ಖ, ಎರಡನೇ ಅಕ್ಷರ ಗೆ, ಆ ಮೇಲೆ ಅರ್ಧ ಅಕ್ಷರ ಖರ್ಗೆ ಅಂತಾ. ಅವರು ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತಾ ಕಾಣಬೇಕು. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಬೇಕು ಅಂತಾ ಈ ರೀತಿ ಮಾಡಲಾಗಿದೆ. ಇದು ಅವರ ಸ್ವಂತ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ ಎಂದು ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:36 pm, Fri, 4 October 24

ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?