RSS ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ: ಸಿದ್ದರಾಮಯ್ಯ ವಿರುದ್ಧದ ಮರುಪರಿಶೀಲನಾ ಅರ್ಜಿ‌ ವಜಾ

ಆರ್​ಎಸ್​ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್​ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇನ್ನೊಂದು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಮರುಪರಿಶೀಲನಾ ಅರ್ಜಿ‌ ವಜಾಗೊಂಡಿದೆ.

RSS ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ:  ಸಿದ್ದರಾಮಯ್ಯ ವಿರುದ್ಧದ ಮರುಪರಿಶೀಲನಾ ಅರ್ಜಿ‌ ವಜಾ
Siddaramaiah
Edited By:

Updated on: Aug 29, 2026 | 8:44 PM

ಬೆಂಗಳೂರು, (ಆಗಸ್ಟ್ 29): ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್​​ ಎಸ್​ ಮತ್ತು ಬಜರಂಗದಳದಿಂದ ಎಂದು ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದ ಸಿಎಂ ಸಿದ್ದರಾಮಯ್ಯ  (Siddaramaiah)ವಿರುದ್ಧದ ಮರುಪರಿಶೀಲನಾ ಅರ್ಜಿ‌ ವಜಾಗೊಂಡಿದೆ. ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಜಾ ಮಾಡಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಹ ಎಸಿಜೆಎಂ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು,ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಮರುಪರಿಶೀಲನಾ ಅರ್ಜಿ‌ಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್​​ ಎಸ್​ ಮತ್ತು ಬಜರಂಗದಳದಿಂದ ಎಂದು ಹೇಳಿ ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಎನ್ನುವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್​ ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಆದ್ರೆ, ಕೋರ್ಟ್, ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಕೋರ್ಟ್ ಅವಕಾಶ ನೀಡಿ ಬಿಎನ್ ಎಸ್ಎಸ್ ಸೆಕ್ಷನ್ 223 ಅಡಿಯಲ್ಲಿ ನೋಟಿಸ್ ನೀಡಿತ್ತು. ಬಳಿಕ ಸಿದ್ದರಾಮಯ್ಯನವರ ಪರ ವಕೀಲರ ವಾದ ಆಲಿಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಖಾಸಗಿ ದೂರನ್ನು ಮಾಡಿತ್ತು. ಆದ್ರೆ, ಇದನ್ನು ಮರು ಪರಿಶೀಲನೆ ಮಾಡಬೇಕೆಂದು ಕಿರಣ್ ಮನವಿ ಮಾಡಿದ್ದರು.

ಇದನ್ನೂ ಓದಿ: RSS, ಬಜರಂಗದಳ ವಿರುದ್ಧ ಟೀಕೆ: ಸಿದ್ದರಾಮಯ್ಯಗೆ ನೋಟಿಸ್ ನೀಡಿದ ಕೋರ್ಟ್!

ಇದನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ  ಸಿದ್ದರಾಮಯ್ಯ ಪರ ಹಿರಿಯ ವಕೀಲ‌ವಿಕ್ರಮ್ ಹುಯಿಲಗೋಳ್, ಸದನದಲ್ಲಿ ನೀಡಿದ ಹೇಳಿಕೆಗೆ ಸಂವಿಧಾನದ 194 (2) ನೇ ವಿಧಿಯ ರಕ್ಷಣೆಯಿದೆ ಎಂದು ವಾದಿಸಿದ್ದರು. ಇದನ್ನು ಆಲಿಸಿದ ಜನಪ್ರತಿನಿಧಿಗಳ ಕೋರ್ಟ್,  ಕಿರಣ್ ಅವರ ಮರು ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಆದೇಶವನ್ನು ಎತ್ತಿ ಹಿಡಿದೆ.

ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್​​ ಎಸ್​​ ಎಸ್​ ಹಾಗೂ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರು. ಇದಕ್ಕೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ತೀವ್ರವಾಗಿ ಖಂಡಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us