ಲಾಕ್​ಡೌನ್​ ಜಾರಿಯಿರುವ 11 ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಎಷ್ಟಿದೆ?

ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಕಾರಣ ಲಾಕ್​ಡೌನ್​ ಮುಂದುವರೆದಿದೆ. ಹನ್ನೊಂದು ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ನ ಗಮನಿಸಿದಾಗ ಇದೀಗ ಕೆಲವು ಕಡೆ ಶೇ.5ಕ್ಕೆ ಬಂದಿದ್ದು, ಅಲ್ಲಿಯೂ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭವಾಗುವ ನಿರೀಕ್ಷೆಯಿದೆ.

ಲಾಕ್​ಡೌನ್​ ಜಾರಿಯಿರುವ 11 ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9kannada Web Team

| Edited By: sandhya thejappa

Jun 19, 2021 | 12:36 PM

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ವಿಧಿಸಿದೆ. ಸದ್ಯ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ಕೆಲವೆಡೆ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಿದೆ. ಆದರೆ ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಕಾರಣ ಲಾಕ್​ಡೌನ್​ ಮುಂದುವರೆದಿದೆ. ಹನ್ನೊಂದು ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ನ ಗಮನಿಸಿದಾಗ ಇದೀಗ ಕೆಲವು ಕಡೆ ಶೇ.5ಕ್ಕೆ ಬಂದಿದ್ದು, ಅಲ್ಲಿಯೂ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭವಾಗುವ ನಿರೀಕ್ಷೆಯಿದೆ.

ಮಂಡ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.4.33ರಷ್ಟಿದ್ದು, 2,989 ಸಕ್ರಿಯ ಪ್ರಕರಣಳಿವೆ. ಮೈಸೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.5, 6,243 ಸಕ್ರಿಯ ಪ್ರಕರಣಗಳು ಇವೆ. ಹಾಸನದಲ್ಲಿ ಪಾಸಿಟಿವಿಟಿ ರೇಟ್ ಶೇ. 7.76ರಷ್ಟಿದ್ದರೆ, 5,733 ಸಕ್ರಿಯ ಪ್ರಕರಣಗಳಿವೆ. ಶಿವಮೊಗ್ಗದಲ್ಲಿ ಪಾಸಿಟಿವಿಟಿ ರೇಟ್ ಶೇ.4.7ರಷ್ಟಿದ್ದು, 3,595 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿಯಲ್ಲಿ ಶೇ.4.05 ರಷ್ಟು ಪಾಸಿಟಿವಿಟಿ ರೇಟ್ ಇದ್ದರೆ, ಸಕ್ರಿಯ ಪ್ರಕರಣಗಳು 3,306 ಇವೆ.

ಇನ್ನು ಕೊಡಗು ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು 1,451 ಇದ್ದು, ಪಾಸಿಟಿವಿಟಿ ರೇಟ್ ಶೇ.9.05 ಇದೆ. ಚಿಕ್ಕಮಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.5.4ರಷ್ಟಿದ್ದು, ಸಕ್ರಿಯ ಪ್ರಕರಣಗಳು 2,926 ಇದೆ. ದಕ್ಷಿಣ ಕನ್ನಡದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ. 10.07ರಷ್ಟಿದ್ದು, ಸಕ್ರಿಯ ಪ್ರಕರಣಗಳು 6,931 ಇರುವುದು ತಿಳಿದುಬಂದಿದೆ. ದಾವಣಗೆರೆಯಲ್ಲಿ ಶೇ.5.19 ರಷ್ಟು ಪಾಸಿಟಿವಿಟಿ ರೇಟ್ ಇದ್ದರೆ, ಸಕ್ರಿಯ ಪ್ರಕರಣಗಳು 2,584 ಇದೆ. ಚಾಮರಾಜನಗರದಲ್ಲಿ ಶೇಕಡಾ 6.30ರಷ್ಟು ಪಾಸಿಟಿವಿಟಿ ರೇಟ್, 918 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.7.8ರಷ್ಟು ಪಾಸಿಟಿವಿಟಿ ರೇಟ್ ಇದ್ದರೆ, 3,381 ಸಕ್ರಿಯ ಪ್ರಕರಣಗಳು ಇರುವುದು ತಿಳಿದುಬಂದಿದೆ.

ಸಭೆಯಲ್ಲಿ ಅಂತಿಮವಾಗಿ ನಿರ್ಧಾರ ಲಾಕ್​ಡೌನ್​ ತೆರವಿನ ಬಗ್ಗೆ ಸಿಎಂ ಚಿಂತನೆ ನಡೆಸಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಅಂತಿಮವಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಅನ್​ಲಾಕ್​ ಬಗ್ಗೆ ಸಿಎಂ ಈಗಾಗಲೇ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಲಾಕ್​ಡೌನ್​ ಜಾರಿಯಲ್ಲಿರುವ 11 ಜಿಲ್ಲೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಲಾಕ್ ಆಗಿರುವ ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ ಕಡಿಮೆ ಬಗ್ಗೆ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ ಇವತ್ತು ಸಿಎಂ ನಿರ್ಧಾರ ಮಾಡುತ್ತಾರೆ. ಜನರ ಸುರಕ್ಷತೆಯ ಜೊತೆಗೆ ಜನರ ಜೀವನ ಮುಖ್ಯ. ಈ ನಿಟ್ಟಿನಲ್ಲಿ ಎಲ್ಲಾವನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಶ್ವತ್ಥ್ ನಾರಾಯಣ ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಜನಸಾಮಾನ್ಯರ ಜೀವನ ಸಹಜ ಸ್ಥಿತಿಗೆ ತರಬೇಕಿದೆ, ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ: ಗೌರವ್ ಗುಪ್ತಾ

Rain Effect: ಮುಂಬೈ ಕರ್ನಾಟಕದಲ್ಲಿ ಭಾರೀ ಮಳೆ; ನದಿಗಳು ತುಂಬಿ ರಸ್ತೆ ಜಲಾವೃತ

(Details about Corona Positivity Rate In various districts)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada