AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ವೇಳೆ ಈವರೆಗೆ 3 ಶಿಕ್ಷಕರ ಸಾವು ಎಂದ ಸಿಎಂ: ಮೃತರು ಯಾರು? ಏನಾಯ್ತು? ಮಾಹಿತಿ ಇಲ್ಲಿದೆ

ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಹಿನ್ನಲೆ ಗಣತಿಗೆ ನಿಯೋಜನೆಗೊಂಡಿದ್ದ 1 ಲಕ್ಷದ 20 ಸಾವಿರ ಶಿಕ್ಷಕರ ಪೈಕಿ ಮೂವರು ಬೇರೆ ಬೇರೆ ಕಾರಣಗಳಿಂದಾಗಿ ಮೃತ ಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡೋದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಷ್ಟಕ್ಕೂ ಮೃತಪಟ್ಟಿರುವ ಆ ಶಿಕ್ಷಕರು ಯಾರು? ಯಾವ ಕಾರಣದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಜಾತಿ ಗಣತಿ ವೇಳೆ ಈವರೆಗೆ 3 ಶಿಕ್ಷಕರ ಸಾವು ಎಂದ ಸಿಎಂ: ಮೃತರು ಯಾರು? ಏನಾಯ್ತು? ಮಾಹಿತಿ ಇಲ್ಲಿದೆ
ಮೃತ ಶಿಕ್ಷಕರು
ಪ್ರಸನ್ನ ಹೆಗಡೆ
|

Updated on:Oct 07, 2025 | 7:47 PM

Share

ಬೆಂಗಳೂರು, ಅಕ್ಟೋಬರ್​ 07: ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಹಿನ್ನಲೆ ಗಣತಿಗೆ ನಿಯೋಜನೆಗೊಂಡಿರುವ ಶಿಕ್ಷಕರು ಹತ್ತಾರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ.  ಬೇರೆ ಬೇರೆ ಕಾರಣಗಳಿಂದಾಗಿ ಸಮೀಕ್ಷೆಗೆ ತೆರಳಿದ್ದ ಕೆಲ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದರೆ, ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ಈ ಬಗ್ಗೆ ಇಂದು ಸ್ವತಃ ಸಿಎಂ ಸಿದ್ದರಾಮಯ್ಯನವರೇ (Siddaramaiah) ಅಧಿಕೃತ ಮಾಹಿತಿ ಕೊಟ್ಟಿದ್ದಾರೆ. ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಗಣತಿಗೆ ನಿಯೋಜಿಸಲ್ಪಟ್ಟಿದ್ದ ಶಿಕ್ಷಕರ ಪೈಕಿ ಮೂವರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡೋದಾಗಿ ಹೇಳಿದ್ದಾರೆ.

ಸಿಎಂ ಹೇಳಿರುವ ಆ ಮೂವರು ಮೃತ ಶಿಕ್ಷಕರು ಯಾರು? ಯಾವ ಕಾರಣದಿಂದಾಗಿ ಅವರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

ಇದನ್ನೂ ಓದಿ:  ಕುರುಬರನ್ನ ಎಸ್​​ಟಿಗೆ ಸೇರ್ಪಡೆಗೆ ಉಗ್ರಪ್ಪ ಉಗ್ರಾವತಾರ, ಎಲ್ಲಾ ಗೊಂದಲಗೆ ತೆರೆ ಎಳೆದ ಸಿಎಂ

1. ದಾನಮ್ಮ ಯಡಹಳ್ಳಿ

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ & ಶೈಕ್ಷಣಿಕ ಸಮೀಕ್ಷೆ ಮುಗಿಸಿ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಬೈಕಿನಿಂದ ಬಿದ್ದು ಶಿಕ್ಷಕಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಬೋಡನಾಯಕನದಿನ್ನಿ ಕ್ರಾಸ್​​​ ಬಳಿ ನಡೆದಿತ್ತು. ಅಪಘಾತದಲ್ಲಿ ರಾಂಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದದಾನಮ್ಮ ಯಡಹಳ್ಳಿ(51) ಸಾವನ್ನಪ್ಪಿದ್ದರು. ಸೀತಿಮನಿ ಗ್ರಾಮದಲ್ಲಿ ಸಮೀಕ್ಷೆ ಮುಗಿಸಿ ಮಗನ ಜೊತೆ ಬರುವಾಗ ಬೈಕ್​ ನಿಯಂತ್ರಣ ತಪ್ಪಿ ಅಪಘಾತ ನಡೆದಿತ್ತು. ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದ ಕಾರಣ ದಾನಮ್ಮ ಸಾವನ್ನಪ್ಪಿದ್ದರು.

2. ರಾಮಕೃಷ್ಣಪ್ಪ

ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಜಾತಿ ಗಣತಿ ಮಾಡುವಾಗಲೇ ಹೃದಯಾಘಾತದಿಂದ ರಾಮಕೃಷ್ಣಪ್ಪ(57) ಮೃತಪಟ್ಟಿದ್ದರು. ಚಿಂತಾಮಣಿ ತಾಲ್ಲೂಕಿನ ಬೂರಗಮಾಕಲಹಳ್ಳಿ ಗ್ರಾಮದ ನಿವಾಸಿಯಾಗಿರುವ ರಾಮಕೃಷ್ಣಪ್ಪ , ದಿಗವಕೋಟೆ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಾತಿ ಗಣತಿಯ ಕೆಲಸದಲ್ಲಿ ತೊಡಗಿದ್ದ ವೇಳೆ ಅವರಿಗೆ ದಿಢೀರ್ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಮುರಗಮಲ್ಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆದರೆ, ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿ ನಗರದ ಡೆಕನ್ ಆಸ್ಪತ್ರೆಗೆ ರವಾನಿಸಲಾಗಿಯ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ರಾಮಕೃಷ್ಣಪ್ಪ ಅವರು ಕೊನೆಯುಸಿರೆಳೆದಿದ್ದಾರೆ.

3. ಒಟ್ಟು ಮೂವರು ಶಿಕ್ಷಕರು ಗಣತಿ ವೇಳೆ ಸತ್ತಿದ್ದಾರೆಂದು ಸಿಎಂ ಹೇಳಿದ್ದರೂ ಈವರೆಗೆ ಸ್ಪಷ್ಟ ಮಾಹಿತಿ ಲಭ್ಯವಾಗಿರೋದು ಇಬ್ಬರ ಬಗ್ಗೆ ಮಾತ್ರ. ಮೂರನೆಯವರು ಯಾರು ಎಂಬ ಬಗ್ಗೆ ಒಂದಿಷ್ಟು ಗೊಂದಲಗಳಿವೆ ಎನ್ನಲಾಗಿದೆ.

ಇವಿಷ್ಟೇ ಅಲ್ಲದೆ ಜಾತಿಗಣತಿಗೆ ತೆರಳಿದ್ದ ಶಿಕ್ಷಕನಿಗೆ ಹೃದಯಾಘಾತವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶಿಕ್ಷಕ ಪ್ರಕಾಶ್ ನಾಯಕ್ (44)ಗೆ ಹೃದಯಾಘಾತವಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ದಾವಣಗೆರೆ ನಗರದ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿ ಸ್ಟೆಂಟ್ ಅಳವಡಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕ ಪ್ರಕಾಶ್ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮತ್ತೊಂದೆಡೆ ಸಮೀಕ್ಷೆಗೆ ತೆರಳುವ ಗಣತಿದಾರರ ಮೆಲೆ ನಾಯಿಗಳ ದಾಳಿ ಬಗ್ಗೆ ಮೇಲಿಂದ ಮೇಲೆ ವರದಿಯಾಗುತ್ತಿದೆ. ಬೇಲೂರಿನ ನೆಹರು ನಗರದಲ್ಲಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಮೇಲೆ 10 ನಾಯಿಗಳು ದಾಳಿ ನಡೆಸಿದ್ದು, ಆಕೆಯನ್ನು ರಕ್ಷಿಸಲು ಹೋದ ಪತಿ ಸೇರಿ ಇತರ 7 ಜನರ ಮೇಲೆಯೂ ಅಟ್ಯಾಕ್​ ಮಾಡಿದ್ದವು. ಚಿಕ್ಕಬಳ್ಳಾಪುರದಲ್ಲೂ ಗಣತಿಗೆ ಹೋದ ವೇಳೆ ಮನೆಯ ಸಾಕು ನಾಯಿ ದಾಳಿ ನಡೆಸಿರುವ ಬಗ್ಗೆ ವರದಿಯಾಗಿತ್ತು. ಇವಿಷ್ಟೇ ಅಲ್ಲದೆ ಸಮೀಕ್ಷೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡ ಬಂದ ಪರಿಣಾಮ ಬಿದ್ದು ಶಿಕ್ಷಕಿ ಗಂಭೀರ ಗಾಯಗೊಂಡ ಘಟನೆ ಹೊಳೆನರಸೀಪುರ ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:46 pm, Tue, 7 October 25

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ