AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಕಾರು ಅಪಘಾತ

ದೇವದುರ್ಗ ಕ್ಷೇತ್ರದ ಜೆಡಿಎಸ್ MLA ಕರೆಮ್ಮಾ ನಾಯಕ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿಯಾಗಿದ್ದು, ದೇವದುರ್ಗದಿಂದ ಹುಬ್ಬಳ್ಳಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಕರೆಮ್ಮಾ ನಾಯಕ್ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಕಾರು ಅಪಘಾತ
ಕಾರು ಅಪಘಾತ
ಭೀಮೇಶ್​​ ಪೂಜಾರ್
| Edited By: |

Updated on: Oct 12, 2025 | 11:21 AM

Share

ರಾಯಚೂರು, ಅಕ್ಟೋಬರ್​ 12: ಲಿಂಗಸುಗೂರು ತಾಲೂಕಿನ ಗೊಲಪಲ್ಲಿ ಗ್ರಾಮದ ಬಳಿ ದೇವದುರ್ಗ ಕ್ಷೇತ್ರದ ಜೆಡಿಎಸ್  ಶಾಸಕಿ ಕರೆಮ್ಮಾ ನಾಯಕ್ (Karemma Nayak) ಕಾರು ಅಪಘಾತವಾಗಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ ನಾಯಕ್​ ಗೆ ಸಣ್ಣಪುಟ್ಟ ಗಾಯಗಳಾಗಿವೆ. ದೇವದುರ್ಗದಿಂದ ಹುಬ್ಬಳ್ಳಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಾಸಕಿ ತೆರಳಿದ್ದಾರೆ.

ಹುಬ್ಬಳ್ಳಿಗೆ ಶಾಸಕರು ತೆರಳುತ್ತಿದ್ದ ವೇಳೆ ಕಾರಿನ ಮುಂಬದಿ ಇದ್ದ ಮತ್ತೊಂದು ಕಾರಿಗೆ ನಾಯಿ ಅಡ್ಡ ಬಂದಿದೆ. ಈ ವೇಳೆ ನಾಯಿ ತಪ್ಪಿಸಲು ಕಾರಿನ ಚಾಲಕ ಯತ್ನಿಸಿದ್ದು, ರಸ್ತೆ ಪಕ್ಕದ ಗುಡ್ಡಕ್ಕೆ ಕಾರು ಡಿಕ್ಕಿಯಾಗಿದೆ. ಹಿಂದೆಯೇ ಶಾಸಕರಿದ್ದ ಕಾರು ಕೂಡ ನಿಯಂತ್ರಣ ಕಳೆದುಕೊಂಡು ಅಪಘಾತ ನಡೆದಿದೆ. ಘಟನೆಯಲ್ಲಿ ಜಖಂಗೊಂಡಿರುವ ಎರಡು ಕಾರುಗಳು ಕೂಡ ಕರೆಮ್ಮಾ ನಾಯಕ್ ಅವರಿಗೆ ಸೇರಿದ್ದು ಎನ್ನಲಾಗಿದ್ದು, ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮನೆಗೆ ನುಗ್ಗಿದ ದರೋಡೆಕೋರರ ಜೊತೆ ಹೋರಾಡಿದ ಚನ್ನಗಿರಿ ಮಹಿಳೆ

ಫ್ಲೆಕ್ಸ್​ ಹರಿದ ಕಿಡಿಗೇಡಿಗಳ ಬಂಧನ

ದಾವಣಗೆರೆ ನಗರದ ಬೇತೂರು ರಸ್ತೆಯ ಅರಳಿಮರ ಸರ್ಕಲ್‌ ನಲ್ಲಿ ದಸರಾ ಶೋಭಾಯಾತ್ರೆ ಹಿನ್ನಲೆ ಹಾಕಲಾಗಿದ್ದ ಫ್ಲೆಕ್ಸ್​ ಹರಿದ ಪ್ರಕರಣ ಸಂಬಂಧ 5 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಮುಕ್ತಿಯಾರ್, ಅಬೀದ್, ಆತಿಕ್, ಸಾಧಿಕ್, ಅಮಾನುಲ್ಲಾ ಬಂಧಿತ ಆರೋಪಿಗಳು. ಚಾಮುಂಡೇಶ್ವರಿ, ಆಂಜನೇಯ ಹಾಗೂ ಶ್ರೀರಾಮನ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಅಕ್ಟೋಬರ್ 2ರ ರಾತ್ರಿ ವೇಳೆ ಕಿಡಿಕೇಡಿಗಳು ಬ್ಲೇಡ್​ ಹಾಕಿದ್ದರು. ಘಟನೆಯಿಂದ ಕೋಮು ಭಾವನೆಗೆ ಧಕ್ಕೆ ಯತ್ನ ಹಿನ್ನಲೆ, ಈ ಸಂಬಂಧ ಆಜಾದ್ ನಗರ ಠಾಣೆಯ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್