ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಸಮನ್ಸ್​​

ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ. ಹೇಳಿಕೆಗೆ ಸಂಬಂಧಿಸಿದಂತೆ ಆಗಸ್ಟ್​ 27 ರಂದು ವಿಚಾರಣೆಗೆ ಹಾಜಾರಗುವಂತೆ ಏಕದಸ್ಯ ಪೀಠ ಆದೇಶಿಸಿದೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಸಮನ್ಸ್​​
ಸಚಿವ ಸತೀಶ್ ಜಾರಕಿಹೊಳಿ
Follow us
Ramesha M
| Updated By: ವಿವೇಕ ಬಿರಾದಾರ

Updated on:Aug 09, 2024 | 2:40 PM

ಬೆಂಗಳೂರು, ಆಗಸ್ಟ್​ 09: ಹಿಂದೂ (Hindu) ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ (Summons) ನೀಡಿದೆ. ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್​ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

2022ರ ನವೆಂಬರ್​ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಮಾನವ ಬಂದುತ್ವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಸತೀಶ್​ ಜಾರಕಿಹೊಳಿ, ಹಿಂದೂ ಎಂಬ ಪದ ಎಲ್ಲಿಂದ ಬಂತು? ಇದು ನಮ್ಮ ಪದವಲ್ಲ ಪರ್ಷಿಯನ್​ನಿಂದ ಬಂದಿದ್ದು. ಭಾರಕ್ಕೂ ಪರ್ಷಿಯನ್​ಗೂ ಏನು ಸಂಬಂಧ? ಎಂದು ಹೇಳಿದ್ದರು.

ಇದನ್ನೂ ಓದಿ: ಅಪೆಕ್ಸ್ ಬ್ಯಾಂಕಲ್ಲಿ ಹಗರಣ ನಡೆದಿದ್ದರೆ ಸರ್ಕಾರ ಗಮನ ಹರಿಸುತ್ತದೆ: ಸತೀಶ್ ಜಾರಕಿಹೊಳಿ 

ಮುಂದುವರೆದು ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್​ ಪದ, ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಅವಹೇಳಕಾರಿ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಪಕ್ಷ ತಿರಸ್ಕರಿಸುತ್ತೆ: ಸುರ್ಜೇವಾಲಾ

ಜಾರಕಿಹೊಳಿಯವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ರಾಜ್ಯ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್ ಸುರ್ಜೇವಾಲಾ ಖಂಡಿಸಿದ್ದರು. ಸತೀಶ್​ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ, ಇದನ್ನು ಪಕ್ಷ ತಿರಸ್ಕರಿಸುತ್ತದೆ ಎಂದು ಸುರ್ಜೇವಾಲಾ ಹೇಳಿದ್ದರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:49 pm, Fri, 9 August 24

ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
Video: ಹೆದ್ದಾರಿಯಲ್ಲಿ ವಾಹನಗಳ ಮೇಲೆ ಅಪ್ಪಳಿಸಿದ ವಿಮಾನ
Video: ಹೆದ್ದಾರಿಯಲ್ಲಿ ವಾಹನಗಳ ಮೇಲೆ ಅಪ್ಪಳಿಸಿದ ವಿಮಾನ
ಅಪಘಾತದ ಬಳಿಕ ಬ್ಯಾಗ್​ ಎತ್ತಿಕೊಂಡು ಕಿಟಕಿಯಿಂದ ಓಡಿ ಹೋದ ಡ್ರೈವರ್
ಅಪಘಾತದ ಬಳಿಕ ಬ್ಯಾಗ್​ ಎತ್ತಿಕೊಂಡು ಕಿಟಕಿಯಿಂದ ಓಡಿ ಹೋದ ಡ್ರೈವರ್