
ರಾಯಚೂರು, ಅಕ್ಟೋಬರ್ 12: ಲಿಂಗಸುಗೂರು ತಾಲೂಕಿನ ಗೊಲಪಲ್ಲಿ ಗ್ರಾಮದ ಬಳಿ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ (Karemma Nayak) ಕಾರು ಅಪಘಾತವಾಗಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ ನಾಯಕ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ದೇವದುರ್ಗದಿಂದ ಹುಬ್ಬಳ್ಳಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಾಸಕಿ ತೆರಳಿದ್ದಾರೆ.
ಹುಬ್ಬಳ್ಳಿಗೆ ಶಾಸಕರು ತೆರಳುತ್ತಿದ್ದ ವೇಳೆ ಕಾರಿನ ಮುಂಬದಿ ಇದ್ದ ಮತ್ತೊಂದು ಕಾರಿಗೆ ನಾಯಿ ಅಡ್ಡ ಬಂದಿದೆ. ಈ ವೇಳೆ ನಾಯಿ ತಪ್ಪಿಸಲು ಕಾರಿನ ಚಾಲಕ ಯತ್ನಿಸಿದ್ದು, ರಸ್ತೆ ಪಕ್ಕದ ಗುಡ್ಡಕ್ಕೆ ಕಾರು ಡಿಕ್ಕಿಯಾಗಿದೆ. ಹಿಂದೆಯೇ ಶಾಸಕರಿದ್ದ ಕಾರು ಕೂಡ ನಿಯಂತ್ರಣ ಕಳೆದುಕೊಂಡು ಅಪಘಾತ ನಡೆದಿದೆ. ಘಟನೆಯಲ್ಲಿ ಜಖಂಗೊಂಡಿರುವ ಎರಡು ಕಾರುಗಳು ಕೂಡ ಕರೆಮ್ಮಾ ನಾಯಕ್ ಅವರಿಗೆ ಸೇರಿದ್ದು ಎನ್ನಲಾಗಿದ್ದು, ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಮನೆಗೆ ನುಗ್ಗಿದ ದರೋಡೆಕೋರರ ಜೊತೆ ಹೋರಾಡಿದ ಚನ್ನಗಿರಿ ಮಹಿಳೆ
ದಾವಣಗೆರೆ ನಗರದ ಬೇತೂರು ರಸ್ತೆಯ ಅರಳಿಮರ ಸರ್ಕಲ್ ನಲ್ಲಿ ದಸರಾ ಶೋಭಾಯಾತ್ರೆ ಹಿನ್ನಲೆ ಹಾಕಲಾಗಿದ್ದ ಫ್ಲೆಕ್ಸ್ ಹರಿದ ಪ್ರಕರಣ ಸಂಬಂಧ 5 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಮುಕ್ತಿಯಾರ್, ಅಬೀದ್, ಆತಿಕ್, ಸಾಧಿಕ್, ಅಮಾನುಲ್ಲಾ ಬಂಧಿತ ಆರೋಪಿಗಳು. ಚಾಮುಂಡೇಶ್ವರಿ, ಆಂಜನೇಯ ಹಾಗೂ ಶ್ರೀರಾಮನ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಅಕ್ಟೋಬರ್ 2ರ ರಾತ್ರಿ ವೇಳೆ ಕಿಡಿಕೇಡಿಗಳು ಬ್ಲೇಡ್ ಹಾಕಿದ್ದರು. ಘಟನೆಯಿಂದ ಕೋಮು ಭಾವನೆಗೆ ಧಕ್ಕೆ ಯತ್ನ ಹಿನ್ನಲೆ, ಈ ಸಂಬಂಧ ಆಜಾದ್ ನಗರ ಠಾಣೆಯ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.